ಬೆಂಗಳೂರು: ಕ್ಯಾನ್ಸರ್ ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ.
ಬೆಸ್ಕಾಂ ವಿಜಿಲೆನ್ಸ್ ನಲ್ಲಿ ಎಸ್ಪಿಯಾಗಿದ್ದ ಲಾವಣ್ಯಅವರು ಕೊಲೊನ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು,ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ಮಧ್ಯಾಹ್ನ 2:30 ರ ಸುಮಾರಿಗೆ ಸಾವನ್ನಪ್ಪಿದ್ದಾರೆ. ಮೃತರು 10 ವರ್ಷದ ಗಂಡು ಮಗು ಹಾಗೂ 3 ವರ್ಷದ ಹೆಣ್ಣುವನ್ನು ಅಗಲಿದ್ದಾರೆ.
ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ದೊಡ್ಡಗಂಜೂರು ಗ್ರಾಮದವರಾದ ಲಾವಣ್ಯ ಅವರು 2010 ರ ಬ್ಯಾಚ್‌ನ ಕೆಎಸ್‌ಪಿಎಸ್ ಅಧಿಕಾರಿಯಾಗಿದ್ದರು 2023 ರಿಂದ ಎಸ್ಪಿಯಾಗಿ ಸೇವೆ ಸಲ್ಲಿಸಿದ್ದಾರೆ..
ಮಂಡ್ಯ ಮತ್ತು ಬಳ್ಳಾರಿಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷರಾಗಿ ಕೆಲಸ ಮಾಡಿದ್ದಾರೆ. ಅಷ್ಟೇ ಅಲ್ಲ, ಬೆಂಗಳೂರಿನಲ್ಲಿ ಇಂಟಲಿಜೆನ್ಸ್ ಮತ್ತು ಡಿಸಿಆರ್‌ಇ ಎಸ್ಪಿ ಆಗಿ ಕೆಲಸ ಮಾಡಿದ್ದಾರೆ.
ಇತ್ತೀಚೆಗಷ್ಟೇ ವಿದ್ಯಾರಣ್ಯಪುರದಲ್ಲಿರುವ ನಿವಾಸಕ್ಕೆ ಎರಡು ತಿಂಗಳ ಹಿಂದೆ DG&IGP ಡಾ. ಎಂ.ಎ ಸಲೀಂ ಭೇಟಿ ನೀಡಿ ಧೈರ್ಯ ತುಂಬಿದ್ದರು. ಚೇತರಿಸಿಕೊಳ್ಳುವಂತೆ ಹಾರೈಸಿ ಕುಟುಂಬದವರಿಗೂ ಸಹ ಧೈರ್ಯ ತುಂಬಿ ಬಂದಿದ್ದರು.
ಮೃತರ ಪಾರ್ಥಿವ ಶರೀರವನ್ನು ಅವರ ಹುಟ್ಟೂರಾದ ದೊಡ್ಡಗಂಜೂರಿಗೆ ರವಾನಿಸುವ ವ್ಯವಸ್ಥೆ ಮಾಡಲಾಗಿದ್ದು, ಅಲ್ಲಿಯೇ ಅಂತ್ಯಕ್ರಿಯೆ ನಡೆಯುವ ಸಾಧ್ಯತೆ ಇದೆ. ಯುವ ಅಧಿಕಾರಿಯ ಅಕಾಲಿಕ ನಿಧನಕ್ಕೆ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳು ಹಾಗೂ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.ದಕ್ಷ ಅಧಿಕಾರಿಯ ಅಗಲಿಕೆಯಿಂದ ಪೊಲೀಸ್ ಇಲಾಖೆಗೆ ಮತ್ತು ಅವರ ಕುಟುಂಬಕ್ಕೆ ತುಂಬಲಾರದ ನಷ್ಟ ಉಂಟಾಗಿದೆ