ದೊಡ್ಡಬಳ್ಳಾಪುರ; ಮತ್ತೆ ಮುಂದುವರೆದ ಬಸ್ ಸಮಸ್ಯೆ ವಿದ್ಯಾರ್ಥಿಗಳ ಪರದಾಟ, ಶಾಲಾ ಕಾಲೇಜುಗಳಿಗೆ ಹೋಗಲು ಬಸ್ ಗಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳು ಸಾರಿಗೆ ಬಸ್ ಗಳು ಸಮಯಕ್ಕೆ ಅರಿಯಾಗಿ ಬಾರದ ಹಿನ್ನೆಲೆ ವಿದ್ಯಾರ್ಥಿಗಳು ಬಸ್ ತಡೆದು ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ನಡೆಸಿದ್ದಾರೆ.
ತಾಲ್ಲೂಕಿನ ಉಜ್ಜಿನಿ ಹೊಸಹಳ್ಳಿ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ, ಪ್ರತಿನಿತ್ಯ ಬೆಳಗ್ಗೆ 8 ಗಂಟೆಗೆ ಉಜ್ಜಿನಿ ನಿಲ್ದಾಣಕ್ಕೆ ಬರಬೇಕಾಗಿದ್ದ ಬಸ್ ಇಂದು 9ಗಂಟೆಗೆ ಬಂದಿದ್ದು ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.
ಉಜ್ಜಿನಿ ಮಾರ್ಗವಾಗಿ ದೊಡ್ಡಬಳ್ಳಾಪುರಕ್ಕೆ ತೆರಳುವ ಬಸ್ ನಿತ್ಯ 8ಗಂಟೆಗೆ ಬರಬೇಕಾಗಿತ್ತು ಆದರೇ 9ಗಂಟೆಗೆ ಬಂದ ಕಾರಣ ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ಶಾಲೆ, ಕಾಲೇಜುಗಳಿಗೆ ತಡವಾಗಿ ಹೋಗುತ್ತಿದ್ದಾರೆ ಇದರಿಂದ ಶಿಕ್ಷಕರು ಮತ್ತು ಪ್ರಾಂಶುಪಾರಿಂದ ನಿತ್ಯ ಬೈಗುಳ ತಿನ್ನಬೇಕಾಗುತ್ತಿದೆ. ಈ ಮಾರ್ಗದಿಂದ ಸುಮಾರು ಮೂರು ಬಸ್ ಗಳಷ್ಟು ವಿದ್ಯಾರ್ಥಿಗಳು ದೊಡ್ಡಬಳ್ಳಾಪುರಕ್ಕೆ ಬೇರೆ ಬೇರೆ ಶಾಲಾಕಾಲೇಜುಗಳಿಗೆ ತೆರಳುತ್ತಿದ್ದಾರೆ. ನಿತ್ಯ ಇದೇ ರೀತಿಯಾದರೆ ಹೇಗೆ ಎಂದು ವಿದ್ಯಾರ್ಥಿಗಳು ಪೋಷಕರು ರೊಚ್ಚಿಗೆದ್ದು ಬಸ್ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ ಸ್ಥಳಕ್ಕೆ ಡಿಪೋ ಮ್ಯಾನೇಜರ್ ಬರಬೇಕು ಸರಿಯಾದ ಸಮಯಕ್ಕೆ ಬಸ್ ಬಿಡುವ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಪಟ್ಟು ಹಿಡಿದಿದ್ದಾರೆ.