Sunday, 15 November 2026 — Prajabharat
BREAKING NEWS
ಬೆಂಗಳೂರು ಗ್ರಾಮಾಂತರ ಪ್ರಜಾ ಸೇವೆ ಆಂದೋಲನ ಸಭೆ: ಜನರ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಲ್ಪಿಸುವುದು ನಮ್ಮ ಉದ್ದೇಶ: ಸಚಿವ ಕೆ.ಹೆಚ್. ಮುನಿಯಪ್ಪ ಬೆಂಗಳೂರು ನಗರ ಕೇಂಬ್ರಿಡ್ಜ್ ಕಾಲೇಜಿನಲ್ಲಿ ‘ಇನಾರಾ ಹಬ್ಬ’ದ ಸಂಭ್ರಮ ದೊಡ್ಡಬಳ್ಳಾಪುರ ದುಡ್ಡಿನ ಆಡಂಬರ, ಸುಳ್ಳು ಭಾಷಣಗಳ ಸರದಾರ ಶಾಸಕ ಧೀರಜ್: ಮಾಜಿ ಶಾಸಕ ವೆಂಕಟರಮಣಯ್ಯ ಟೀಕೆ ಬೆಂಗಳೂರು ನಗರ ಕಾಂಗ್ರೆಸ್ ಬಲವರ್ಧನೆಗೆ ಸಂಘಟನ್ ಸೃಜನ್ ಅಭಿಯಾನ.. ಜಿಲ್ಲಾ‌ಸುದ್ದಿ ಕೋವಿಡ್‌ ಸಮಯದಲ್ಲಿ ತಂದೆ ತಾಯಿಯನ್ನು ಕಳೆದುಕೊಂಡ ಮಕ್ಕಳೊಂದಿಗೆ ದೀಪಾವಳಿ ಆಚರಿಸಿದ ಸಂಸದ ಡಾ.ಕೆ.ಸುಧಾಕರ್‌ ಬೆಂಗಳೂರು ನಗರ ದೀಪಾವಳಿ ವಿಶೇಷ: ಪರಮ್ ಫೌಂಡೇಶನ್‌ನಿಂದ ಲೇಸರ್ ಪ್ರೊಜೆಕ್ಷನ್ ಅನುಭವ. ಬೆಂಗಳೂರು ನಗರ ಶಾಸಕ‌ ಬೈರತಿ ಬಸವರಾಜ ವಿರುದ್ದ ಕೈ ಕಾರ್ಯಕರ್ತರ ಪ್ರತಿಭಟನೆ. ಬೆಂಗಳೂರು ನಗರ ಶಾಸಕ ಬೈರತಿ ಬಸವರಾಜಗೆ ನಿಂದನೆ ಕೆ ಆರ್ ಪುರದಲ್ಲಿ ಬುಗಿಲೆದ್ದ ಆಕ್ರೋಶ.ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ. ಬೆಂಗಳೂರು ಗ್ರಾಮಾಂತರ ಪ್ರಜಾ ಸೇವೆ ಆಂದೋಲನ ಸಭೆ: ಜನರ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಲ್ಪಿಸುವುದು ನಮ್ಮ ಉದ್ದೇಶ: ಸಚಿವ ಕೆ.ಹೆಚ್. ಮುನಿಯಪ್ಪ ಬೆಂಗಳೂರು ನಗರ ಕೇಂಬ್ರಿಡ್ಜ್ ಕಾಲೇಜಿನಲ್ಲಿ ‘ಇನಾರಾ ಹಬ್ಬ’ದ ಸಂಭ್ರಮ ದೊಡ್ಡಬಳ್ಳಾಪುರ ದುಡ್ಡಿನ ಆಡಂಬರ, ಸುಳ್ಳು ಭಾಷಣಗಳ ಸರದಾರ ಶಾಸಕ ಧೀರಜ್: ಮಾಜಿ ಶಾಸಕ ವೆಂಕಟರಮಣಯ್ಯ ಟೀಕೆ ಬೆಂಗಳೂರು ನಗರ ಕಾಂಗ್ರೆಸ್ ಬಲವರ್ಧನೆಗೆ ಸಂಘಟನ್ ಸೃಜನ್ ಅಭಿಯಾನ.. ಜಿಲ್ಲಾ‌ಸುದ್ದಿ ಕೋವಿಡ್‌ ಸಮಯದಲ್ಲಿ ತಂದೆ ತಾಯಿಯನ್ನು ಕಳೆದುಕೊಂಡ ಮಕ್ಕಳೊಂದಿಗೆ ದೀಪಾವಳಿ ಆಚರಿಸಿದ ಸಂಸದ ಡಾ.ಕೆ.ಸುಧಾಕರ್‌ ಬೆಂಗಳೂರು ನಗರ ದೀಪಾವಳಿ ವಿಶೇಷ: ಪರಮ್ ಫೌಂಡೇಶನ್‌ನಿಂದ ಲೇಸರ್ ಪ್ರೊಜೆಕ್ಷನ್ ಅನುಭವ. ಬೆಂಗಳೂರು ನಗರ ಶಾಸಕ‌ ಬೈರತಿ ಬಸವರಾಜ ವಿರುದ್ದ ಕೈ ಕಾರ್ಯಕರ್ತರ ಪ್ರತಿಭಟನೆ. ಬೆಂಗಳೂರು ನಗರ ಶಾಸಕ ಬೈರತಿ ಬಸವರಾಜಗೆ ನಿಂದನೆ ಕೆ ಆರ್ ಪುರದಲ್ಲಿ ಬುಗಿಲೆದ್ದ ಆಕ್ರೋಶ.ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ.
ಬೆಂಗಳೂರು ನಗರ

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ – ​ಆಹಾರ ಇಲಾಖೆಯಿಂದ ಸ್ಪಷ್ಟನೆ

Raghavendra H A
ವರದಿ: Raghavendra H A ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು

ಬೆಂಗಳೂರು; ಎಲ್ಲಾ  ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ‌ ಎಲ್.ಪಿ.ಜಿ.ಗೆ ಯಾವುದೇ ರೀತಿಯ ‌ಕೊರತೆ ಇಲ್ಲ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು  ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದಲ್ಲಿ ಎಲ್‌ಪಿಜಿ ಸರಬರಾಜು ವ್ಯವಸ್ಥೆಯನ್ನು, ವಿಶೇಷವಾಗಿ ಆಟೋ ಎಲ್‌ಪಿಜಿ ಪೂರೈಕೆಯನ್ನು ರಾಜ್ಯ ಸರ್ಕಾರವು ನಿಕಟವಾಗಿ ಗಮನಿಸುತ್ತಿದೆ.  ಕರ್ನಾಟಕದಾದ್ಯಂತ ಒಟ್ಟು 72 ಆಟೋ ಎಲ್‌ಪಿಜಿ ಡಿಸ್ಪೆನ್ಸಿಂಗ್ ಸ್ಟೇಷನ್‌ಗಳು (ALDS) ಕಾರ್ಯನಿರ್ವಹಿಸುತ್ತಿವೆ. ಇವುಗಳಲ್ಲಿ ಕೇವಲ ಬೆಂಗಳೂರು ನಗರವೊಂದರಲ್ಲೇ 31 ಕೇಂದ್ರಗಳು ಲಭ್ಯವಿವೆ.

ಸಾರ್ವಜನಿಕ ವಲಯದ ಪ್ರಮುಖ ತೈಲ ಮಾರಾಟ ಕಂಪನಿಗಳಾದ (OMCs) IOCL, BPCL ಮತ್ತು HPCL ಮೂಲಕ ಆಟೋ ಎಲ್‌ಪಿಜಿ ಸರಬರಾಜು ಮಾಡಲಾಗುತ್ತಿದೆ. ಪ್ರಸ್ತುತ ಈ ಸಂಸ್ಥೆಗಳು ಪ್ರತಿ ಲೀಟರ್‌ಗೆ ರೂ. 77.74 ರ ದರದಲ್ಲಿ ಆಟೋ ಎಲ್‌ಪಿಜಿ ಪೂರೈಸುತ್ತಿವೆ.

ಕಳೆದ ವಾರದಲ್ಲಿ ದಿನಕ್ಕೆ ಸರಾಸರಿ 64.9 ಮೆಟ್ರಿಕ್ ಟನ್ ಆಟೋ ಎಲ್‌ಪಿಜಿಯನ್ನು ವಿತರಿಸಲಾಗಿದೆ. ಸಂಘರ್ಷದ ಮೊದಲು ಈ ಪ್ರಮಾಣವು ದಿನಕ್ಕೆ 57.6 ಮೆಟ್ರಿಕ್ ಟನ್ ಇತ್ತು. ಇದು ಪೂರೈಕೆಯಲ್ಲಿನ ಗಮನಾರ್ಹ ಹೆಚ್ಚಳವನ್ನು ತೋರಿಸುತ್ತದೆ.

ರಾಜ್ಯದಾದ್ಯಂತ ಪ್ರತಿದಿನ ಸುಮಾರು 4 ಲಕ್ಷ ಗೃಹ ಬಳಕೆ ಎಲ್‌ಪಿಜಿ ಸಿಲಿಂಡರ್‌ಗಳು ಹಾಗೂ ಸುಮಾರು 18,000 ವಾಣಿಜ್ಯ ಬಳಕೆ ಸಿಲಿಂಡರ್‌ಗಳನ್ನು ಪೂರೈಕೆ ಮಾಡಲಾಗುತ್ತಿದೆ.

​ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆಯಿಲ್ಲದೆ ಎಲ್‌ಪಿಜಿ ಸರಬರಾಜು ಆಗುವುದನ್ನು ಖಚಿತಪಡಿಸಿಕೊಳ್ಳಲು ರಾಜ್ಯ ಸರ್ಕಾರವು ನಿರಂತರವಾಗಿ ಪರಿಸ್ಥಿತಿಯ ಮೇಲೆ ನಿಗಾ ಇರಿಸಿದೆ‌ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಮುಖ್ಯ ಸಂಪಾದಕರು (Chief Editor) ✍️ 83 ಲೇಖನಗಳು

Raghavendra H A

Raghavendra H A ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment