ಎತ್ತಿನಹೊಳೆ ಯೋಜನೆಗೆ ಇಲ್ಲಿಯವರೆಗೂ 17147 ಕೋಟಿ ಖರ್ಚು, ಇನ್ನೆರಡು ವರ್ಷಗಳಲ್ಲಿ ಜಿಲ್ಲೆಗೆ ಕುಡಿಯುವ ನೀರು-ಸಿಎಂ
ಜಿಲ್ಲಾ ಸುದ್ದಿ


ಎತ್ತಿನಹೊಳೆ ಯೋಜನೆಗೆ ಒಟ್ಟು 23251 ಕೋಟಿ ಪರಿಷ್ಕೃತ ಅಂದಾಜು ಮಾಡಲಾಗಿದ್ದು, ಇಲ್ಲಿಯವರೆಗೂ 17147 ಕೋಟಿ ಖರ್ಚಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ನಂದಿಬೆಟ್ಟದಲ್ಲಿ ನಡೆದ ಸಚಿವ ಸಂಪುಟದ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಮೂಲತಃ ಕುಡಿಯುವ ನೀರಿನ ಯೋಜನೆ ಇದಾಗಿದೆ. ಕೆರೆಗಳಿಗೆ ನೀರು ತುಂಬಿಸುವುದು ನಂತರದ ಆದ್ಯತೆಯಾಗಿದೆ. 24.1 TMC ನೀರಿನಲ್ಲಿ ಕುಡಿಯುವ ನೀರಿಗೆ 14 TMC ಬೇಕಾಗಿದೆ. ಆದ್ದರಿಂದ ಮೊದಲು ಕುಡಿಯುವ ನೀರನ್ನು ಕೊಡುವ ಯೋಜನೆ ಮುಗಿಸಲು ಸಂಪುಟ ಸಭೆ ತೀರ್ಮಾನ ಮಾಡಿದ್ದು ಇನ್ನು ಎರಡು ವರ್ಷಗಳಲ್ಲಿ ಉದ್ದೇಶಿತ ಜಿಲ್ಲೆ, ತಾಲ್ಲೂಕುಗಳಿಗೆ ನೀರು ಕೊಡಲಿದ್ದೇವೆ ಎಂದರು.
9807ಕೋಟಿ ಮೊತ್ತದಲ್ಲಿ ಗ್ರಾವಿಟಿ ಮುಖ್ಯ ಕೆನಲ್ ನ ಕೆಲಸ 85% ಮಗಿದಿದ್ದು ಹೆಚ್ಚುವರಿಯಾಗಿ ಇದಕ್ಕೆ 8000 ಕೋಟಿ ಬೇಕಾಗಿದೆ. 6000 ಕೋಟಿ ಬಾಕಿ ಇದೆ. ಒಟ್ಟು 9 ಜಿಲ್ಲೆಗಳ 75 ಲಕ್ಷ ಜನರಿಗೆ ಕುಡಿಯುವ ನೀರು ಕೊಡುತ್ತೇವೆ. ಈ ಬಗ್ಗೆ ಈ ಸಂಪುಟ ಸಭೆಯಲ್ಲಿ ಚರ್ಚೆಯಾಗಿದೆ. ಮುಂದಿನ ಕ್ಯಾಬಿನೆಟ್ ನಲ್ಲಿ ನಿರ್ಣಯಿಸಲು ತೀರ್ಮಾನಿಸಲಾಗಿದೆ ಎಂದರು.
ಪ್ರಜಾ ಭಾರತ್ ನ್ಯೂಸ್ ವೆಬ್ ಪೋರ್ಟಲ್ ವಾಟ್ಸಪ್ ಗ್ರೂಪ್ ಸೇರಲು 👇👇Follow this link to join my WhatsApp group: https://chat.whatsapp.com/Fj6L4Eak7N994zl2QHSpHK