Tuesday, May 19, 2026
Home ಬೆಂಗಳೂರು ಗ್ರಾಮಾಂತರದೊಡ್ಡಬಳ್ಳಾಪುರದೊಡ್ಡಬಳ್ಳಾಪುರ; ಮೇ.3 ಕ್ಕೆ ESI ಆಸ್ಪತ್ರೆ ಉದ್ಘಾಟನೆ, ಕೇಂದ್ರದಿಂದ ಸಚಿವರ ಆಗಮನ-ಶಾಸಕ ಧೀರಜ್ ಮುನಿರಾಜ್

ದೊಡ್ಡಬಳ್ಳಾಪುರ; ಮೇ.3 ಕ್ಕೆ ESI ಆಸ್ಪತ್ರೆ ಉದ್ಘಾಟನೆ, ಕೇಂದ್ರದಿಂದ ಸಚಿವರ ಆಗಮನ-ಶಾಸಕ ಧೀರಜ್ ಮುನಿರಾಜ್

by Raghavendra H A
0 comments

ದೊಡ್ಡಬಳ್ಳಾಪುರ; ತಾಲ್ಲೂಕಿನ ESI ಆಸ್ಪತ್ರೆ ಮೇ 3 ರಂದು ಉದ್ಘಾಟನೆಯಾಗಲಿದೆ ಎಂದು ಶಾಸಕ ಧೀರಜ್ ಮುನಿರಾಜ್ ಮಾಹಿತಿ ನೀಡಿದ್ದಾರೆ.

ಈ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಅವರು, ಕಳೆದ ಎರಡು ವರ್ಷಗಳಿಂದ ಆಸ್ಪತ್ರೆ ಉದ್ಘಾಟನೆ ಸಂಬಂಧ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಹಗ್ಗ ಜಗ್ಗಾಟ ನಡೆಯುತ್ತಿತ್ತು, ಆದರೀಗ ಅಂತಿಮ ಹಂತಕ್ಕೆ ತಲುಪಿದ್ದು ಮೇ.3 ರಂದು ಆಸ್ಪತ್ರೆ ಉದ್ಘಾಟನೆಯಾಗಲಿದೆ ಎಂದರು.

ಕೇಂದ್ರ ಸಚಿವರಾದ ಮನ್ಸೂಕ್ ಮಾಂಡವೀಯ ಮತ್ತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ನೇತೃತ್ವದಲ್ಲಿ ಈ ಆಸ್ಪತ್ರೆ ಉದ್ಘಾಟನೆಯಾಗಲಿದೆ, ಈ ಕಾರ್ಯಕ್ರಮಕ್ಕೆ ರಾಜ್ಯದ ಸಚಿವರುಗಳು ಆಗಮಿಸುವ ಸಾಧ್ಯತೆ ಇದೆ ಎಂದರು.

ಕೇಂದ್ರ ESI ಕಾರ್ಪೋರೇಷನ್ ವತಿಯಿಂದ ವೈದ್ಯಾಧಿಕಾರಿಗಳು ಆಸ್ಪತ್ರೆಯ ಉಸ್ತುವಾರಿ ವಹಿಸಿಕೊಂಡು ಕಾರ್ಯೋನ್ಮುಖರಾಗಿದ್ದಾರೆ. ಇನ್ನು ಈ ಆಸ್ಪತ್ರೆಗೆ ವೈದ್ಯರನ್ನು ಮತ್ತು ಸಿಬ್ಬಂದಿಗಳನ್ನು ಕಾಂಟ್ರಾಕ್ಟ್ ಆಧಾರದ ಮೇಲೆ ನೇಮಕ ಮಾಡಲಾಗುತ್ತದೆ.

ಮೇ. 3 ರ ನಂತರ ಮೊದಲಿಗೆ 40 ವರ್ಷ ಮೇಲ್ಪಟ್ಟ ಕಾರ್ಮಿಕರಿಗೆ ವಾರ್ಷಿಕ ಆರೋಗ್ಯ ತಪಾಸಣೆ ಕಾರ್ಯ ನಡೆಯಲಿದ್ದು ಮುಂದಿನ ಒಂದು ತಿಂಗಳಲ್ಲಿ ಸಂಪೂರ್ಣ OPD ವಿಭಾಗದಲ್ಲಿ ಸರ್ಜನ್ ಗಳು ಕೆಲಸ ಮಾಡಲಿದ್ದಾರೆ ಇದರೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೇರಿದಂತೆ ಸುತ್ತಲಿನ ಹಲವು ಜಿಲ್ಲೆಯ ಕಾರ್ಮೀಕರಿಗೆ ಅನುಕೂಲವಾಗಲಿದೆ ಎಂದರು.

You may also like

Leave a Comment