Tuesday, May 19, 2026
Home ಶಿಕ್ಷಣSSLC Result: 625ಕ್ಕೆ 625 ಅಂಕ ಪಡೆದ ಸಾಧಕರು ಯಾರು ಯಾರು ಗೊತ್ತಾ…!

SSLC Result: 625ಕ್ಕೆ 625 ಅಂಕ ಪಡೆದ ಸಾಧಕರು ಯಾರು ಯಾರು ಗೊತ್ತಾ…!

by Dharmaraju
0 comments

ಬೆಂಗಳೂರು: 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷಾ ಫಲಿತಾಂಶವು ಹೊಸ ಇತಿಹಾಸ ಬರೆದಿದೆ. ಈ ಬಾರಿ ಕೇವಲ ಒಬ್ಬಿಬ್ಬರಲ್ಲ, ರಾಜ್ಯದ ಹಲವು ಜಿಲ್ಲೆಗಳ ಪ್ರತಿಭಾನ್ವಿತ ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ Rank ಹಂಚಿಕೊಂಡಿದ್ದಾರೆ.

ಗ್ರಾಮೀಣ ಭಾಗದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಂದ ಹಿಡಿದು ನಗರ ಪ್ರದೇಶದ ಕಾನ್ವೆಂಟ್ ವಿದ್ಯಾರ್ಥಿಗಳವರೆಗೆ ಎಲ್ಲರೂ ಈ ಪಟ್ಟಿಯಲ್ಲಿ ಸ್ಥಾನ ಪಡೆದಿರುವುದು ವಿಶೇಷ.

625ಕ್ಕೆ 625 ಅಂಕ ಪಡೆದ ಸಾಧಕರ ಪಟ್ಟಿ ಇಲ್ಲಿದೆ:
ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ನಾಗರಬೆಟ್ಟದ ಆಕ್ಸ್‌ಫರ್ಡ್ ಶಾಲೆಯ ವಿದ್ಯಾರ್ಥಿನಿ ಸೌಜನ್ಯ ಕಂದಕೂರ 625ಕ್ಕೆ 625 ಅಂಕಗಳನ್ನು ಗಳಿಸಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಕಣವೆಬಿಳಚಿಯ ಭರತ್ ಕೂಡ 625ಕ್ಕೆ 625 ಪೂರ್ಣ ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಅಥಣಿ ತಾಲೂಕಿನ ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ಪ್ರಾರ್ಥನಾ ಬಿರಾದರ ಪಾಟೀಲ ಹಾಗೂ ಬೆಳಗಾವಿಯ ರೂಪಾ ಚನಗೌಡ ಪಾಟೀಲ ಇಬ್ಬರೂ 625ಕ್ಕೆ 625 ಅಂಕ ಗಳಿಸಿ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗೆ ಹೆಮ್ಮೆ ತಂದಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಬೃಂದಾ ಕೂಡ 625ಕ್ಕೆ 625 ಪೂರ್ಣ ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ Rank ಪಡೆದಿದ್ದಾರೆ.

ಬೆಂಗಳೂರು ಉತ್ತರ ಶೈಕ್ಷಣಿಕ ಜಿಲ್ಲೆಯ ಧನುಷ್ 625ಕ್ಕೆ 625 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ Rank ಪಡೆದಿದ್ದಾರೆ.

ಉಡುಪಿ ಜಿಲ್ಲೆಯ ಪ್ರೀತಂ ಪೂಜಾರಿ 625ಕ್ಕೆ 625 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ Rank ಪಡೆದಿದ್ದಾರೆ.

ಹಾಸನ ಜಿಲ್ಲೆಯ ಜಾಹ್ನವಿ 625ಕ್ಕೆ 625 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ Rank ಪಡೆದಿದ್ದಾರೆ.

ಈ ಬಾರಿ ಬಾಲಕಿಯರೇ ಮೇಲುಗೈ ಸಾಧಿಸಿದ್ದು, ಅತಿ ಹೆಚ್ಚು ವಿದ್ಯಾರ್ಥಿಗಳು 625 ಅಂಕಗಳನ್ನು ಪಡೆಯುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಸಚಿವ ಮಧು ಬಂಗಾರಪ್ಪ ಅವರು ಈ ಬಾರಿಯ ಫಲಿತಾಂಶದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಫಲಿತಾಂಶವು ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಸಂತೋಷದ ವಾತಾವರಣವನ್ನು ನಿರ್ಮಿಸಿದ್ದು, ಮುಂದಿನ ಶಿಕ್ಷಣ ಹಾಗೂ ವೃತ್ತಿ ಆಯ್ಕೆಗಳ ಕುರಿತು ಹೊಸ ಉತ್ಸಾಹ ಮೂಡಿಸಿದೆ.

You may also like

Leave a Comment