ಬೆಂಗಳೂರಲ್ಲಿ ಸುರಿದ ಭಾರೀ ಮಳೆಯಿಂದ ಸಂಭವಿಸಿದ ದುರಂತದಲ್ಲಿ ಬೌರಿಂಗ್ ಆಸ್ಪತ್ರೆ ಹಿಂಭಾಗದ ಕಾಂಪೌಂಡ್ ಗೋಡೆ ಕುಸಿದು ಏಳು ಜನರು ಸಾ*ವನ್ನಪ್ಪಿದ್ದರು.
ಈ ದುರ್ಘಟನೆ ಹಿನ್ನೆಲೆಯಲ್ಲಿ ಮೃ*ತರ ಕುಟುಂಬಗಳಿಗೆ ತಲಾ ₹5 ಲಕ್ಷ ಪರಿಹಾರವನ್ನು ಘೋಷಿಸಲಾಗಿದ್ದು, ಜಿಬಿಎ ವತಿಯಿಂದ ಪರಿಹಾರ ಚೆಕ್‌ಗಳನ್ನು ವಿತರಿಸಲಾಗಿದೆ.
ಶಿವಾಜಿನಗರ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್ ಅವರು ಚೆಕ್‌ಗಳನ್ನು ವಿತರಿಸಿ, ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಮಾನವೀಯ ನೆರವು ಒದಗಿಸಿದರು.
ಸಿಎಂ ಮತ್ತು ಡಿಸಿಎಂ ಸೂಚನೆಯಂತೆ ತಕ್ಷಣ ಕ್ರಮ ಕೈಗೊಳ್ಳಲಾಗಿದ್ದು, ಅಭಿವೃದ್ಧಿ ಅಪರ ಆಯುಕ್ತ ದಲ್ಜಿತ್ ಕುಮಾರ್ ಸೇರಿದಂತೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಅಧಿಕಾರಿಗಳು ಸಾಂತ್ವನ ವ್ಯಕ್ತಪಡಿಸಿದ್ದಾರೆ.