Wednesday, April 15, 2026
Home ಬೆಂಗಳೂರು ಗ್ರಾಮಾಂತರಜಿಲ್ಲಾಡಳಿತ ಭವನದಲ್ಲಿ ಡಾ. ಬಾಬು ಜಗಜೀವನ್ ರಾಮ್ ಜಯಂತಿ ಆಚರಣೆ

ಜಿಲ್ಲಾಡಳಿತ ಭವನದಲ್ಲಿ ಡಾ. ಬಾಬು ಜಗಜೀವನ್ ರಾಮ್ ಜಯಂತಿ ಆಚರಣೆ

by Dharmaraju
0 comments

ಬೆಂ.ಗ್ರಾ.ಜಿಲ್ಲೆ: ಹಸಿರು ಕ್ರಾಂತಿಯ ಹರಿಕಾರ ಹಾಗೂ ಭಾರತದ ಮಾಜಿ ಉಪ ಪ್ರಧಾನಿಗಳಾದ ಡಾ|| ಬಾಬು ಜಗಜೀವನ ರಾಂ ರವರ 119ನೇ ಜನ್ಮ ದಿನಾಚರಣೆಯ ಅಂಗವಾಗಿ ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ ಹಾಗೂ ಅತಿಥಿಗಳು ಡಾ. ಬಾಬು ಜಗಜೀವನ್ ರಾಮ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಗೌರವ ನಮನ ಸಲ್ಲಿಸಿದರು.

ಇಂದು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಡಾ. ಬಾಬು ಜಗಜೀವನ್ ರಾಂ ಅವರ ಜಯಂತಿ ಆಚರಿಸಲಾಯಿತು.

ಡಾ. ಬಾಬು ಜಗಜೀವನ್ ರಾಮ್ ಅವರು ಭಾರತದ ಸ್ವಾತಂತ್ರ್ಯ ಹೋರಾಟಗಾರ, ಶೋಷಿತ ವರ್ಗಗಳ ನಾಯಕ, ಮಾಜಿ ಉಪ ಪ್ರಧಾನಿ ಮತ್ತು ಹಸಿರು ಕ್ರಾಂತಿಯ ಹರಿಕಾರರಾಗಿದ್ದಾರೆ. ದಲಿತ ಸಮುದಾಯದ ಏಳಿಗೆಗಾಗಿ ಶ್ರಮಿಸಿದ ಇವರ ಜನ್ಮದಿನವನ್ನು ಸಮಾನತೆ ಮತ್ತು ಸಾಮಾಜಿಕ ನ್ಯಾಯದ ದಿನವಾಗಿ ಏಪ್ರಿಲ್ 05 ರಂದು ಆಚರಿಸಲಾಗುತ್ತದೆ.

ಡಾ.ಬಾಬು ಜಗಜೀವನ ರಾಮ್ ಅವರು ಧೀಮಂತ ರಾಷ್ಟ್ರೀಯ ನಾಯಕ, ಸ್ವಾತಂತ್ರ್ಯ ಮತ್ತು ಸಾಮಾಜಿಕ ನ್ಯಾಯ ಹೋರಾಟಗಾರ. ತಳಸಮುದಾಯದ ಜನರಿಗೆ ಸಂವಿಧಾನಬದ್ಧ ನ್ಯಾಯ ದೊರಕಿಸಲು ಹೋರಾಡಿದರು.ಅವರ ದಕ್ಷ ಆಡಳಿತದಿಂದ ನಮ್ಮ ಮುಂದೆ ಅವರು ಆದರ್ಶಪ್ರಾಯರಾಗಿದ್ದಾರೆ. ಕೃಷಿ ಸಚಿವರಾಗಿ ಅವರು ಮಾಡಿದ ವಿನೂತನ, ಅಮೋಘ ಸೇವೆಗೆ ದೇಶ ಅವರನ್ನು ‘ಹಸಿರು ಕ್ರಾಂತಿಯ ಹರಿಕಾರ’ ಎಂದೇ ಕರೆಯಿತು. ಇಂದು ಭವಿಷ್ಯದ ಭಾರತಕ್ಕೆ ನಮ್ಮೆಲ್ಲರಿಗೂ ಆದರ್ಶರಾಗಿದ್ದಾರೆ.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ, ಜಿ. ಪಂ. ಉಪಕಾರ್ಯದರ್ಶಿ ಶಿವಕುಮಾರ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಪ್ರೇಮಾ, ಸರ್ಕಾರಿ ಕಾಲೇಜಿನ ಉಪ ನಿರ್ದೇಶಕಿ (ಪ್ರ) ಸುನಿತಾ ಡಿ.ಎಸ್ , ವಿವಿಧ ಸಮುದಾಯದ ಮುಖಂಡರು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

You may also like

Leave a Comment