107
ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳ್ಳ ಸಾಗಣೆ ಮಾಡುತ್ತಿದ್ದ ₹3.57 ಕೋಟಿ ಮೌಲ್ಯದ 10.20 ಕೆ.ಜಿ ಗಾಂಜಾವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಎನ್‌ಡಿಪಿಎಸ್ ಕಾಯ್ದೆ ಅಡಿಯಲ್ಲಿ ಬಂಧಿಸಲಾಗಿದೆ.
ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕ ಅಕ್ರಮವಾಗಿ ಗಾಂಜಾ ಸಾಗಿಸಲು ಯತ್ನಿಸಿದಾಗ ಸಿಕ್ಕಿಬಿದ್ದಿದ್ದಾನೆ.
ಚೆಕ್-ಇನ್ ಬ್ಯಾಗೇಜ್ ತಪಾಸಣೆ ನಡೆಸಿದಾಗ ಆರೋಪಿಯ ಬ್ಯಾಗ್‌ನಲ್ಲಿ ಹೈಡೋಪೋನಿಕ್ ಗಾಂಜಾ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.