ದೊಡ್ಡಬಳ್ಳಾಪುರ : ಪರಿಷ್ಕೃತ ಒಳಮೀಸಲಾತಿ ಅನುಷ್ಠಾನ ಮಾಡಿರುವುದನ್ನು ಮಾದಿಗ ಸಮುದಾಯ ಸ್ವಾಗತಿಸುತ್ತದೆ ಎಂದು ಮಾದರ ಮಹಾಸಭಾದ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಸುಬ್ಬರಾಜು ತಿಳಿಸಿದರು.
ನಗರದ ಪ್ರವಾಸಿಮಂದಿರದಲ್ಲಿ ಮದಾರ ಮಹಾ ಸಭಾ ವತಿಯಿಂದ ನಡೆದ ಸುದ್ದಿಗೊಷ್ಟಿಯಲ್ಲಿ ಅವರು ಮಾತನಾಡಿದರು. ಸುಮಾರು 40 ವರ್ಷಗಳ ಹೋರಾಟಕ್ಕೆ ಇಂದು ನ್ಯಾಯ ಸಿಕ್ಕಿದೆ, ಸಾಮಾಜಿಕ ನ್ಯಾಯದ ದಿಕ್ಕಿನಲ್ಲಿ ಈ ತೀರ್ಮಾನ ಮಹತ್ವದ್ದಾಗಿದೆ ಬಸವಣ್ಣವರ ಸಮಾನತೆ ತತ್ವವನ್ನು ಸರ್ಕಾರ ಕಾರ್ಯರೂಪಕ್ಕೆ ತಂದಿದೆ. ಈ ಹೋರಾಟಕ್ಕೆ ಸಹಕರಿಸಿದ ಸಚಿವರಾದ ಕೆಎಚ್ ಮುನಿಯಪ್ಪ ರವರಿಗೆ, ಹಾಗೂ ಒಳಬಿಸಿಲಾತಿ ಜಾರಿಗೊಳಿಸಿದ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸುತ್ತೇವೆ ಎಂದರು.
ಒಳ ಮೀಸಲಾತಿ ಜಾರಿ ಪ್ರಕ್ರಿಯೆಯಲ್ಲಿ ಕಾನೂನು ಸಚಿವರು, ಗೃಹ ಸಚಿವರು, ಹಾಗೂ ಮಹಾದೇವಪ್ಪ ಸೇರಿದಂತೆ ಹಲವು ಸಚಿವರು ಪ್ರಮುಖ ಪಾತ್ರ ವಹಿಸಿದ್ದಾರೆ ಅಲ್ಲದೆ, ಚಿತ್ರದುರ್ಗದಲ್ಲಿ ನಡೆದ ಐತಿಹಾಸಿಕ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪಕ್ಷದ ನಾಯಕರು ತೆಗೆದುಕೊಂಡ ನಿರ್ಧಾರದಿಂದ ಇದು ಸಾಧ್ಯವಾಗಿದೆ ಎಂದರು.
ರಾಜ್ಯದ 101 ಜಾತಿಗಳಿಗೆ ನ್ಯಾಯ ಒದಗಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದ್ದು, ರಾಜ್ಯ ಸರ್ಕಾರದ ಈ ನಿರ್ಧಾರವನ್ನು ಮಾದಿಗ ಸಮುದಾಯ ಸ್ವಾಗತಿಸುತ್ತದೆ ಎಂದರು.
ಈ ವೇಳೆ ತಾಲ್ಲೂಕು ಅಧ್ಯಕ್ಷ ತಳಗವಾರ ನಾಗರಾಜ್, ಮುಖಂಡರಾದ ಬಿ ಕೆ ಶಿವಪ್ಪ, ನಾಗರಾಜು ಬಚ್ಚಹಳ್ಳಿ, ರಾಮಕೃಷ್ಣಪ್ಪ, ವೆಂಕಟೇಶ್, ಹನುಮಣ್ಣ, ಟಿ ಡಿ ಮುನಿಯಪ್ಪ, ಗಂಗರಾಜು ನರಸಿಂಹನಹಳ್ಳಿ, ಕೆ ವಿ ಮುನಿಯಪ್ಪ, ರಾಮ, ನರಸಪ್ಪ, ಮೈಲಾರಪ್ಪ, ಕೆ ನಾರಾಯಣಪ್ಪ, ಹರ್ಷ, ಕಾಂತರಾಜ, ಮುನಿಯಪ್ಪ, ಗಂಗರಾಜು ಮತ್ತಿತ್ತರರಿದ್ದರು.