Tuesday, May 19, 2026
Home ಜಿಲ್ಲಾ‌ಸುದ್ದಿಭೀಕರ ರಸ್ತೆ ಅಪಘಾತ; ಚಿತ್ರನಟ ಹರೀಶ್‌ ಸ್ಥಳದಲ್ಲೇ ಸಾವು

ಭೀಕರ ರಸ್ತೆ ಅಪಘಾತ; ಚಿತ್ರನಟ ಹರೀಶ್‌ ಸ್ಥಳದಲ್ಲೇ ಸಾವು

by Dharmaraju
0 comments

ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಆನೆಕಾಡು ಅರಣ್ಯ ಪ್ರದೇಶದ ಬಳಿ ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್ (40) ದಾರುಣವಾಗಿ ಮೃತಪಟ್ಟಿದ್ದಾರೆ.

ನಿನ್ನೆ ಕೆಲಸ ಮುಗಿಸಿಕೊಂಡು ಕುಶಾಲನಗರದಿಂದ ತಮ್ಮ ಸ್ವಗ್ರಾಮ ಹೊಸಕೋಟೆಗೆ ಕಾರಿನಲ್ಲಿ ತೆರಳುತ್ತಿದ್ದಾಗ, ರಸ್ತೆ ಬದಿಯಲ್ಲಿ ನಿಂತಿದ್ದ ಟ್ಯಾಂಕರ್‌ಗೆ ಕಾರು ವೇಗವಾಗಿ ಡಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿ, ಹರೀಶ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹರೀಶ್ ಅವರ ಅಕಾಲಿಕ ನಿಧನಕ್ಕೆ ಚಿತ್ರರಂಗದ ಗಣ್ಯರು ಮತ್ತು ಅಭಿಮಾನಿಗಳು ತೀವ್ರ ಕಂಬನಿ ಮಿಡಿದಿದ್ದಾರೆ. ಕೊಡಗಿನ ಸುಂದರ ಪರಿಸರದ ನಡುವೆ ನಡೆದ ಈ ದುರಂತವು ಎಲ್ಲರಲ್ಲೂ ವಿಷಾದ ಮೂಡಿಸಿದೆ

You may also like

Leave a Comment