ಪ್ರಜಾ ಭಾರತ್ ನ್ಯೂಸ್ ವೆಬ್ ಪೋರ್ಟಲ್ ವಾಟ್ಸಪ್ ಗ್ರೂಪ್ ಸೇರಲು 👇👇 Follow this link to join my WhatsApp group: https://chat.whatsapp.com/Fj6L4Eak7N994zl2QHSpHK

ರಾಜ್ಯಸ್ಥಳೀಯ ಸುದ್ದಿ

ಧರ್ಮ ಬಸವನಪುರ.

5/30/20251 min read

ಬೆಂಗಳೂರು: ಚಂಡೀಗಢದ ಮುಲ್ಲನಪುರ ಕ್ರೀಡಾಂಗಣದಲ್ಲಿ ಗುರುವಾರ ರಾತ್ರಿ ನಡೆದ ಐಪಿಎಲ್ 2025 ಟೂರ್ನಿಯ ಕ್ವಾಲಿಫೈಯರ್-1 ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪಂಜಾಬ್ ಕಿಂಗ್ಸ್ ತಂಡವನ್ನು ಸೋಲಿಸಿ ಎಂಟು ವಿಕೆಟ್‌ಗಳ ಜಯ ದಾಖಲಿಸಿತು.

ಇದರಿಂದ ಆರ್ ಸಿಬಿ ಆಟಗಾರರು ಹಾಗೂ ಅಭಿಮಾನಿಗಳು ಸಂತಸದ ಹೊಳೆಯಲ್ಲಿ ತೇಲುತ್ತಿರುವಂತೆಯೇ ವಿಚಿತ್ರ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಾಕಷ್ಟು ಸುದ್ದಿಯಾಗಿದೆ

ಬೆಳಗಾವಿ ಜಿಲ್ಲೆಯ ಗೋಕಾಕ್ ಮೂಲದ ಶಿವಾನಂದ ಮಲ್ಲನ್ನವರ್ ಎಂಬ ಯುವಕ ಆರ್‌ಸಿಬಿ ಅಭಿಮಾನಿಯಾಗಿದ್ದು, ಆರ್‌ಸಿಬಿ ಕಪ್ಪು ಗೆದ್ದ ದಿನ ಪ್ರತಿ ವರ್ಷ ರಜೆ ನೀಡಬೇಕು. ಎಲ್ಲಾ ಜಿಲ್ಲೆಯಲ್ಲೂ ಆಚರಣೆ ಮಾಡಲು ವ್ಯವಸ್ಥೆ ಮಾಡಿಕೊಡಬೇಕು ಎಂದು ಆರ್‌ಸಿಬಿ ಫೈನಲ್‌ ತಲಪುತ್ತಿದ್ದಂತೆ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆಯುವ ಮೂಲಕ ವಿಶೇಷ ಮನವಿ ಮಾಡಿದ್ದಾರೆ. ಸದ್ಯ ಅಭಿಮಾನಿಯ ಮನವಿ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಕರ್ನಾಟಕ ರಾಜ್ಯೋತ್ಸವವನ್ನು ಪ್ರತಿ ಜಿಲ್ಲೆಯಲ್ಲಿ ಯಾವ ರೀತಿ ಆಚರಿಸುತ್ತಿವೆಯೋ ಅದೇ ಮಾದರಿಯಲ್ಲಿ ಆರ್‌ಸಿಬಿ ಫ್ಯಾನ್ಸ್ ಹಬ್ಬ ಆಚರಿಸಲು ರಾಜ್ಯ ಸರ್ಕಾರ ಅನುವು ಮಾಡಿಕೊಡಬೇಕು.‌ ಎಲ್ಲ ರೀತಿಯಿಂದ ಪರವಾನಗಿ ನೀಡಬೇಕು ಎಂದು ಆರ್‌ಸಿಬಿ ಅಭಿಮಾನಿಗಳ ಪರವಾಗಿ ಮನವಿ ಮಾಡುವುದಾಗಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.