Tuesday, June 9, 2026
Home ಬೆಂಗಳೂರು ನಗರನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ. ಕ್ಷೇತ್ರದಲ್ಲಿ ಪೂರ್ವಸಿದ್ಧತಾ ಸಭೆ

ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ. ಕ್ಷೇತ್ರದಲ್ಲಿ ಪೂರ್ವಸಿದ್ಧತಾ ಸಭೆ

by Dharmaraju
0 comments

ಮಹದೇವಪುರ: ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಮಹದೇವಪುರ ಕ್ಷೇತ್ರದ ಬಿಜೆಪಿ ವತಿಯಿಂದ ಮಾರತ್ತಹಳ್ಳಿಯ ಎಸ್‌.ಬಿ.ಆರ್. ಪ್ಯಾಲೆಸ್‌ನಲ್ಲಿ ಶಾಸಕಿ ಮಂಜುಳಾ ಅರವಿಂದ ಲಿಂಬಾವಳಿ ಅವರ ಉಪಸ್ಥಿತಿಯಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.

ಈ ವೇಳೆ ಮಾತನಾಡಿದ ಬಿಜೆಪಿ ನಾಯಕ ಅರವಿಂದ ಲಿಂಬಾವಳಿ ಅವರು, ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಆಶ್ರಮದಲ್ಲಿ ಇದೇ ಮೇ 10ರಂದು ನಡೆಯಲಿರುವ 45ನೇ ವಾರ್ಷಿಕೋತ್ಸವ ಹಾಗೂ ಶ್ರೀ ರವಿಶಂಕರ್ ಗುರೂಜಿಯ ವರ 70ನೇ ಜನ್ಮದಿನ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.


ಪ್ರಧಾನಮಂತ್ರಿಯವರ ಭೇಟಿಯನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಕ್ಷೇತ್ರದ ಎಲ್ಲಾ ವಾರ್ಡ್ ಮಟ್ಟದಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಬೇಕು. ನಗರ ಮಂಡಲ ಹಾಗೂ ಗ್ರಾಮಾಂತರ ಮಂಡಲ ಎರಡೂ ಮಂಡಲಗಳ
ವಾರ್ಡ್ ಅಧ್ಯಕ್ಷರುಗಳು ಹಾಗೂ ಎಲ್ಲಾ ಮುಖಂಡರುಗಳು ಜನರನ್ನು ಸೇರಿಸುವ ಜವಾಬ್ದಾರಿ ಹೊತ್ತು ಕಾರ್ಯನಿರ್ವಹಿಸಬೇಕು ಎಂದರು.

ಸಮರ್ಪಕವಾಗಿ ಪ್ರತಿಯೊಬ್ಬರೂ ತಮಗೆ ನೀಡಿರುವ ಜವಾಬ್ದಾರಿಯನ್ನು ನಿರ್ವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸೋಣ ಎಂದು ಕರೆ ನೀಡಿದರು.

ನಗರ ಮಂಡಲ ಅಧ್ಯಕ್ಷ ಎನ್.ಆರ್. ಶ್ರೀಧರ ರೆಡ್ಡಿ, ಗ್ರಾಮಾಂತರ ಮಂಡಲ ಅಧ್ಯಕ್ಷ ಎಚ್.ಎಸ್. ಪಿಳ್ಳಪ್ಪ, ರಾಜ್ಯ ಪರಿಷತ್ ಸದಸ್ಯ ಎಲ್. ರಾಜೇಶ್, ಮುಖಂಡರಾದ ಲೋಕನಾಥ್ ರೆಡ್ಡಿ, ಯಮಲೂರು ಲೋಕೇಶ್, ಬೈರತಿ ಕುಮಾರ್, ನಾಗೇಶ್ ರೆಡ್ಡಿ, ಕೆ.ವಿ. ನಾಗರಾಜ್, ಮಂಜುನಾಥ್, ಇತರರು ಉಪಸ್ಥಿತರಿದ್ದರು

You may also like

Leave a Comment