Saturday, July 11, 2026
Home ಅಪರಾಧ ಸುದ್ದಿಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 3.75ಕೋಟಿ ಮೌಲ್ಯದ 10.20 ಕೆ.ಜಿ ಗಾಂಜಾ ಅಕ್ರಮ ಸಾಗಾಟ, ವಶಕ್ಕೆ ಪಡೆದ ಅಧಿಕಾರಿಗಳು

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 3.75ಕೋಟಿ ಮೌಲ್ಯದ 10.20 ಕೆ.ಜಿ ಗಾಂಜಾ ಅಕ್ರಮ ಸಾಗಾಟ, ವಶಕ್ಕೆ ಪಡೆದ ಅಧಿಕಾರಿಗಳು

by Raghavendra H A
0 comments

ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳ್ಳ ಸಾಗಣೆ ಮಾಡುತ್ತಿದ್ದ ₹3.57 ಕೋಟಿ ಮೌಲ್ಯದ 10.20 ಕೆ.ಜಿ ಗಾಂಜಾವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಎನ್‌ಡಿಪಿಎಸ್‌ ಕಾಯ್ದೆ ಅಡಿಯಲ್ಲಿ ಬಂಧಿಸಲಾಗಿದೆ.

ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕ ಅಕ್ರಮವಾಗಿ ಗಾಂಜಾ ಸಾಗಿಸಲು ಯತ್ನಿಸಿದಾಗ ಸಿಕ್ಕಿಬಿದ್ದಿದ್ದಾನೆ.

ಚೆಕ್-ಇನ್ ಬ್ಯಾಗೇಜ್ ತಪಾಸಣೆ ನಡೆಸಿದಾಗ ಆರೋಪಿಯ ಬ್ಯಾಗ್‌ನಲ್ಲಿ ಹೈಡೋಪೋನಿಕ್ ಗಾಂಜಾ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

You may also like

Leave a Comment