Saturday, July 11, 2026
Home ಬೆಂಗಳೂರು ಗ್ರಾಮಾಂತರಪರಿಸರ ಸಂರಕ್ಷಣೆ ನಮ್ಮ ಜೀವನದ ಅವಿಭಾಜ್ಯ ಅಂಗ: ಪೌಜಿಯಾ ತರನ್ನುಮ್

ಪರಿಸರ ಸಂರಕ್ಷಣೆ ನಮ್ಮ ಜೀವನದ ಅವಿಭಾಜ್ಯ ಅಂಗ: ಪೌಜಿಯಾ ತರನ್ನುಮ್

by Dharmaraju
0 comments

ಬೆಂ.ಗ್ರಾ.ಜಿಲ್ಲೆ: ನಮ್ಮ ಪರಿಸರವನ್ನು ಸಂರಕ್ಷಿಸುವುದು ಮತ್ತು ಸ್ವಚ್ಛವಾಗಿಡುವುದು ಕೇವಲ ಒಂದು ದಿನದ ಕೆಲಸವಲ್ಲ. ನಮ್ಮ ಜೀವನದ ಅವಿಭಾಜ್ಯ ಅಂಗವಾಗಿದೆ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಆಯುಕ್ತೆ ಬಿ. ಪೌಜಿಯಾ ತರನ್ನುಮ್ ಅವರು ಹೇಳಿದರು.

ದೇವನಹಳ್ಳಿ ತಾಲ್ಲೂಕಿನ ಕುಂದಾಣ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರತಿಯೊಬ್ಬರು ಪರಿಸರ ಸ್ನೇಹಿ ಅಭ್ಯಾಸಗಳನ್ನು ಅಳವಡಿಸಿಕೊಂಡು ಸ್ವಚ್ಛ ಮತ್ತು ಸಮೃದ್ಧ ಪರಿಸರ ನಿರ್ಮಾಣಕ್ಕೆ ಕೈಜೋಡಿಸುವ ಮೂಲಕ ಅರ್ಥಪೂರ್ಣವಾಗಿ ಪರಿಸರ ದಿನಾಚರಣೆಯನ್ನು ಆಚರಿಸೋಣ ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ ಸಿಇಒ ಡಾ. ವಾಸಂತಿ ಅಮರ್ ಅವರು ಮಾತನಾಡಿ, ಈ ಬಾರಿ “ಪ್ರಕೃತಿಯಿಂದ ಪ್ರೇರಣೆ, ಹವಾಮಾನಕ್ಕಾಗಿ, ನಮ್ಮ ಭವಿಷ್ಯಕ್ಕಾಗಿ.” ಎಂಬ ಘೋಷ ವಾಕ್ಯದೊಂದಿಗೆ ಹವಾಮಾನ ಬದಲಾವಣೆಯ ವಿರುದ್ಧದ ಹೋರಾಟಕ್ಕೆ ಅತ್ಯುತ್ತಮ ಪರಿಹಾರಗಳನ್ನು ನೀಡುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶಿವಕುಮಾರ್, ಯೋಜನಾಧಿಕಾರಿ ವಿಠಲ್ ಕಾವ್ಳೆ, ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ತಾಲೂಕು ಪಂಚಾಯಿತಿ ಇಒ ಎನ್. ಮುನಿರಾಜು, ಮಾಜಿ ಸದಸ್ಯರಾದ ಕೆ.ವಿ.ಸ್ವಾಮಿ, ಕ್ಯಾತೇಗೌಡ, ವಿ.ನಾರಾಯಣಸ್ವಾಮಿ, ಅರಣ್ಯ ಉಪ ನಿರ್ದೇಶಕರು, ಕಾರ್ಯ ಪಾಲಕ ಅಧಿಕಾರಿ ಅಭಿಯಂತರರು, ಪಿಡಿಒ ಕುಮಾರ್, ಕಾರ್ಯದರ್ಶಿ ನರೇಶ್, ಸಮಾಜ ಸೇವಕ ಎನ್.ಸಿ.ಪ್ರಕಾಶ್, ಗ್ರಾಪಂ ಮಾಜಿ ಸದಸ್ಯರು, ಮುಖಂಡರು, ವಸತಿ ಶಾಲೆ ಮಕ್ಕಳು ಹಾಗೂ ಗ್ರಾಮಸ್ಥರು ಸೇರಿದಂತೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

You may also like

Leave a Comment