Wednesday, April 15, 2026
Home ಜಿಲ್ಲಾ‌ಸುದ್ದಿಭದ್ರಾವತಿ ಬಳಿ ಸೇತುವೆಯಿಂದ ಉರುಳಿ ಬಿದ್ದ ಬಸ್: ಹಲವು ಪ್ರಯಾಣಿಕರಿಗೆ ಗಾಯ

ಭದ್ರಾವತಿ ಬಳಿ ಸೇತುವೆಯಿಂದ ಉರುಳಿ ಬಿದ್ದ ಬಸ್: ಹಲವು ಪ್ರಯಾಣಿಕರಿಗೆ ಗಾಯ

by Dharmaraju
0 comments

ಭದ್ರವತಿ : ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ಸೇತುವೆಯಿಂದ ಕೆಳಕ್ಕೆ ಬಿದ್ದಿರುವ ಘಟನೆ ವರದಿಯಾಗಿದೆ. ಈ ಆಕಸ್ಮಿಕ ಅಪಘಾತದ ಸಮಯದಲ್ಲಿ ಬಸ್ಸಿನಲ್ಲಿ ಸುಮಾರು 35ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.

ಅದೃಷ್ಟವಶಾತ್ ಪ್ರಾಣಾಪಾಯ ಸಂಭವಿಸದಿದ್ದರೂ, ಅನೇಕ ಪ್ರಯಾಣಿಕರು ಗಾಯಗೊಂಡಿದ್ದಾರೆ.

ಇನ್ನು ಸ್ಥಳೀಯರು ತಕ್ಷಣವೇ ಧಾವಿಸಿ ಗಾಯಾಳುಗಳನ್ನು ಬಸ್ಸಿನಿಂದ ಹೊರತೆಗೆದು ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಚಾಲಕನ ಅಜಾಗರೂಕತೆ ಅಥವಾ ತಾಂತ್ರಿಕ ದೋಷ ಈ ಘಟನೆಗೆ ಕಾರಣವೇ ಎಂಬ ಬಗ್ಗೆ ತನಿಖೆ ಆರಂಭಿಸಿದ್ದಾರೆ.

ಈ ಅಪಘಾತದಲ್ಲಿ ಬಸ್ಸು ದೊಡ್ಡ ಹಳ್ಳಕ್ಕೆ ಬಿದ್ದಿದ್ದರೂ ಸಹ ಯಾವುದೇ ವ್ಯಕ್ತಿಗೆ ಗಂಭೀರವಾದ ಗಾಯಗಳಾಗಿಲ್ಲ. ಬಸ್ಸಿನಲ್ಲಿದ್ದ ಎಲ್ಲಾ 35 ಪ್ರಯಾಣಿಕರು ಕೇವಲ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಬಸ್ ಚಾಲಕನಿಗೂ ತೀವ್ರ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮಸ್ಥರು ಬಸ್ನಲ್ಲಿದ್ದ ಪ್ರಯಾಣಿಕರನ್ನು ರಕ್ಷಿಸಿದ್ದಾರೆ. ದೊಡ್ಡ ಮಟ್ಟದ ದುರಂತವೊಂದು ತಪ್ಪಿದಂತಾಗಿದೆ.

You may also like

Leave a Comment