ಬೆಂಗಳೂರು: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಟೆಕ್ಕಿ ದಂಪತಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ.
ಭಾನು ಚಂದ್ರ ರೆಡ್ಡಿ ಹಾಗೂ ಸಾಜಿಯಾ ಆತ್ಮಹತ್ಯೆ ಮಾಡಿಕೊಂಡ ಟೆಕ್ಕಿ ದಂಪತಿ. ಮೊದಲಿಗೆ ಪತಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಂಡನ ಮೃತದೇಹ ಕಂಡು ಪತ್ನಿ ಸಹ ಅಪಾರ್ಟ್‌ಮೆಂಟ್‌ನ 17ನೇ ಫ್ಲೋರ್‌ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗಂಡ – ಹೆಂಡತಿ ಇಬ್ಬರೂ ಖಾಸಗಿ ಕಂಪನಿಯಲ್ಲಿ ಟೆಕ್ಕಿಯಾಗಿ ಕೆಲಸ ಮಾಡುತ್ತಿದ್ದರು. ಇಬ್ಬರ ನಡುವೆ ಅನೇಕ ಬಾರಿ ಕಲಹಗಳಾಗಿದೆ. ಇಬ್ಬರೂ ಮಾನಸಿಕ ಒತ್ತಡ ಮತ್ತು ಖಿನ್ನತೆಯಿಂದ ಬಳಲುತ್ತಿದ್ದರು. ಸೋಮವಾರ ಸಹ ಇಬ್ಬರ ನಡುವೆ ಜಗಳ ನಡೆದಿದೆ. ಬಳಿಕ ಪತ್ನಿ ಇಲ್ಲದಿರುವ ಸಮಯದಲ್ಲಿ ನೇಣು ಬಿಗಿದುಕೊಂಡು ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಜಿಯಾ ಮನೆಗೆ ಬಂದು ಗಂಡನ ಶವ ನೋಡಿ ಆಕೆಯೂ ಸಹ ಅಪಾರ್ಟ್‌ಮೆಂಟ್ ಮೇಲಿಂದ ಹಾರಿ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಘಟನೆ ಸಂಬಂಧ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ತನಿಖೆ ಮುಂದುವರಿಯುತ್ತಿದೆ.