Tuesday, May 19, 2026
Home ಅಪರಾಧ ಸುದ್ದಿಪಿಯುಸಿ ಫಲಿತಾಂಶ ದಿನವೇ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಶವ ಪತ್ತೆ: ತಾಯಿಯ ವಿರುದ್ಧ ಸಂಬಂಧಿಕರ ಆರೋಪ!

ಪಿಯುಸಿ ಫಲಿತಾಂಶ ದಿನವೇ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಶವ ಪತ್ತೆ: ತಾಯಿಯ ವಿರುದ್ಧ ಸಂಬಂಧಿಕರ ಆರೋಪ!

by Dharmaraju
0 comments

ಬೆಂಗಳೂರು: ದ್ವೀತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಳಾದ ಕಾರಣ ಮನನೊಂದ 17 ವರ್ಷದ ವಿದ್ಯಾರ್ಥಿನಿ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೆಬ್ಬಾಳದ ಮನೋರಾಯನಪಾಳ್ಯದಲ್ಲಿರುವ ನಡೆದಿದೆ.

ಮೃತ ವಿದ್ಯಾರ್ಥಿನಿಯನ್ನು ತನುಶ್ರೀ ಎಂದು ಗುರುತಿಸಲಾಗಿದೆ.
ಈಕೆ ನಗರದ ಖಾಸಗಿ ಕಾಲೇಜೊಂದರಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದರು.ಮೃತ ತನುಶ್ರೀ ಖಾಸಗಿ ಕಾಲೇಜೊಂದರಲ್ಲಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯಾಗಿದ್ದರು. ಗುರುವಾರ ಫಲಿತಾಂಶ ಬಂದಾಗ ತನುಶ್ರೀ ಮೂರು ವಿಷಯಗಳಲ್ಲಿ ಅನುತ್ತೀರ್ಣರಾಗಿದ್ದರು. ಅವರ ತಾಯಿ ಆಶಾ ಕೆಲಸಕ್ಕೆ ಹೋಗಿದ್ದರಿಂದ ತನುಶ್ರೀ ಒಬ್ಬರೇ ಇದ್ದರು. ಇದರಿಂದ ತೀವ್ರವಾಗಿ ನೊಂದಿದ್ದ ಅವರು, ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.

ಫಲಿತಾಂಶದ ವಿಚಾರವಾಗಿ ತನುಶ್ರೀ ತನ್ನ ಸ್ನೇಹಿತರಿಗೆ ಕರೆ ಮಾಡಿ ಮಾತನಾಡಿದ್ದರು. ಅವರು ಒಬ್ಬರೇ ಇದ್ದಿದ್ದರಿಂದ ಸ್ನೇಹಿತರು ತಮ್ಮ ಬಳಿ ಬರುವಂತೆ ಒತ್ತಾಯಿಸಿದ್ದರು. ಆದರೆ, ಬಳಿಕ ತನುಶ್ರೀ ಕರೆ ಹಾಗೂ ಮೆಸೇಜ್‌ಗಳಿಗೆ ಪ್ರತಿಕ್ರಿಯಿಸಿಲ್ಲ. ಅನುಮಾನಗೊಂಡ ಸ್ನೇಹಿತರು ಮನೆಗೆ ಧಾವಿಸಿದಾಗ ಘಟನೆ ಬೆಳಕಿಗೆ ಬಂದಿದೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ತನುಶ್ರೀ ಸಾವಿನ ಹಿಂದೆ ಅನುಮಾನ:
ತನುಶ್ರೀ ಸಾವು ನಾನಾ ಅನುಮಾನಕ್ಕೆ ಎಡೆಮಾಡಿಕೊಟ್ಟಿದ್ದು, ತಾಯಿಯ ಅನೈತಿಕ ಸಂಬಂಧಕ್ಕೆ ಅಪ್ರಾಪ್ತ ಮಗಳ ಬಲಿಯಾಗಿದ್ದಾಳೆ. ಪಿಯುಸಿ ರಿಸಲ್ಟ್ ದಿನವೇ ಮಗಳಿಗೆ ಮುಹೂರ್ತವಿಟ್ಟು ಕೊಲೆ ಮಾಡಿದ್ದಾರೆ ಎಂದು ತನುಶ್ರೀ ತಂದೆಯ ಕಡೆಯ ಸಂಬಂಧಿಕರು ಆರೋಪ ಮಾಡಿದ್ದಾರೆ. ಈ ಹಿಂದೆ ತನುಶ್ರೀ ತಂದೆ ಕೂಡ ಹೆಂಡ್ತಿಯ ಅನೈತಿಕ ಸಂಬಂಧ ಗೊತ್ತಾಗಿಯೇ ಮೃತಪಟ್ಟಿದ್ದರು ಎಂದು ಆರೋಪಿಸಲಾಗಿದೆ.

ತನುಶ್ರೀ ತಂದೆ 2 ವರ್ಷದ ಹಿಂದೆ ಮೃತಪಟ್ಟಿದ್ದರು. ತನುಶ್ರೀ ತನ್ನ ತಾಯಿಯೊಂದಿಗೆ ವಾಸವಾಗಿದ್ದಳು.ಮಗಳ ಸಾವಿನ ಸುದ್ದಿ ತಿಳಿದು ಸ್ಥಳಕ್ಕೆ ಬಂದ ತಂದೆ ಸಂಬಂಧಿಕರು, ಇದೊಂದು ಆತ್ಮಹತ್ಯೆಯಲ್ಲ, ಇದರಲ್ಲಿ ತಾಯಿಯ ಪಾತ್ರವಿದೆ ಎಂದು ಆರೋಪಿಸಿದ್ದಾರೆ. ಬಾಲಕಿಯ ದೇಹದ ಮೇಲೆ ಗಾಯದ ಗುರುತುಗಳಿವೆಯೆಂದು ಸಂಬಂಧಿಕರು ದೂರಿದ್ದಾರೆ.ಫಲಿತಾಂಶ ಬಂದ ನಂತರ ತಾಯಿ ಮತ್ತು ಮಗಳ ನಡುವೆ ಜಗಳ ನಡೆದಿರಬಹುದು ಅಥವಾ ಮಗಳನ್ನು ಕೊಲೆ ಮಾಡಿ ಆತ್ಮಹತ್ಯೆಯ ನಾಟಕವಾಡಲಾಗುತ್ತಿದೆ ಎಂಬುದು ತಂದೆಯ ಕಡೆಯವರ ಗಂಭೀರ ಆರೋಪವಾಗಿದೆ.

ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಬಾಲಕಿಯ ತಾಯಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ವರದಿಯ ನಂತರವಷ್ಟೇ ಇದು ಆತ್ಮಹತ್ಯೆಯೇ ಅಥವಾ ಕೊಲೆಯೇ ಎಂಬ ಸತ್ಯಾಂಶ ಹೊರಬರಬೇಕಿದೆ.

You may also like

Leave a Comment