125
ದೊಡ್ಡಬಳ್ಳಾಪುರ: 6 ಕೆಜಿ 126 ಗ್ರಾಂ ಒಣ ಗಾಂಜಾವನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಆರೋಪದಡಿ ಯುವಕನೊಬ್ಬನನ್ನು ದೊಡ್ಡಬಳ್ಳಾಪುರ ನಗರ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಉತ್ತರಪ್ರದೇಶ ಮುರಾಬಾದ್ ಮೂಲದ 23 ವರ್ಷದ ಮುಷರಫ್ ಅಲಿ ಎಂದು ಗುರುತಿಸಲಾಗಿದ್ದು, ದೊಡ್ಡಬಳ್ಳಾಪುರ ನಗರದ ಅರ್ಕಾವತಿ ಬಡಾವಣೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದನು ಎನ್ನಲಾಗಿದೆ.
ಆರೋಪಿಯು ನಗರದಲ್ಲಿ ಗಾಂಜಾ ಮಾರಾಟ ಮಾಡುವ ಉದ್ದೇಶದಿಂದ ಉತ್ತರ ಪ್ರದೇಶದಿಂದ ದೊಡ್ಡಬಳ್ಳಾಪುರಕ್ಕೆ ಒಣ ಗಾಂಜಾವನ್ನು ತಂದು ತನ್ನ ಮನೆಯಲ್ಲಿ ಶೇಖರಿಸಿಟ್ಟಿದ್ದ, ಖಚಿತ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ನಗರ ಠಾಣೆ ಪೊಲೀಸರು ದಾಳಿ ನಡೆಸಿ ಬಂಧಿತನಿಂದ 6 ಕೆಜಿ 126 ಗ್ರಾಂ ಅಕ್ರಮ ಒಣ ಗಾಂಜಾ ಜೊತೆಗೆ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.