ಮಹದೇವಪುರ: ಐಟಿ ವಲಯ, ಯುವಕರು,ಮಧ್ಯಮ ವರ್ಗ ಮತ್ತು ತಳಮಟ್ಟದ ಕಾರ್ಯಕರ್ತರನ್ನು ಒಂದೇ ವೇದಿಕೆಗೆ ತರಬಲ್ಲ ಸಾಮರ್ಥ್ಯ ಅರವಿಂದ ಲಿಂಬಾವಳಿಗೆ ಇದೆ ಎಂದು ಬಿಜೆಪಿ ವಲಯದಲ್ಲಿ ಚರ್ಚೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ಇವರು ರಾಜ್ಯ ರಾಜಕಾರಣದಲ್ಲಿ ಇನ್ನಷ್ಟು ಪ್ರಮುಖ ಪಾತ್ರವಹಿಸುವ ಸಾಧ್ಯತೆ ಇರುವ ನಾಯಕರು ಕರ್ನಾಟಕ ಬಿಜೆಪಿಯಲ್ಲಿ ಮುಂದಿನ ರಾಜ್ಯಾಧ್ಯಕ್ಷರ ಆಯ್ಕೆ ಕುರಿತ ಚರ್ಚೆಗಳು ವೇಗ ಪಡೆಯುತ್ತಿವೆ. ಸಂಘಟನಾ ಅನುಭವ, ಆಡಳಿತ ಸಾಮರ್ಥ ಮತ್ತು ತಳಮಟ್ಟದ ಕಾರ್ಯಕರ್ತರೊಂದಿಗೆ ಗಟ್ಟಿಯಾದ ಸಂಪರ್ಕ ಹೊಂದಿರುವ ನಾಯಕರ ಅಗತ್ಯತೆ ಪಕ್ಷದೊಳಗೆ ಹೆಚ್ಚಾಗಿ ಕೇಳಿಬರುತ್ತಿದೆ.

ಬಾಲ್ಯದಲ್ಲಿಯೇ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತರಾಗಿ ಸಾರ್ವಜನಿಕ ಜೀವನ ಆರಂಭಿಸಿದ ಅರವಿಂದ ಲಿಂಬಾವಳಿ, ವಿದ್ಯಾರ್ಥಿ ದಶೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ರಾಷ್ಟ್ರೀಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದರು. ಯುವಕರನ್ನು ಸಂಘಟಿಸುವಲ್ಲಿ, ವಿದ್ಯಾರ್ಥಿ ಚಳವಳಿಗಳನ್ನು ಮುನ್ನಡೆಸುವಲ್ಲಿ ಮತ್ತು ತಳಮಟ್ಟದ ಕಾರ್ಯಕರ್ತರ ಜಾಲ ನಿರ್ಮಾಣದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
ಬಳಿಕ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ ಅವರು, ನಂತರ ಬಿಜೆಪಿ ರಾಜ್ಯ ಪ್ರಧಾನ
ಕಾರ್ಯದರ್ಶಿಯಾಗಿ ಸುಮಾರು 16 ವರ್ಷಗಳ ಕಾಲ ಪಕ್ಷ ಸಂಘಟನೆಯಲ್ಲಿ ಮಹತ್ವದ ಪಾತ್ರವಹಿಸಿದರು. ತಂತ್ರಗಾರಿಕೆ, ಚುನಾವಣಾ ಕಾರ್ಯಕರ್ತರ ಸಂಘಟನೆ ಮತ್ತು ಪಕ್ಷದ ವಿಸ್ತರಣೆಯಲ್ಲಿ ಲಿಂಬಾವಳಿ ಪ್ರಭಾವಿ ನಾಯಕತ್ವ ತೋರಿದವರು ಎಂದು ವಲಯದಲ್ಲಿ ಪರಿಗಣಿಸಲಾಗಿದೆ.

ಪಕ್ಷ ಸಂಘಟನೆಯಲ್ಲಿನ ದೀರ್ಘ ಅನುಭವದ ನಂತರ ವಿಧಾನ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿದ ಲಿಂಬಾವಳಿ, 2008 ಹೊಸದಾಗಿ ರಚನೆಯಾದ ಮಹದೇವಪುರ ವಿಧಾನಸಭಾ ಕ್ಷೇತ್ರದಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದರು. ನಂತರ 2013 ಹಾಗೂ 2018 ರಲ್ಲಿಯೂ ಸತತವಾಗಿ ಗೆಲುವು ಸಾಧಿಸಿ ಮೂರು ಅವಧಿಗಳ ಕಾಲ ಕ್ಷೇತ್ರವನ್ನು ಪ್ರತಿನಿಧಿಸಿದರು.
ಸಚಿವರಾಗಿ ಆಡಳಿತ ಅನುಭವ:
ಕರ್ನಾಟಕ ಸರ್ಕಾರದಲ್ಲಿ ಉನ್ನತ ಶಿಕ್ಷಣ, ಆರೋಗ್ಯ ಅರಣ್ಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಚಿವರಾಗಿ ಅರವಿಂದ ಲಿಂಬಾವಳಿ ಕಾರ್ಯನಿರ್ವಹಿಸಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿ, ವಿದ್ಯಾರ್ಥಿ ಸಹಾಯ ಕಾರ್ಯಕ್ರಮಗಳು ಮತ್ತು ಕಾಲೇಜುಗಳ ವಿಸ್ತರಣೆಗೆ ಒತ್ತು ನೀಡಿದರೆ, ಆರೋಗ್ಯ ಇಲಾಖೆಯಲ್ಲಿ ಸಾರ್ವಜನಿಕ ಆರೋಗ್ಯ ಶಿಬಿರಗಳು ಹಾಗೂ ವೈದ್ಯಕೀಯ ಸೇವೆಗಳ ವಿಸ್ತರಣೆಗೆ ಕ್ರಮ ಕೈಗೊಂಡಿದ್ದರು.
ಅರಣ್ಯ ಸಚಿವರಾಗಿದ್ದ ಸಂದರ್ಭದಲ್ಲಿ ಪರಿಸರ ಸಂರಕ್ಷಣೆ, ಗಿಡಗಳು ನೆಡುವ ಅಭಿಯಾನ ಮತ್ತು ನಗರ ಹಸಿರು ವಿಸ್ತರಣೆಗೆ ಆದ್ಯತೆ ನೀಡಲಾಯಿತು. ಕನ್ನಡ ಮತ್ತು ಸಂಸ್ಕೃತಿ ಸಚಿವರಾಗಿ ಕನ್ನಡ ಭಾಷೆ, ಸಾಹಿತ್ಯ, ಕಲಾವಿದರು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಉತ್ತೇಜನ ನೀಡುವ ಕೆಲಸದಲ್ಲೂ ಅವರು ಸಕ್ರಿಯರಾಗಿದ್ದರು.

ಚುನಾವಣಾ ತಂತ್ರಗಾರಿಕೆಯಲ್ಲಿ ಪ್ರಮುಖ ಪಾತ್ರ: 2023 ರ ವಿಧಾನಸಭಾ ಚುನಾವಣೆ ಯಲ್ಲಿ ಬಿಜೆಪಿ ಪಕ್ಷ ಮಹದೇವಪುರ ಕ್ಷೇತ್ರದಲ್ಲಿ ಅಭ್ಯರ್ಥಿ ಬದಲಾವಣೆ ಮಾಡಿದ ಸಂದರ್ಭದ ಲ್ಲಿಯೂ ಕ್ಷೇತ್ರದಲ್ಲಿ ಭರ್ಜರಿ ಗೆಲುವು ಸಾಧಿಸು ವಲ್ಲಿ ಲಿಂಬಾವಳಿ ಪ್ರಮುಖ ಪಾತ್ರವಹಿಸಿದರು. ಅವರ ಪತ್ನಿ ಹಾಗೂ ಬಿಜೆಪಿ ಅಭ್ಯರ್ಥಿ ಮಂಜುಳಾ ಅರವಿಂದ ಲಿಂಬಾವಳಿ ಭಾರಿ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದು, ಕ್ಷೇತ್ರದಲ್ಲಿ ಅವರ ಸಂಘಟನಾ ಬಲವನ್ನು ತೋರಿಸಿತು.
ನಗರ ಮತ್ತು ಗ್ರಾಮೀಣ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅರವಿಂದ ಲಿಂಬಾವಳಿ ರಾಜಕಾರಣದ ಅನುಭವ, ಆರ್‌ಎಸ್ಎಸ್ ಹಿನ್ನೆಲೆ, ಸಂಘಟನಾ ಹಿಡಿತ, ಸಚಿವ ಅನುಭವ ಹಾಗೂ ಕಾರ್ಯಕರ್ತರೊಂದಿಗೆ ನೇರ ಸಂಪರ್ಕ ಹೊಂದಿರುವ ನಾಯಕರ ಅಗತ್ಯ ರಾಜ್ಯ ಬಿಜೆಪಿಗೆ ಇದೆ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.
ಇನ್ನೂ ಹಲವಾರು ಕಾರಣಗಳಿಂದ ಮಾಜಿ ಸಚಿವ ಅರವಿಂದ ಲಿಂಬಾವಳಿ ರಾಜ್ಯಾದ್ಯಕ್ಷರ ಸ್ಥಾನಕ್ಕೆ ಸೂಕ್ತವಾದ ನಾಯಕರು ಎಂಬ ಮಾತು ಬಿಜೆಪಿ ವಲಯದಲ್ಲಿ ಕೇಳಿಬರುತ್ತಿದೆ.