Wednesday, April 15, 2026
Home ಅಪರಾಧ ಸುದ್ದಿದೊಡ್ಡಬಳ್ಳಾಪುರ: ಸಾರಿಗೆ ಬಸ್ ಮತ್ತು ಬೈಕ್ ನಡುವೆ ಅಪಘಾತ, ವ್ಯಕ್ತಿ ಸ್ಥಳದಲ್ಲೆ ಸಾವು

ದೊಡ್ಡಬಳ್ಳಾಪುರ: ಸಾರಿಗೆ ಬಸ್ ಮತ್ತು ಬೈಕ್ ನಡುವೆ ಅಪಘಾತ, ವ್ಯಕ್ತಿ ಸ್ಥಳದಲ್ಲೆ ಸಾವು

by Raghavendra H A
0 comments

ದೊಡ್ಡಬಳ್ಳಾಪುರ: ತಾಲ್ಲೂಕಿನ ಪಾಲನಜೋಗಿಹಳ್ಳಿ ಬಳಿ ಕೆಎಸ್ಆರ್ ಟಿಸಿ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.

ಮೃತನು ಪಾಲನಜೋಗಿಹಳ್ಳಿ ನಿವಾಸಿ 29 ವರ್ಷದ  ಪುರುಷೋತ್ತಮ ಎಂದು ತಿಳಿದುಬಂದಿದೆ. ಅಪಘಾತದಿಂದ ತೀವ್ರ ರಕ್ತಸ್ರಾವಗೊಂಡ ವ್ಯಕ್ತಿ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ ಎಂದು ಸ್ಥಳೀಯ ಮೂಲಗಳು ಮಾಹಿತಿ ನೀಡಿದೆ.

ಹಿಂದೂಪುರದಿಂದ ದೊಡ್ಡಬಳ್ಳಾಪುರ ಮಾರ್ಗವಾಗಿ ಬೆಂಗಳೂರಿಗೆ ಹೋಗುತ್ತಿದ್ದ KA-40, F-1407 ನಂಬರ್ ಪ್ಲೇಟುಳ್ಳ ಬಸನ್ನು ಓವರ್ ಟೇಕ್ ಮಾಡಲು ಮುಂದಾದ ಬೈಕ್ ಸವಾರ ಬಸ್ ಗೆ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ವಿಚಾರ ತಿಳಿಯುತ್ತಿದ್ದಂತೆ ಘಟನಾ ಸ್ಥಳಕೆ ಅಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

You may also like

Leave a Comment