Tuesday, May 19, 2026
Home ಬೆಂಗಳೂರು ಗ್ರಾಮಾಂತರದೊಡ್ಡಬಳ್ಳಾಪುರದೊಡ್ಡಬಳ್ಳಾಪುರ: ನಗರಸಭಾ ಅಧ್ಯಕ್ಷೆ ಸುಮಿತ್ರ ಅವರ ಪತಿ ಆನಂದ್ ನಿಧನ, ಇಂದು ಅಂತ್ಯಕ್ರಿಯೆ

ದೊಡ್ಡಬಳ್ಳಾಪುರ: ನಗರಸಭಾ ಅಧ್ಯಕ್ಷೆ ಸುಮಿತ್ರ ಅವರ ಪತಿ ಆನಂದ್ ನಿಧನ, ಇಂದು ಅಂತ್ಯಕ್ರಿಯೆ

by Raghavendra H A
0 comments

ದೊಡ್ಡಬಳ್ಳಾಪುರ; ನಗರಸಭಾ ಅಧ್ಯಕ್ಷೆ ಸುಮಿತ್ರ ಅವರ ಪತಿ ಆನಂದ್ ಅವರು ಕಳೆದ ರಾತ್ರಿ ನಿಧನ ಹೊಂದಿದ್ದಾರೆ.

ಅನಾರೋಗ್ಯದ ಹಿನ್ನೆಲೆ ಆನಂದ್ ಅವರು ಏಪ್ರಿಲ್ 25ರಂದು ರಾತ್ರಿ ಕೊನೆಯುಸಿರೆಳೆದಿದ್ದಾರೆ. ಬಿಜೆಪಿ ಮುಖಂಡರಾದ ಇವರು ಡಿಕ್ರಾಸ್, ಮುತ್ಸಂದ್ರ ಸುತ್ತಮುತ್ತ ತಮ್ಮ ಕೆಲಸಗಳ ಮೂಲಕ ಜನಮೆಚ್ಚುಗೆ ಪಡೆದಿದ್ದರು.

ಇಂದು ಮಧ್ಯಾಹ್ನ 3 ಗಂಟೆಯ ನಂತರ ಅವರ ಅಂತ್ಯಕ್ರಿಯೆ ಮಾಡಲು ಕುಟುಂಬಸ್ಥರು ನಿರ್ಧರಿಸಿದ್ದಾರೆ. ಇವರ ನಿಧನಕ್ಕೆ ನಗರಸಭಾ ಸದಸ್ಯರು ಸೇರಿದಂತೆ ಹಲವು ಮುಖಂಡರು ಕಂಬನಿ ಮಿಡಿದಿದ್ದಾರೆ.

You may also like

Leave a Comment