Tuesday, June 9, 2026
Home ಜಿಲ್ಲಾ‌ಸುದ್ದಿಬಿಎಸ್ ವೈ ರನ್ನ ಕೆಳಗಿಳಿಸಿದವರೇ ಅವರ ಅಭಿಮಾನೋತ್ಸವ ಮಾಡುತ್ತಿದ್ದಾರೆಂದ ಸಚಿವ ಸತೀಶ್‌ ಜಾರಕಿಹೊಳಿ

ಬಿಎಸ್ ವೈ ರನ್ನ ಕೆಳಗಿಳಿಸಿದವರೇ ಅವರ ಅಭಿಮಾನೋತ್ಸವ ಮಾಡುತ್ತಿದ್ದಾರೆಂದ ಸಚಿವ ಸತೀಶ್‌ ಜಾರಕಿಹೊಳಿ

by Dharmaraju
0 comments

ದಾವಣಗೆರೆ: ರಾಜ್ಯ ರಾಜಕಾರಣದ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ 50 ವರ್ಷಗಳ ರಾಜಕೀಯ ಪಯಣದ ಸ್ಮರಣಾರ್ಥ ಹಮ್ಮಿಕೊಳ್ಳಲಾಗಿರುವ ‘ಅಭಿಮಾನೋತ್ಸವ’ ಕಾರ್ಯಕ್ರಮದ ಕುರಿತು ಸಚಿವ ಸತೀಶ್ ಜಾರಕಿಹೊಳಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಕೆಳಗಿಳಿಸಿದವರೇ ಇಂದು ಅವರ ಅಭಿಮಾನೋತ್ಸವ ಮಾಡುತ್ತಿರುವುದು ರಾಜಕೀಯ ವಿಪರ್ಯಾಸ ಎಂದು ಅವರು ಲೇವಡಿ ಮಾಡಿದ್ದಾರೆ. “ಬಿಜೆಪಿಯಲ್ಲಿ ಬಿಎಸ್‌ವೈ ಅವರನ್ನು ಮೂಲೆಗುಂಪು ಮಾಡಿದವರು ಮತ್ತು ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದವರೇ ಇಂದು ಅವರ ಹೆಸರಿನಲ್ಲಿ ಕಾರ್ಯಕ್ರಮ ಮಾಡುತ್ತಿದ್ದಾರೆ. ಇದು ಕೇವಲ ಚುನಾವಣಾ ಗಿಮಿಕ್” ಎಂದು ಟೀಕಿಸಿದ್ದಾರೆ.

ಹೈಕಮಾಂಡ್ ಹೇಳಿದರೆ ಐದು ವರ್ಷವೂ ನಾನೇ ಸಿಎಂ ಆಗಿರುತ್ತೇನೆ ಎಂಬ ಸಿದ್ದರಾಮಯ್ಯನವರ ಹೆಳಿಕೆಗೆ ಸಚಿವ ಸತೀಶ್ ಜಾರಕಿಹೊಳಿ ಅವರು ಸಕಾರಾತ್ಮಕವಾಗಿಯೇ ಪ್ರತಿಕ್ರಿಯಿಸಿದ್ದು, ಸಿಎಂ ಸಿದ್ದರಾಮಯ್ಯನವರು ಐದು ವರ್ಷಗಳ ಅವಧಿಗೆ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಈ ಬಗ್ಗೆ ಪದೇ ಪದೇ ಚರ್ಚೆ ಮಾಡುವ ಅಗತ್ಯವಿಲ್ಲ.ಹೈಕಮಾಂಡ್ ನಿರ್ಧಾರವೇ ಅಂತಿಮ, ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವೆಲ್ಲರೂ ಬದ್ಧರಾಗಿರುತ್ತೇವೆ ಎಂದು ತಿಳಿಸಿದ್ದಾರೆ

You may also like

Leave a Comment