196
ದೊಡ್ಡಬಳ್ಳಾಪುರ: ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರ ಆನಂದ್ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಜಿಲ್ಲಾಧಿಕಾರಿಗಳು ಅಂಗೀಕರಿಸಿದ್ದಾರೆ.
ವೈಯಕ್ತಿಕ ಕಾರಣಗಳಿಂದ ಅಧ್ಯಕ್ಷೆಯಾಗಿ ಮುಂದುವರಿದು ಕಾರ್ಯನಿರ್ವಹಿಸಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿ, ಯಾವುದೇ ಒತ್ತಡಕ್ಕೆ ಮಣಿಯದೆ ಸ್ವಇಚ್ಛೆಯಿಂದ ಜೂನ್ 1ರಂದು ರಾಜೀನಾಮೆ ಸಲ್ಲಿಸಿದ್ದರು. ರಾಜೀನಾಮೆ ಸಲ್ಲಿಸಿದ ದಿನಾಂಕದಿಂದ ಹತ್ತು ದಿನಗಳ ಅವಧಿಯೊಳಗೆ ಅದನ್ನು ಹಿಂಪಡೆಯುವ ಅವಕಾಶವಿದ್ದು, ಜೂನ್ 10ರೊಳಗೆ ಸುಮಿತ್ರಾ ಅವರು ತಮ್ಮ ರಾಜೀನಾಮೆಯನ್ನು ಹಿಂಪಡೆಯದ ಹಿನ್ನೆಲೆ ಜಿಲ್ಲಾಧಿಕಾರಿಗಳಾದ ಡಾ.ಕೆ.ಅನುರಾಧ ಅವರು ರಾಜೀನಾಮೆ ಅಂಗೀಕರಿಸಲಾಗಿದೆ ಎಂದು ಆದೇಶ ಹೊರಡಿಸಿದ್ದಾರೆ.