Wednesday, April 15, 2026
Home ಜಿಲ್ಲಾ‌ಸುದ್ದಿಬಿಜೆಪಿ ಅಭ್ಯಾರ್ಥಿ ವೀರಣ್ಣ ಚರಂತಿಮಠ ಪರ ಅರವಿಂದ ಲಿಂಬಾವಳಿ ಮತಯಾಚನೆ.

ಬಿಜೆಪಿ ಅಭ್ಯಾರ್ಥಿ ವೀರಣ್ಣ ಚರಂತಿಮಠ ಪರ ಅರವಿಂದ ಲಿಂಬಾವಳಿ ಮತಯಾಚನೆ.

by Dharmaraju
0 comments

ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿದ್ದು, ಅಭ್ಯರ್ಥಿಗಳ ಪರವಾಗಿ ಪ್ರಚಾರ ಕಾರ್ಯ ಭರದಿಂದ ಸಾಗುತ್ತಿದೆ. ಈ ಹಿನ್ನೆಲೆ ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರು ತಮ್ಮ ಪಕ್ಷದ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ಪರವಾಗಿ ನವನಗರದ ವಾರ್ಡ್ ನಂ.25 ಹಾಗೂ 26ರಲ್ಲಿ ಸಾರ್ವಜನಿಕರೊಂದಿಗೆ ಸಭೆ ನಡೆಸಿ ,ಮನೆ ಮನೆಗೆ ತೆರಳಿ ತಮ್ಮ ಅಭ್ಯಾರ್ಥಿ ಪರ ಮತಯಾಚನೆ ನಡೆಸಿದರು.

ನಂತರ ಮಾಧ್ಯಮ ಒಳಮೀಸಲಾತಿ ವಿಚಾರದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಎಲ್ಲ ಸಮುದಾಯಗಳಲ್ಲೂ ಆಕ್ರೋಶ ಹೆಚ್ಚುತ್ತಿದೆ ಎಂದು ಮಾಜಿ ಸಚಿವ ಅರವಿಂದ ಲಿಂಬಾವಳಿ ಆರೋಪಿಸಿದ್ದಾರೆ. ಈ ಆಕ್ರೋಶವು ಮುಂದಿನ ಚುನಾವಣೆಯಲ್ಲಿ ಸ್ಪಷ್ಟವಾಗಿ ಕಾಣಿಸಿಕೊಳ್ಳಲಿದೆ ಎಂದು ಅವರು ಹೇಳಿದರು.

ಬಾಗಲಕೋಟೆ ಉಪಚುನಾವಣೆ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ಒಳಮೀಸಲಾತಿ ವಿಚಾರದಲ್ಲಿ ಸರ್ಕಾರ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳದೇ ಜನರನ್ನು ಗೊಂದಲಕ್ಕೆ ದೂಡಿದೆ ಎಂದು ಟೀಕಿಸಿದರು. ಸರ್ಕಾರದ ನೀತಿಗಳ ವಿರುದ್ಧ ವಿವಿಧ ಸಮುದಾಯಗಳಲ್ಲಿ ಅಸಮಾಧಾನ ಹೆಚ್ಚುತ್ತಿರುವುದು ಚುನಾವಣಾ ಫಲಿತಾಂಶದಲ್ಲಿ ಪ್ರತಿಫಲಿಸಲಿದೆ ಎಂದು ಅಭಿಪ್ರಾಯಪಟ್ಟರು.

ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಮೇಶ್ ಮೇಟಿ ಅವರಿಗೆ ಮತ ಹಾಕಿದರೆ ಮೇಟಿ ಅವರ ಆತ್ಮಕ್ಕೆ ಶಾಂತಿ ಸಿಗುತ್ತದೆ” ಎಂದು ಹೇಳಿರುವ ಹೇಳಿಕೆಗೆ ವ್ಯಂಗ್ಯವಾಡಿದ ಲಿಂಬಾವಳಿ, ಜನರ ಸಮಸ್ಯೆಗಳನ್ನು ಬಗೆಹರಿಸುವುದರ ಬದಲು ಇಂತಹ ಹೇಳಿಕೆಗಳನ್ನು ನೀಡುವುದು ಸರಿಯಲ್ಲ ಎಂದು ಹೇಳಿದರು.
ರಾಜ್ಯ ಸರ್ಕಾರದ ನೀತಿಗಳ ವಿರುದ್ಧ ಜನರಲ್ಲಿ ಅಸಮಾಧಾನ ಹೆಚ್ಚಿದ್ದು, ಬಾಗಲಕೋಟೆ ಉಪಚುನಾವಣೆಯಲ್ಲಿ ಅದರ ಪ್ರತಿಫಲ ಕಾಣಲಿದೆ ಎಂದು ಅವರು ಹೇಳಿದರು.

ಈ ಸರಕಾರ ಅಭಿವೃದ್ಧಿಶೂನ್ಯವಾಗಿದೆ ಎಂದು ಜನರು ಮಾತನಾಡುತ್ತಿದ್ದಾರೆ. ಮುಖ್ಯಮಂತ್ರಿಗಳು ಅಹಿಂದ ನಾಯಕ ಎಂದು ಪದೇ ಪದೇ ಹೇಳಿಕೊಳ್ಳುತ್ತಾರೆ. ಅಹಿಂದ ಸಮುದಾಯಕ್ಕೆ, ದಲಿತ ಸಮುದಾಯಗಳಿಗೆ ಅನ್ಯಾಯ ಆಗಿರುವ ಬಗ್ಗೆ ಆಕ್ರೋಶ ವ್ಯಕ್ತವಾಗುತ್ತಿದೆ ಎಂದು ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರು ತಿಳಿಸಿದ್ದಾರೆ.

ಬಿಜೆಪಿ ಅಧಿಕಾರದ ಅವಧಿಯಲ್ಲಿ ನಾವು ಎಸ್‍ಸಿ, ಎಸ್‍ಟಿ ಸಮುದಾಯಗಳ ಮೀಸಲಾತಿಯನ್ನು ಹೆಚ್ಚಿಸಿದ್ದೆವು. ಅದನ್ನು ಈ ಸರಕಾರ ಕಡಿಮೆ ಮಾಡಿದೆ. ಈ ದೊಡ್ಡ ಕೊಡುಗೆಯನ್ನು ಸಿದ್ದರಾಮಯ್ಯನವರ ಸರಕಾರ ನೀಡಿದೆ ಎಂದು ವ್ಯಂಗ್ಯವಾಡಿದರು. ಈ ಸಮಾಜವನ್ನು ತ್ರಿಶಂಕು ಸ್ಥಿತಿಗೆ ತಳ್ಳಿದ್ದಾರೆ ಎಂದು ಟೀಕಿಸಿದರು.

ಎಸ್‍ಸಿ, ಎಸ್‍ಟಿ ಸಮುದಾಯಗಳ ಅಭಿವೃದ್ಧಿಗೆ ಮೀಸಲು ಹಣವನ್ನು ಅನ್ಯ ಉದ್ದೇಶಕ್ಕೆ ಬಳಸುತ್ತಿದ್ದಾರೆ. ಉಚಿತ ಯೋಜನೆಗಳಿಗೆ ಹಣ ಬಳಸಿಕೊಳ್ಳಲು ಆರಂಭಿಸಿದ್ದಾರೆ ಎಂದು ದೂರಿದರು. ಒಳ ಮೀಸಲಾತಿಯಲ್ಲೂ ಗೊಂದಲ ಸೃಷ್ಟಿಸಿದ್ದಾರೆ ಎಂದು ಟೀಕಿಸಿದರು. ಕಾಂಗ್ರೆಸ್ಸಿನ ಜನವಿರೋಧಿ, ದಲಿತ ವಿರೋಧಿ ನೀತಿಗೆ ಜನತೆ ಎರಡೂ ಕಡೆಗಳಲ್ಲಿ ಪಾಠ ಕಲಿಸುತ್ತಾರೆ ಎಂದು ತಿಳಿಸಿದರು. ಯುವಜನರ ಹಿತದೃಷ್ಟಿಯಿಂದ ತಕ್ಷಣವೇ ಖಾಲಿ ಹುದ್ದೆ ಭರ್ತಿ ಮಾಡಲು ಆಗ್ರಹಿಸಿದರು.

You may also like

Leave a Comment