Saturday, July 11, 2026
Home ಬೆಂಗಳೂರು ನಗರಹೊರಮಾವು ಅಗರದಲ್ಲಿ ಭಾರತ ರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಪುತ್ಥಳಿ ಅನಾವರಣ.

ಹೊರಮಾವು ಅಗರದಲ್ಲಿ ಭಾರತ ರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಪುತ್ಥಳಿ ಅನಾವರಣ.

by Dharmaraju
0 comments

ಕೆ.ಆರ್ ಪುರ : ಕ್ಷೇತ್ರದ ಹೊರಮಾವು ಅಗರ ಜೈ ಭೀಮ್ ಸರ್ಕಲ್ ನಲ್ಲಿ ನೂತನ ಭಾರತ ರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಯನ್ನು ಬೆಂಗಳೂರು ಪೂರ್ವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಿ.ಕೆ.ಮೋಹನ್ ಬಾಬು ಅವರು ಅನಾವರಣಗೊಳಿಸಿದರು.

ಈ ವೇಳೆ ಮಾತನಾಡಿದ ಅವರು, ಹೊರಮಾವು ಅಗರದಲ್ಲಿ ನಾಲ್ಕು ವರ್ಷದ ಹಿಂದೆ ಅಂಬೇಡ್ಕರ್ ಪ್ರತಿಮೆ ನಿರ್ಮಾಣವಾಗಿದ್ದು, ಆದರೆ ಕಾರಣಾಂತರಗಳಿಂದ ಉದ್ಘಾಟನೆಗೆ ಕಾಲ ಕೂಡಿ ಬಂದಿರಲಿಲ್ಲ, ಇಂದು ನನಗೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆ ಉದ್ಘಾಟನೆ ಮಾಡುವ ಅವಕಾಶ ದೊರೆತಿರುವುದು ನನ್ನ ಸೌಭಾಗ್ಯ ಎಂದರು.

ಪುತ್ಥಳಿ ಅನಾವರಣ ಮಾಡಿದರೆ ಮಾತ್ರ ಸಾಲದು. ಪ್ರತಿಯೊಬ್ಬರೂ ಶಿಕ್ಷಣವಂತರಾಗಿ ಉನ್ನತ ಹುದ್ದೆಗೇರಬೇಕು.ಶಿಕ್ಷಣದ ಮಹತ್ವ ಅರಿತಿದ್ದ ಅಂಬೇಡ್ಕರ್ ಅವರು ಹೆಚ್ಚು ಅಧ್ಯಯನ ಮಾಡುವ ಮೂಲಕ ಅಪಾರ ಜ್ಞಾನ ಸಂಪಾದಿಸಿದ್ದರು. ಆ ಮೂಲಕ ಜನರ ಹಕ್ಕಿಗಾಗಿ ತಮ್ಮ ಇಡೀ ಜೀವನವನ್ನು ಮುಡಿಪಾಗಿಟ್ಟಿದ್ದರು ಎಂದರು.

ಬುದ್ಧ, ಬಸವಣ್ಣ, ಅಂಬೇಡ್ಕರ್ ಅವರನ್ನು ನಾವು ಅರ್ಥ ಮಾಡಿಕೊಳ್ಳದೆ ಇರುವುದರಿಂದ ಸಮಾಜದಲ್ಲಿ ಇಂದಿಗೂ ಜಾತೀಯತೆ ಜೀವಂತವಾಗಿದೆ ಎಂದರು.

ಅಂಬೇಡ್ಕರ್ ಅವರನ್ನ ಆರಾಧನೆ ಮಾಡುವುದು ಕೇವಲ ದಲಿತ ವರ್ಗಕ್ಕೆ ಮಾತ್ರ ಸೀಮಿತಗೊಳಿಸದೆ ಸಮಾಜದ ಎಲ್ಲ ವರ್ಗದ ಜನರೂ ಮಾಡುವಂತಾಗಬೇಕು ಎಂದರು.

ಡಾ.ಬಿ.ಆರ್.ಅಂಬೇಡ್ಕರ್ ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಸಮಾಜದ ಅಭಿವೃದ್ಧಿಗೆ ಸಹಕಾರಿಗಳಾಗಬೇಕು ಎಂದರು.

ಕೆಲವು ಸಂವಿಧಾನ ವಿರೋಧಿಗಳು ಸಂವಿಧಾನವನ್ನು ಬದಲಿಸುವ ಪ್ರಯತ್ನ ಮಾಡುತ್ತಿದ್ದಾರೆ, ಅಂಬೇಡ್ಕರ್ ಅನುಯಾಯಿಗಳು ಒಗ್ಗಟ್ಟು ಪ್ರದರ್ಶಿಸುವ ಮೂಲಕ ಅಂತಹ ದುಷ್ಟ ಶಕ್ತಿಗಳನ್ನು ಮೂಲೆಗುಂಪು ಮಾಡಬೇಕು ಎಂದರು.

ಡಾ. ಅಂಬೇಡ್ಕರ್ ಅವರ ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಅವರು ತೋರಿದ ಮಾರ್ಗದಲ್ಲಿ ನಡೆಯಬೇಕಿದೆ ಎಂದರು.

ಇದೇ ವೇಳೆ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಕಂಬಳಿಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಎಸ್.ಸಿ ಬ್ಲಾಕ್ ಅಧ್ಯಕ್ಷ ಸಿ.ವೆಂಕಟೇಶ್, ಆಯೋಜಕರಾದ ಕೇಶವ, ಶಿವ, ಮುಖಂಡರಾದ ಅಗರ ಪ್ರಕಾಶ್, ಸುರೇಶ್ ಮುನಿಕೃಷ್ಣ, ವೆಂಕಟೇಶ್, ಪ್ರಸನ್ನ, ರಾಮಾಂಜಿ, ಭರತ್, ಧನುಷ್, ನಾಗೇಶ್, ವಿನಯ್, ಸುಪ್ರೀತ್, ವಿಜಯ್, ಯಶ್ವಂತ್, ಸಂತೋಷ್, ನರಸಿಂಹಯ್ಯ, ಶ್ರೀಕಾಂತ್, ರವಿ, ಕಿರಣ್, ವಿನೋದ್, ಸುಮನ್, ನವೀನ್, ಮುನಿರಾಜು, ಕುಮಾರ್, ಅಪ್ಪು, ದರ್ಶನ್ , ಅಭಿ, ವಿಶ್ವನಾಥ್ ಸೇರಿದಂತೆ ಹೊರಮಾವು ಅಗರ ಗ್ರಾಮಸ್ಥರು ಇದ್ದರು.

You may also like

Leave a Comment