Wednesday, April 15, 2026
Home ಅಪರಾಧ ಸುದ್ದಿಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಕೊಲೆಗೈದ ಆಸಾಮಿಗಳು

ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಕೊಲೆಗೈದ ಆಸಾಮಿಗಳು

by Dharmaraju
0 comments

ವರ್ತೂರು: ಬೆಂಗಳೂರಿನ ವರ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರನ್ನು ಅಪರಿಚಿತ ವ್ಯಕ್ತಿಗಳು ಕ್ರೂರವಾಗಿ ಕೊಲೆಗೈದ ಘಟನೆ ಬಳಗೆರೆ ಮುಖ್ಯರಸ್ತೆಯ ಸ್ಕಂದ ಎಲಿನಾ ಅಪಾರ್ಟ್ಮೆಂಟ್ ಮುಂಭಾಗದ ಪಾದಚಾರಿ ಮಾರ್ಗದಲ್ಲಿ ನಡೆದಿದೆ.

ರಾತ್ರಿ ಸುಮಾರು 12 ಗಂಟೆ ಸುಮಾರಿಗೆ ಘಟನೆ ಸಂಭವಿಸಿರುವುದಾಗಿ ತಿಳಿದುಬಂದಿದೆ.

ದಲಾ ರಾಮ್ ಎಂಬಾತ ಈ ದುರಂತದಲ್ಲಿ ಮೃತಪಟ್ಟ ವ್ಯಕ್ತಿಯಾಗಿದ್ದು, ಅಪರಿಚಿತ ವ್ಯಕ್ತಿಗಳ ಗುಂಪೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವುದಾಗಿ ಪೊಲೀಸರು ಶಂಕಿಸಿದ್ದಾರೆ.

ದಲಾರಾಮ್‌ ತಪ್ಪಿಸಿಕೊಳ್ಳಲು ಸ್ವಲ್ಪ ದೂರ ಓಡಿದ್ದು ಸಾಧ್ಯವಾಗದೇ ಫುಟ್‌ಪಾತ್‌ನಲ್ಲಿ ಕುಸಿದು ಬಿದ್ದು ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದಾನೆ.ಸಾರ್ವಜನಿಕರು ಗಮನಿಸಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.

ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಯುವಕನನ್ನು ಯಾರು, ಯಾವ ಕಾರಣಕ್ಕಾಗಿ ಕೊಲೆ ಮಾಡಿದ್ದಾರೆಂಬುವುದು ಸದ್ಯಕ್ಕೆ ತಿಳಿದುಬಂದಿಲ್ಲ. ಪೊಲೀಸರು ಘಟನಾ ಸ್ಥಳದ ಸುತ್ತಮುತ್ತಲಿನ ಸಿಸಿ ಕ್ಯಾಮೆರಾಗಳನ್ನು ಪರಿಶೀಲಿಸಿ ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

You may also like

Leave a Comment