Tuesday, May 19, 2026
Home ಬೆಂಗಳೂರು ಗ್ರಾಮಾಂತರದೊಡ್ಡಬಳ್ಳಾಪುರ; ಉಪವಿಭಾಗಾಧಿಕಾರಿ ದುರ್ಗಾಶ್ರೀ ವರ್ಗಾವಣೆ ಮಾಡಿ ಸರ್ಕಾರ ಆದೇಶ!

ದೊಡ್ಡಬಳ್ಳಾಪುರ; ಉಪವಿಭಾಗಾಧಿಕಾರಿ ದುರ್ಗಾಶ್ರೀ ವರ್ಗಾವಣೆ ಮಾಡಿ ಸರ್ಕಾರ ಆದೇಶ!

by Raghavendra H A
0 comments

ದೊಡ್ಡಬಳ್ಳಾಪುರ; ಉಪವಿಭಾಗಾಧಿಕಾರಿ ದುರ್ಗಶ್ರೀ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದು ಇವರ ಸ್ಥಳಕ್ಕೆ ಮಂಜುನಾಥ್ ಟಿ.ಆರ್ ಕೆ.ಎ.ಎಸ್ ಅವರನ್ನು ನೇಮಿಸಿದೆ.

ಕಳೆದ ಎರಡು ವರ್ಷಗಳಿಂದ ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ದುರ್ಗಶ್ರೀ ಕೆ.ಎ.ಎಸ್ (ಕಿರಿಯ ಶ್ರೇಣಿ) ಇವರನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೆ ವರದಿ ಮಾಡಿಕೊಳ್ಳುವಂತೆ ಸರ್ಕಾರ ಆದೇಶಿಸಿದೆ.

ಈ ಆದೇಶ ಪತ್ರದಲ್ಲಿ  ಮಂಜುನಾಥ್ ಅವರನ್ನು ದೊಡ್ಡಬಳ್ಳಾಪುರಕ್ಕೆ ವರ್ಗಾವಣೆ ಮಾಡುವ ಮೊದಲು ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಕ್ಕೆ ಸ್ಥಳ ನಿಯುಕ್ತಿ ಮಾಡಿ ಆದೇಶಿಸಲಾಗಿತ್ತು, ಬಳಿಕ ದೊಡ್ಡಬಳ್ಳಾಪುರ ಉಪವಿಭಾಗ ಕಚೇರಿಗೆ ವರ್ಗಾವಣೆ ಮಾಡಲಾಗಿದೆ.

You may also like

Leave a Comment