Wednesday, April 15, 2026
Home ಅಪರಾಧ ಸುದ್ದಿಸಿಗರೇಟ್‌ ವಿಚಾರಕ್ಕೆ ಗ್ಯಾಂಗ್‌ವಾರ್‌, ಮದ್ದೂರಿನಲ್ಲಿ ರೌಡಿಶೀಟರ್‌ ಬರ್ಬರ ಹ*ತ್ಯೆ

ಸಿಗರೇಟ್‌ ವಿಚಾರಕ್ಕೆ ಗ್ಯಾಂಗ್‌ವಾರ್‌, ಮದ್ದೂರಿನಲ್ಲಿ ರೌಡಿಶೀಟರ್‌ ಬರ್ಬರ ಹ*ತ್ಯೆ

by Dharmaraju
0 comments

ಮಂಡ್ಯ:-ಕ್ಷುಲ್ಲಕ ವಿಚಾರಕ್ಕೆ ಎರಡು ಯುವಕರ ಗುಂಪುಗಳ ನಡುವೆ ನಡೆದ ಗಲಾಟೆ ಓರ್ವನ ಕೊ*ಲೆಯಲ್ಲಿ ಅಂತ್ಯವಾದ ಘಟನೆ ಮಂಡ್ಯ ಜಿಲ್ಲೆ ಮದ್ದೂರಿನ ಹೊಳೆ ಆಂಜನೇಯ ರಸ್ತೆಯ ಪಟೇಲ್ ಸಾಮಿಲ್ ಬಳಿ ನಡೆದಿದೆ.

ಕ್ಷುಲ್ಲಕ ಕಾರಣಕ್ಕೆ ತಡರಾತ್ರಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಸಿಗರೇಟ್‌ ವಿಚಾರವಾಗಿ ಎದ್ದ ತಗಾದೆ ಎರಡು ಗುಂಪುಗಳ ನಡುವೆ ಬಡಿದಾಟಕ್ಕೆ ತಿರುಗಿದ್ದು, ಇದರಲ್ಲಿ ರೌಡಿ ಶೀಟರ್, ಮರಳಿಗ ಗ್ರಾಮದ ಯಶ್ವಂತ್ @ಕಜ್ಜಿ ಅಭಿ ಎಂಬಾತನನ್ನು ಕೊಲೆ ಮಾಡಲಾಗಿದೆ. ಗೊರವನಹಳ್ಳಿ ಗ್ರಾಮದ ದರ್ಶನ್, ಸಚಿನ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ಇಬ್ಬರಿಗೂ ಮಂಡ್ಯ ಮಿಮ್ಸ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆ ಬಳಿಕ ಸ್ಥಳಕ್ಕೆ ಮಂಡ್ಯ ಎಸ್ಪಿ ಶೋಭಾರಾಣಿ ಭೇಟಿ, ಪರಿಶೀಲನೆ ನಡೆದಿದ್ದಾರೆ. ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

You may also like

Leave a Comment