Tuesday, May 19, 2026
Home ಜಿಲ್ಲಾ‌ಸುದ್ದಿಬೆಟ್ಟಿಂಗ್‌ ಆಟದಲ್ಲಿ ಭಾರಿ ನಷ್ಟ; ಸಾಲಗಾರರ ಬಾಧೆ ತಾಳದೆ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

ಬೆಟ್ಟಿಂಗ್‌ ಆಟದಲ್ಲಿ ಭಾರಿ ನಷ್ಟ; ಸಾಲಗಾರರ ಬಾಧೆ ತಾಳದೆ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

by Dharmaraju
0 comments

ಕಲಬುರಗಿ: ರಾಜ್ಯದಲ್ಲಿ ಐಪಿಎಲ್ ಪಂದ್ಯಾವಳಿ ನಡೆಯುತ್ತಿದ್ದು, ಬೆಟ್ಟಿಂಗ್ ಹೆಚ್ಚಾಗುತ್ತಿದೆ. ಬೆಟ್ಟಿಂಗ್‌ನಲ್ಲಿ ಭಾರಿ ನಷ್ಟವಾದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ಡ್ಯಾಂಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ನಾಗೂರ ಬಳಿ ನಡೆದಿದೆ.

ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಕಾಳಗಿ ತಾಲೂಕಿನ ರುಮ್ಮನಗೂಡ್ ನಿವಾಸಿ ಚಂದ್ರಕಾಂತ ದೇಸಾಯಿ(40) ಎಂದು ಗುರುತಿಸಲಾಗಿದೆ.

ಚಂದ್ರಕಾಂತ ದೇಸಾಯಿ ಅವರು ಐಪಿಎಲ್ ಬೆಟ್ಟಿಂಗ್ ಆಡಿ ಸಿಕ್ಕಾಪಟ್ಟೆ ಹಣ ಕಳೆದುಕೊಂಡಿದ್ದರು ಮತ್ತು ಸಾಲ ಮಾಡಿ, ಸಾಲಗಾರರ ಕಿರುಕುಳಕ್ಕೆ ಬೇಸತ್ತು, ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.

ಬೆಟ್ಟಿಂಗ್ ಚಟಕ್ಕೆ ಬಿದ್ದಿದ್ದ ಚಂದ್ರಕಾಂತ ತನ್ನ ಬಳಿಯಿದ್ದ ಹಣವನ್ನೆಲ್ಲಾ ಕಳೆದುಕೊಂಡಿದ್ದಲ್ಲದೆ, ಜೂಜಿಗಾಗಿ ಹಲವರಿಂದ ದೊಡ್ಡ ಮೊತ್ತದ ಸಾಲವನ್ನೂ ಮಾಡಿದ್ದರು. ಬೆಟ್ಟಿಂಗ್‌ನಲ್ಲಿ ಹಣ ಕೈಕೊಟ್ಟಿದ್ದರಿಂದ ತೀವ್ರ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಇತ್ತ ಸಾಲಗಾರರು ಹಣ ವಾಪಸ್ ನೀಡುವಂತೆ ಒತ್ತಡ ಹೇರುತ್ತಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ನಾಗೂರ ಸೇತುವೆ ಬಳಿ ತಲುಪಿದ ಚಂದ್ರಕಾಂತ ಅವರು, ತಮ್ಮ ಬೈಕ್ ಮತ್ತು ಮೊಬೈಲ್ ಫೋನ್ ಅನ್ನು ಸೇತುವೆ ಮೇಲೆ ಇಟ್ಟು, ಬೆಣ್ಣೆತೊರಾ ಜಲಾಶಯದ ಹಿನ್ನೀರಿಗೆ ಜಿಗಿದಿದ್ದಾರೆ. ಸ್ಥಳದಲ್ಲಿ ಬೈಕ್ ಮತ್ತು ಮೊಬೈಲ್ ಪತ್ತೆಯಾದ ಬಳಿಕ ಘಟನೆ ಬೆಳಕಿಗೆ ಬಂದಿದೆ.

ಸ್ಥಳಕ್ಕೆ ಬೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದು, ತನಿಖೆ ನಡೆಸುತ್ತಿದ್ದಾರೆ.ಘಟನೆಗೆ ಸಂಬಂಧಿಸಿದಂತೆ ಮಹಾಗಾಂವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

You may also like

Leave a Comment