ಬೆಂಗಳೂರು:ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 5 ಕೋಟಿಗೂ ಅಧಿಕ ಮೌಲ್ಯದ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಐವರು ಆರೋಪಿಗಳನ್ನು DRI ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ.
ಏರ್ಪೋರ್ಟ್ ನ ಟರ್ಮಿನಲ್ -2 ರ ಮೂಲಕ ಅಂತಾರಾಷ್ಟ್ರೀಯ ಮಟ್ಟದ ಕಳ್ಳಸಾಗಣೆಯ ಗ್ಯಾಂಗ್ ಚಿನ್ನವನ್ನು ಕಳ್ಳಸಾಗಣೆ ಮಾಡಲು ಮುಂದಾಗಿದೆ ಎಂಬ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಡಿಆರ್‌ಐ ಅಧಿಕಾರಿಗಳು, ಐವರು ಆರೋಪಿಗಳನ್ನು ಪರಿಶೀಲನೆ ನಡೆಸಿ ಅವರಿಂದ ಸುಮಾರು 5 ಕೋಟಿ ರೂಪಾಯಿ ಮೌಲ್ಯದ 3 ಕೆಜಿ 356 ಗ್ರಾಂ ಶುದ್ಧ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ..
ಪ್ರಾಥಮಿಕ ತನಿಖೆಯ ವೇಳೆ ಗಡಿಯಾಚೆಗಿನ ಕಳ್ಳಸಾಗಣೆಯ ಸಿಂಡಿಕೇಟ್‌ನ ಭಾಗವಾಗಿದೆ ಎಂದು ಕಂಡು ಬಂದಿದೆ. ಇದರಲ್ಲಿ ವಿದೇಶಿಯರು-ಬಾಂಗ್ಲಾದೇಶಿ ಪ್ರಜೆಗಳು ಇರುವ ಶಂಕೆ ಇದೆ. ಈ ಸಂಬಂಧ ಐವರನ್ನು ಬಂಧಿಸಲಾಗಿದ್ದು, ಪ್ರಮುಖ ಕಿಂಗ್‌ಪಿನ್‌ಗಳು ಹಾಗೂ ಈ ನೆಟ್‌ವರ್ಕ್ ಅನ್ನು ಪತ್ತೆ ಹಚ್ಚಲು ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಾಂಗ್ಲಾದೇಶದ ಪ್ರಜೆಗಳು ಸ್ಥಳೀಯರ ಸಹಕಾರದೊಂದಿಗೆ ಚಿನ್ನ ಕಳ್ಳಸಾಗಣೆ ಮಾಡಲು ಮುಂದಾಗಿದ್ದರು. ಅದರಂತೆ ಚಿನ್ನವನ್ನು ದೇಹದ ವಿವಿಧ ಅಂಗಗಳಲ್ಲಿ ಮರೆಮಾಚಿಕೊಂಡು ಶೌಚಾಲಯಗಳು ಮತ್ತು ಧೂಮಪಾನ ವಲಯಗಳಂತಹ ಸೂಕ್ಷ್ಮ ಪ್ರದೇಶಗಳಲ್ಲಿ ಪಾಸ್‌ಕೋಡ್ ಬಳಸಿಕೊಂಡು ಕಸ್ಟಮ್ಸ್ ಅಧಿಕಾರಿಗಳ ಕಣ್ಣು ತಪ್ಪಿಸಿ ಚಿನ್ನವನ್ನು ವರ್ಗಾಯಿಸಲು ಮುಂದಾಗಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.