ಗರುಡಾಚಾರ್ ಪಾಳ್ಯ ವಾರ್ಡ್ ನ ನೂತನ ಕಾಂಗ್ರೆಸ್ ಅಧ್ಯಕ್ಷರಾಗಿ ಪ್ರಶಾಂತ್ ಕುಮಾರ್ ಯಾದವ್ ನೇಮಕ.

ಸ್ಥಳೀಯ ಸುದ್ದಿರಾಜಕೀಯ

ಧರ್ಮ ಬಸವನಪುರ

5/17/20251 min read

ಕೆ.ಆರ್.ಪುರ: ಮಹದೇವಪುರ ಕ್ಷೇತ್ರದ ಗರುಡಾಚಾರ್ ಪಾಳ್ಯ ವಾರ್ಡ್ ನ ಅಧ್ಯಕ್ಷರಾಗಿ ಪ್ರಶಾಂತ್ ಕುಮಾರ್ ಯಾದವ್ ಅವರನ್ನ ನೇಮಕ ಮಾಡಿ ಮಾಜಿ ಸಚಿವರಾದ ಎಚ್ ನಾಗೇಶ್ ಹಾಗೂ ಬೆಂಗಳೂರು ಪೂರ್ವ ಜಿಲ್ಲಾಧ್ಯಕ್ಷರಾದ ನಂದಕುಮಾರ್ ಅಧಿಕೃತ ಆದೇಶಪತ್ರ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಚಿವರಾದ ಎಚ್ ನಾಗೇಶ್ ಅವರು ಪಕ್ಷ ಸಂಘಟನೆ ಮಾಡುವ ಮೂಲಕ ಮಹದೇವಪುರ ದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಶಕ್ತಿ ತುಂಬುವಂತೆ ಕರೆ ನೀಡಿದರು.

ಕಳೆದ ಮೂರು ಚುನಾವಣೆಗಳಿಂದ ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆಗಳಲ್ಲಿ ಮಹದೇವಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಿದ್ದು,ಮುಂದಿನ ದಿನಗಳಲ್ಲಿ ಪಕ್ಷಕ್ಕೆ ಮುನ್ನಡೆ ನೀಡುವ ನಿಟ್ಟಿನಲ್ಲಿ ಶ್ರಮಿಸುವಂತೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ದತ್ತ್, ಹೂಡಿ ಬ್ಲ್ಯಾಕ್ ಅಧ್ಯಕ್ಷ ಮಾಯಂಕ್ ಬಾಬು, ಹೂಡಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಅನಿಲ್ ಕುಮಾರ್ ಮುಖಂಡರಾದ ಎಂ ರವಿ,ಸಿದ್ದಪ್ಪ,ಚಂದ್ರು ಮುನಿರಾಜ್, ಮಧು, ರೇಣುಕಾ ಮತ್ತಿತರರು ಉಪಸ್ಥಿತರಿದ್ದರು