Wednesday, April 15, 2026
Home ಅಪರಾಧ ಸುದ್ದಿದೇವನಹಳ್ಳಿ: ಕಾಶಿ ಯಾತ್ರೆಗೆ ತೆರಳುತ್ತಿದ್ದ ಮೂವರು ಮಹಿಳೆಯರು ಭೀಕರ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ದೇವನಹಳ್ಳಿ: ಕಾಶಿ ಯಾತ್ರೆಗೆ ತೆರಳುತ್ತಿದ್ದ ಮೂವರು ಮಹಿಳೆಯರು ಭೀಕರ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ.

by Dharmaraju
0 comments

ದೇವನಹಳ್ಳಿ: ಕಾಶಿ ಯಾತ್ರೆಗೆ ತೆರಳುತ್ತಿದ್ದ ಮೂವರು ಮಹಿಳೆಯರು ಭೀಕರ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹೊರವಲಯದ ರಾಣಿ ಕ್ರಾಸ್ ಬಳಿ ಮಧ್ಯರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಮಹಿಳೆಯರು ಮೃತಪಟ್ಟಿದ್ದಾರೆ.

ಟಿ.ಟಿ ವಾಹನದಲ್ಲಿದ್ದ ಒಟ್ಟು 15 ಮಂದಿ ಪೈಕಿ ಉಳಿದವರು ಗಂಭೀರವಾಗಿ ಗಾಯಗೊಂಡಿದ್ದು ದೇವನಹಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಭಾನುವಾರ ಬೆಳಗ್ಗೆ 6ಕ್ಕೆ ಕಾಶಿಗೆ ಹೋಗಲು ವಿಮಾನ ಏರಲು ತಿಪಟೂರಿನಿಂದ ರಾತ್ರಿ 10ಕ್ಕೆ ಟಿ.ಟಿ ವಾಹನದಲ್ಲಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದರು.

ಹೈವೆಯಿಂದ ಸರ್ವೀಸ್ ರಸ್ತೆಗೆ‌ ಬರುತ್ತಿದ್ದ ಟಿಟಿಗೆ ಲಾರಿ ಡಿಕ್ಕಿಯಾದ ಪರಿಣಾಮ ವಾಹನದಲ್ಲಿದ್ದ 15 ಮಂದಿ ಪೈಕಿ ಮೂವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತಿಪಟೂರಿನ ವಿದ್ಯಾನಗರ ಜಯಮ್ಮ (65), ಯಶೋಧಮ್ಮ (60) ಮತ್ತು ಗಂಗಾ (40) ಮೃತರು ಎಂದು ಗುರ್ತಿಸಲಾಗಿದೆ.

ಟಿಟಿ ವಾಹನ ಚಾಲಕ ಸೇರಿದಂತೆ 8 ಜನರಿಗೆ ಅಪಘಾತದಲ್ಲಿ ಗಾಯಗಳಾಗಿವೆ. ದೇವನಹಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಕೆಂಪಮ್ಮ‌ ಅವರ ಸ್ಥಿತಿ ಗಂಭೀರವಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಗೂಗಲ್ ಮ್ಯಾಪ್ ತೋರಿಸಿದ್ದ ತಿರುವು ತಪ್ಪಿಸಿಕೊಂಡ ಕಾರಣ ಮುಂದಕ್ಕೆ ಹೋಗಿ ಯೂ-ಟರ್ನ್ ಪಡೆಯಲು ಪ್ರಯತ್ನಿಸಿದಾಗ ಲಾರಿಯೊಂದಿಗೆ ಡಿಕ್ಕಿ ಹೊಡೆದಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ದೇವನಹಳ್ಳಿ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ

You may also like

Leave a Comment