Tuesday, May 19, 2026
Home ಜಿಲ್ಲಾ‌ಸುದ್ದಿಮಗಳ ಸಾವಿನಲ್ಲೂ ಸಾರ್ಥಕತೆ: ಅಂಗಾಂಗ ದಾನದಿಂದ 5 ಜೀವಗಳಿಗೆ ಬೆಳಕು ನೀಡಿದ ಪೋಷಕರು!

ಮಗಳ ಸಾವಿನಲ್ಲೂ ಸಾರ್ಥಕತೆ: ಅಂಗಾಂಗ ದಾನದಿಂದ 5 ಜೀವಗಳಿಗೆ ಬೆಳಕು ನೀಡಿದ ಪೋಷಕರು!

by Dharmaraju
0 comments

ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.

ಅರಸೀಕೆರೆ ತಾಲ್ಲೂಕಿನ, ಕಾರೇಹಳ್ಳಿ ಗ್ರಾಮದ ನಿವಾಸಿ ಮೋನಿಕಾ (18) ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದರು.

ಏ.5ರಂದು ಗೀಜಿಹಳ್ಳಿ ಎಪಿಎಂಸಿ ಉಪ ಪ್ರಾಂಗಣದಲ್ಲಿ ಕೆಲಸ ಮಾಡುತ್ತಿದ್ದ ತಾಯಿಯನ್ನು ಕರೆದುಕೊಂಡು ಬರಲು ಸ್ಕೂಟರ್‌ನಲ್ಲಿ ಹೋಗಿದ್ದ ವೇಳೆ ಕಾರು ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿತ್ತು. ತೀವ್ರವಾಗಿ ಗಾಯಗೊಂಡ ಮೋನಿಕಾಳನ್ನು ತಕ್ಷಣ ಹಾಸನದ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ತೀವ್ರ ಪೆಟ್ಟಾಗಿದ್ದರಿಂದ ಯುವತಿ ಸ್ಥಿತಿ ಗಂಭೀರವಾಗಿದ್ದು ನಂತರ ಮೆದುಳು ನಿಷ್ಕ್ರಿಯವಾಗಿತ್ತು. ವೈದ್ಯರು ಮೋನಿಕಾಳ ಪೋಷಕರಿಗೆ ಈ ವಿಷಯ ತಿಳಿಸಿದ್ದಾರೆ. ಪೋಷಕರು ಶೋಕ ಸಾಗರದಲ್ಲಿ ಮುಳುಗಿದ್ದಾರೆ. ನಂತರ ಮಗಳ ಅಂಗಾಂಗ ದಾನಕ್ಕೆ ಒಪ್ಪಿಗೆ ನೀಡಿದ್ದು, 5 ಜೀವಗಳಿಗೆ ಹೊಸ ಬೆಳಕು ನೀಡಿದ್ದಾರೆ.

ನೂರಾರು ಆಸೆ, ಕನಸುಗಳೊಂದಿಗೆ ಬದುಕು ಸಾಗಿಸಬೇಕಾಗಿದ್ದ ಯುವತಿ, ವಿಧಿಯ ಆಟಕ್ಕೆ ಬಲಿಯಾಗಿದ್ದಾರೆ. ತನ್ನ ಜೀವನದ ಕೊನೆಯ ಕ್ಷಣದಲ್ಲಿಯೇ ಮಾನವೀಯತೆಯ ಮಹತ್ತರ ಸಂದೇಶವೊಂದನ್ನು ಬಿಟ್ಟು ಹೋಗುವ ಮೂಲಕ ಮೋನಿಕಾ ಅನೇಕ ಹೃದಯಗಳಲ್ಲಿ ಚಿರಸ್ಥಾಯಿಯಾಗಿ ಉಳಿದಿದ್ದಾಳೆ.

You may also like

Leave a Comment