ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಇಂದು (ಏಪ್ರಿಲ್ 09) ಪ್ರಕಟವಾಗಿದೆ. ಈಗಾಗಲೇ ಆನ್‌ಲೈನ್‌ನಲ್ಲಿ ಫಲಿತಾಂಶ ಲಭ್ಯವಿದ್ದು, ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿಯನ್ನು ವೀಕ್ಷಿಸಬಹುದಾಗಿದೆ.
2025 26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಇದೀಗ ಪ್ರಕಟವಾಗಿದ್ದು ವಾಣಿಜ್ಯ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ದಿಶಾ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 600 ಕ್ಕೆ 600 ಅಂಕಗಳನ್ನು ಪಡೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ವಾಣಿಜ್ಯ ವಿಭಾಗದಲ್ಲಿ ದಿಶಾ ರಾಜ್ಯಕ್ಕೆ ಟಾಪರ್ ಹೊರಹೊಮ್ಮಿದ್ದಾರೆ.
ಇನ್ನು ಕಲಾ ವಿಭಾಗದಲ್ಲಿ ಸಂಗೀತ ಎನ್ನುವ ವಿದ್ಯಾರ್ಥಿನಿ 600 ಕ್ಕೆ 598 ಅಂಕ ಪಡೆದು ರಾಜ್ಯಕ್ಕೆ ಟಾಪರ್ ಆಗಿ ಹೊರಹೊಮ್ಮಿದ್ದಾಳೆ. ಅದೇ ರೀತಿಯಾಗಿ ತುಮಕೂರು ವಿದ್ಯಾವಾಹಿನಿ ಕಾಲೇಜ್, ವಿದ್ಯಾರ್ಥಿಯಾಗಿರುವ ರೋಹನ್ ಎಂಬ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 597 ಪಡೆದು ಎರಡನೇ ಸ್ಥಾನ ಪಡೆದಿದ್ದಾನೆ. ವಿಜ್ಞಾನ ವಿಷಯದಲ್ಲಿ 600 ಕ್ಕೆ 593 ಅಂಕ ಗಳಿಸಿ ಕೋಲಾರದ ಸಹ್ಯಾದ್ರಿ ಕಾಲೇಜಿನ ವಿದ್ಯಾರ್ಥಿನಿ ಶ್ರೀಲಯ ರಾಜ್ಯಕ್ಕೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ.ವಿಜ್ಞಾನ ವಿಷಯದಲ್ಲಿ ಶೇಕಡಾ 98 ರಷ್ಟು ಅಂಕ ಪಡೆದು ಸಾಧನೆ ಮಾಡಿದ್ದಾರೆ.
9 ವಿದ್ಯಾರ್ಥಿಗಳಿಗೆ 590ಕ್ಕಿಂತ ಅಧಿಕ ಅಂಕ
ವಾಣಿಜ್ಯ ವಿಭಾಗದಲ್ಲಿ 9 ವಿದ್ಯಾರ್ಥಿಗಳು 590ಕ್ಕಿಂತ ಅಧಿಕ ಅಂಕ ಗಳಿಸಿದ್ದಾರೆ. ಒಂದೇ ಕಾಲೇಜಿನ 9 ವಿದ್ಯಾರ್ಥಿಗಳು ವಾಣಿಜ್ಯ ವಿಭಾಗದಲ್ಲಿ ಈ ಸಾಧನೆ ಮಾಡಿದ್ದಾರೆ.
ಬೆಂಗಳೂರಿನ ರಾಜಾಜಿನಗರದ ASC ಕಾಲೇಜಿನ 9 ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ.
ಉಡುಪಿಗೆ ಮೊದಲ ಸ್ಥಾನ
ಈ ಬಾರಿಯ ಪಿಯುಸಿ ಫಲಿತಾಂಶದಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳು ಪ್ರಥಮ ಸ್ಥಾನ ಪಡೆದಿವೆ. ಈ ಬಾರಿಯೂ ಈ ಎರಡು ಜಿಲ್ಲೆಗಳು ಅತ್ಯಧಿಕ ಪಾಸ್ ಪ್ರಮಾಣ ದಾಖಲಿಸಿವೆ.
ಬೆಂಗಳೂರು ನಗರ ಮತ್ತು ಮೈಸೂರು ಜಿಲ್ಲೆಗಳೂ ಉತ್ತಮ ಸಾಧನೆ ತೋರಿದ್ದು, ಯಾದಗಿರಿ ಕೊನೆಯ ಸ್ಥಾನದಲ್ಲಿದೆ.
ಅತಿ ಹೆಚ್ಚು ಅಂಕ ಪಡೆದ ಟಾಪರ್ ಗಳು
ವಾಣಿಜ್ಯ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ಅವರು 600 ಅಂಕಗಳಿಗೆ 600 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
ಇನ್ನು ಕಲಾ ವಿಭಾಗದಲ್ಲಿ ಬಳ್ಳಾರಿ ಜಿಲ್ಲೆಯ ಕೊಟ್ಟೂರಿನ ಇಂದು ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರಾದ ಅರ್ಚನಾ ಮತ್ತು ಸಂಗೀತ ಅವರು 600 ಅಂಕಗಳಿಗೆ 598 ಪಡೆದು ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಮನ್ಯು ಎಸ್. ಶೆಟ್ಟಿ ಅವರು 600 ಅಂಕಗಳಿಗೆ 598 ಅಂಕ ಪಡೆದು ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದ್ದಾರೆ.