Tuesday, May 19, 2026
Home ಬೆಂಗಳೂರು ಗ್ರಾಮಾಂತರದೊಡ್ಡಬಳ್ಳಾಪುರ ಜೆಡಿಎಸ್ ಅಧ್ಯಕ್ಷರಾಗಿ ಹರೀಶ್ ಗೌಡ ನೇಮಕ

ದೊಡ್ಡಬಳ್ಳಾಪುರ ಜೆಡಿಎಸ್ ಅಧ್ಯಕ್ಷರಾಗಿ ಹರೀಶ್ ಗೌಡ ನೇಮಕ

by Raghavendra H A
0 comments

ಬೆಂಗಳೂರು: ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಜನತಾದಳ (ಜಾತ್ಯತೀತ) ಪಕ್ಷದ ಅಧ್ಯಕ್ಷರಾಗಿ ಹರೀಶ್ ಗೌಡ ಅವರನ್ನು ನೇಮಕ ಮಾಡಲಾಗಿದೆ.

ಜಿಲ್ಲಾಧ್ಯಕ್ಷ ಕೆ.ವಿ. ಮಂಜುನಾಥ್ ಹಾಗೂ ಕೋರ್ ಕಮಿಟಿ ಅಧ್ಯಕ್ಷ ಕೃಷ್ಣಾರೆಡ್ಡಿ ಅವರು ಈ ಕುರಿತು ಆದೇಶ ಹೊರಡಿಸಿದ್ದು, ನೇಮಕಾತಿ ತಕ್ಷಣದಿಂದಲೇ ಜಾರಿಗೆ ಬಂದಿದೆ.

ಪಕ್ಷದ ತತ್ವ-ಸಿದ್ಧಾಂತಗಳಿಗೆ ಬದ್ಧವಾಗಿ ಕಾರ್ಯನಿರ್ವಹಿಸಿ, ಮುಖಂಡರು ಹಾಗೂ ಕಾರ್ಯಕರ್ತರನ್ನು ಒಗ್ಗೂಡಿಸಿ ಕ್ಷೇತ್ರದಲ್ಲಿ ಪಕ್ಷವನ್ನು ಸಂಘಟಿತವಾಗಿ ಬಲಪಡಿಸುವಲ್ಲಿ ಹರೀಶ್ ಗೌಡ ಅವರು ಪ್ರಮುಖ ಪಾತ್ರವಹಿಸುವರೆಂಬ ವಿಶ್ವಾಸವನ್ನು ನಾಯಕರು ವ್ಯಕ್ತಪಡಿಸಿದ್ದಾರೆ.

ನೂತನ ಅಧ್ಯಕ್ಷರಿಗೆ ಪಕ್ಷದ ಹಿರಿಯರು, ಕಾರ್ಯಕರ್ತರು ಮತ್ತು ಬೆಂಬಲಿಗರು ಅಭಿನಂದನೆಗಳನ್ನು ತಿಳಿಸಿದ್ದಾರೆ.

You may also like

Leave a Comment