Saturday, August 8, 2026
Home ಬೆಂಗಳೂರು ನಗರಬ್ರೇಕಿಂಗ್ ನ್ಯೂಸ್: ಸಿಲಿಕಾನ್ ಸಿಟಿಯಲ್ಲಿ ವರುಣನ ಅಟ್ಟಹಾಸ ಬೌರಿಂಗ್ ಆಸ್ಪತ್ರೆ ಬಳಿ ಕಾಂಪೌಂಡ್ ಕುಸಿದು 7 ಜನ ದಾರುಣ ಸಾವು!

ಬ್ರೇಕಿಂಗ್ ನ್ಯೂಸ್: ಸಿಲಿಕಾನ್ ಸಿಟಿಯಲ್ಲಿ ವರುಣನ ಅಟ್ಟಹಾಸ ಬೌರಿಂಗ್ ಆಸ್ಪತ್ರೆ ಬಳಿ ಕಾಂಪೌಂಡ್ ಕುಸಿದು 7 ಜನ ದಾರುಣ ಸಾವು!

by Dharmaraju
0 comments

ಬೆಂಗಳೂರು: ರಾಜಧಾನಿಯಲ್ಲಿ ಇಂದು ಸುರಿದ ಬಿರುಗಾಳಿ ಸಹಿತ ಭಾರಿ ಮಳೆ ಮಹಾ ದುರಂತವನ್ನೇ ಹೊತ್ತು ತಂದಿದೆ. ನಗರದ ಹೃದಯಭಾಗದಲ್ಲಿರುವ ಬೌರಿಂಗ್ ಆಸ್ಪತ್ರೆಯ ಆವರಣ ಗೋಡೆ ಕುಸಿದು ಬಿದ್ದ ಪರಿಣಾಮ, ಮೂವರು ಪುಟ್ಟ ಮಕ್ಕಳು ಸೇರಿದಂತೆ ಒಟ್ಟು ಏಳು ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ.

ಸಂಜೆ ಸುರಿದ ಧಾರಾಕಾರ ಮಳೆಗೆ ಬೌರಿಂಗ್ ಆಸ್ಪತ್ರೆಯ ಹಳೆಯದಾದ ಕಾಂಪೌಂಡ್ ಗೋಡೆ ದಿಢೀರನೆ ಕುಸಿದಿದೆ. ಗೋಡೆಯ ಪಕ್ಕದಲ್ಲೇ ವ್ಯಾಪಾರ ಮಾಡುತ್ತಿದ್ದ ಬೀದಿಬದಿ ವ್ಯಾಪಾರಿಗಳು ಹಾಗೂ ಮಳೆಯಿಂದ ರಕ್ಷಣೆ ಪಡೆಯಲು ಅಲ್ಲಿ ನಿಂತಿದ್ದ ಸಾರ್ವಜನಿಕರ ಮೇಲೆ ಗೋಡೆ ಬಿದ್ದಿದೆ. ಕಬ್ಬಿಣದ ಸರಳು ಹಾಗೂ ಬೃಹತ್ ಕಲ್ಲುಗಳ ಅಡಿಯಲ್ಲಿ ಸಿಲುಕಿದ ಏಳು ಜೀವಗಳು ಉಸಿರು ಚೆಲ್ಲಿವೆ. ಮೃತರಲ್ಲಿ ಮೂವರು ಮಕ್ಕಳ ಸಾವು ಎಂತವರ ಕಣ್ಣಲ್ಲೂ ನೀರು ತರಿಸುವಂತಿದೆ.

ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ:
ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಪೊಲೀಸ್ ಸಿಬ್ಬಂದಿ ಧಾವಿಸಿದ್ದು, ಜೆಸಿಬಿ ಮೂಲಕ ಅವಶೇಷಗಳನ್ನು ತೆರವುಗೊಳಿಸುತ್ತಿದ್ದಾರೆ. ಇನ್ನೂ ಯಾರಾದರೂ ಅಡಿಯಲ್ಲಿ ಸಿಲುಕಿದ್ದಾರೆಯೇ ಎಂಬ ಆತಂಕ ಮುಂದುವರಿದಿದೆ.

ಸ್ಥಳಕ್ಕೆ ಡಿಸಿಎಂ ಭೇಟಿ:

ದುರಂತದ ಸುದ್ದಿ ತಿಳಿಯುತ್ತಿದ್ದಂತೆಯೇ ಸಿಎಂ ಸಿದ್ಧರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ

“ಬೆಳಿಗ್ಗೆಯಿಂದ ಸಂಜೆಯವರೆಗೆ ಬಿಸಿಲಿನಲ್ಲಿ ದುಡಿಯುವ ಬಡ ವ್ಯಾಪಾರಿಗಳ ಹೊಟ್ಟೆಯ ಮೇಲೆ ವರುಣ ಬರೆ ಎಳೆದಿದ್ದಾನೆ. ಹಳೆಯ ಗೋಡೆಗಳ ಬಗ್ಗೆ ಬಿಬಿಎಂಪಿ ವಹಿಸಿದ ನಿರ್ಲಕ್ಷ್ಯವೇ ಈ ಅಮಾಯಕರ ಸಾವಿಗೆ ಕಾರಣ,” ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

You may also like

Leave a Comment