Wednesday, April 15, 2026
Home ಬೆಂಗಳೂರು ಗ್ರಾಮಾಂತರದೊಡ್ಡಬಳ್ಳಾಪುರಅವೈಜ್ಞಾನಿಕ ಒಳಮೀಸಲಾತಿ ಜಾರಿ,ನಾಗಮೋಹನ ದಾಸ್ ವರದಿ ತಿರಸ್ಕಾರಕ್ಕೆ ಆಗ್ರಹ,ಮಾ 25 ರಂದು ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ.

ಅವೈಜ್ಞಾನಿಕ ಒಳಮೀಸಲಾತಿ ಜಾರಿ,ನಾಗಮೋಹನ ದಾಸ್ ವರದಿ ತಿರಸ್ಕಾರಕ್ಕೆ ಆಗ್ರಹ,ಮಾ 25 ರಂದು ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ.

by Dharmaraju
0 comments

ದೊಡ್ಡಬಳ್ಳಾಪುರ: ನಿ.ನ್ಯಾ.ನಾಗಮೋಹನ್ ದಾಸ್ ಆಯೋಗದ ಒಳಮೀಸಲಾತಿ ವರದಿಯು ಸಂಪೂರ್ಣವಾಗಿ ಅವೈಜ್ಙಾನಿಕವಾಗಿದ್ದು ಪರಿಶಿಷ್ಟ (ಬಲಗೈ)ಜಾತಿಗೆ ತುಂಬಲಾಗದ ನಷ್ಟನ್ನುಂಟು ಮಾಡುತ್ತಿದೆ, ಆದ್ದರಿಂದ ಒಳಮೀಸಲಾತಿ ಅವೈಜ್ಞಾನಿಕ ವರದಿಯನ್ನು ತಿರಸ್ಕರಿಸುವಂತೆ ಸರ್ಕಾರವನ್ನು ಒತ್ತಾಯಿಸಿ ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು ಈ ಹೋರಾಟಕ್ಕೆ ಸಮುದಾಯದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಛಲವಾದಿ ಮಹಾಸಭಾ ಜಿಲ್ಲಾಧ್ಯಕ್ಷ ನರೇಶ ಮನವಿ ಮಾಡಿಕೊಂಡರು.

ಕಛೇರಿಪಾಳ್ಯದ ಸಾವಿರಕಣ್ಣಮ್ಮ ದೇವಸ್ಥಾನದ ಆವರಣದಲ್ಲಿ ಛಲವಾದಿ ಮಹಾಸಭಾ ವತಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕರ್ನಾಟಕ ಸರ್ಕಾರವು ನ್ಯಾಯಮೂರ್ತಿ ನಾಗಮೋಹನ್‌ದಾಸ್ ರವರ ಅಧ್ಯಕ್ಷತೆಯಲ್ಲಿ ಒಳಮೀಸಲಾತಿ ಏಕ ಸದಸ್ಯ ವಿಚಾರಣಾ ಆಯೋಗವನ್ನು ನೇಮಕ ಮಾಡಿ ಸಮೀಕ್ಷೆ ನಡೆಸಿ ವರದಿಯನ್ನು ಪಡೆದು ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಂಡು ನೇರ ನೇಮಕಾತಿಗೆ ಸಂಬಂಧಿಸಿದಂತೆ ಹೊರಡಿಸಿರುವ ಆದೇಶವು ಪರಿಶಿಷ್ಟ ಜಾತಿ ಬಲಗೈ ಸಮುದಾಯಕ್ಕೆ ಮರಣ ಶಾಸನವಾಗಿದೆ ಎಂದರು.

ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗ ನೀಡಿರುವ ಅವೈಜ್ಞಾನಿಕ, ಅಪೂರ್ಣ, ದೋಷಪೂರಿತ ಹಾಗೂ ಪಕ್ಷವಾತದಿಂದ ಕೂಡಿರುವ ವರದಿಯನ್ನು ರಾಜ್ಯ ಸರ್ಕಾರವು ತಿರಸ್ಕರಿಸಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಕೈಗೊಂಡಿರುವ ಕುಟುಂಬಗಳ ಸಮೀಕ್ಷೆಯ ಅಂಕಿಅಂಶಗಳೊಂದಿಗೆ ನ್ಯಾಯಮೂರ್ತಿ ನಾಗಮೋಹನ್‌ದಾಸ್ ರವರ ಆಯೋಗದ ಅಂಕಿ ಅಂಶಗಳನ್ನು ಹೋಲಿಕೆ ಮಾಡಿ ವ್ಯತ್ಯಾಸಗಳು ಕಂಡುಬಂದಲ್ಲಿ ಪರಿಶಿಷ್ಟ ಜಾತಿಯ ಎಲ್ಲಾ ಕುಟುಂಬಗಳ ಸಮೀಕ್ಷೆಯನ್ನು ಮತ್ತೊಮ್ಮೆ ಕೈಗೊಳಬೇಕು ಅಲ್ಲದೆ ಈಗಾಗಲೇ ರಾಜ್ಯ ಸರ್ಕಾರವು ಯಾವುದೇ ಮಾನದಂಡವನ್ನು ಅನುಸರಿಸದೇ ಅವೈಜ್ಞಾನಿಕವಾಗಿ ಹೊರಡಿಸಿರುವ ಮೀಸಲಾತಿ ಆದೇಶವನ್ನು ಹಿಂಪಡೆಯಬೇಕು ಎಂದು ಅಗ್ರಹಿಸಿದರು.

ಕಚೇರಿಪಾಳ್ಯ  ವಾರ್ಡ್ ಮುಖಂಡರಾದ ಮಂಜುನಾಥ್.ಟಿ ರವರು ಮಾತನಾಡಿ, ನ್ಯಾಯಮೂರ್ತಿ ನಾಗಮೋಹನ್ ದಾಸ್ ರವರು ಸಮೀಕ್ಷೆಯನ್ನು ಪೂರ್ಣ ಪ್ರಮಾಣದಲ್ಲಿ ನಡೆಸದೇ ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಅಗತ್ಯ ಅಂಕಿಅಂಶಗಳನ್ನು ಕ್ರೂಢೀಕರಿಸದೇ ಒಂದು ಜಾತಿಯನ್ನು ಒಲೈಸಲು ಪರಿಶಿಷ್ಟ ಜಾತಿಯ ಬಲಗೈ ಸಮುದಾಯದ ಜನಸಂಖ್ಯೆಯನ್ನು 14 ಭಾಗಗಳಾಗಿ ವಿಂಗಡಿಸಿ ದಾರಿತಪ್ಪಿಸಿದ್ದಾರೆ. ಈ ವರದಿಯನ್ವಯ ರಾಜ್ಯ ಸರ್ಕಾವು ಪರಿಶಿಷ್ಟ ಜಾತಿಯ ಬಲಗೈ ಸಮುದಾಯವನ್ನು ಗ್ರೂಪ್- ‘ಬಿ’ಗೆ ಸೇರಿಸುವುದರ ಮೂಲಕ ಯಾವುದೇ ಉನ್ನತ ಹುದ್ದೆಗಳು ಹೊಲಯ/ಛಲವಾದಿ ಬಲಗೈ ಸಮುದಾಯಕ್ಕೆ ಸಿಗದಂತೆ ರೋಸ್ಟರ್ ಬಿಂದುಗಳನ್ನು ನಿಗದಿಪಡಿಸಿರುವುದು ಖಂಡನೀಯ ಎಂದರು.

ಈ ವೇಳೆ ಮುಖಂಡರಾದ ತಿಮ್ಮರಾಯಪ್ಪ, ರಮೇಶ, ಗೂಳ್ಯ ಹನುಮಣ್ಣ, ಮುನಿರಾಜು, ವಡ್ಡರಹಳ್ಳಿ ರಾಜಗೋಪಾಲ್, ಕೊನಘಟ್ಟ ರಾಮಾಂಜಿನಪ್ಪ, ಮಧುಸೂಧನ್, ಮಂಜುನಾಥ್, ಶ್ರೀನಿವಾಸ್, ಆದಿ, ದೇವರಾಜ್, ಅನಿ, ಶ್ರೀನಿವಾಸ್, ಮದ್ದೂರಪ್ಪ, ಲೋಕೇಶ್, ಮಲ್ಲೇಶ, ಶಿವಶಂಕರ್, ತಮ್ಮಯ್ಯ, ಅನಂತ, ನಾಗರಾಜ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಪ್ರಜಾಭಾರತ್ ನ್ಯೂಸ್ ವಾಟ್ಸಪ್ ಗ್ರೂಪ್ ಸೇರಲು ಈ👇 ಲಿಂಕ್ ಕ್ಲಿಕ್ ಮಾಡಿ
Follow this link to join my WhatsApp group: https://chat.whatsapp.com/Fj6L4Eak7N994zl2QHSpHK?mode=gi_t

You may also like

Leave a Comment