Saturday, August 8, 2026
Home ಅಪರಾಧ ಸುದ್ದಿ7 ತಿಂಗಳ ಹಸುಗೂಸಿನ ಮುಂದೆಯೇ ತಾಯಿ ಆತ್ಮಹ*ತ್ಯೆ!

7 ತಿಂಗಳ ಹಸುಗೂಸಿನ ಮುಂದೆಯೇ ತಾಯಿ ಆತ್ಮಹ*ತ್ಯೆ!

by Dharmaraju
0 comments

ಆನೇಕಲ್‌ : ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತು 7 ತಿಂಗಳ ಹಸುಗೂಸಿನ ಮುಂದೆಯೇ ತಾಯಿ ಆತ್ಮಹ*ತ್ಯೆಗೆ ಶರಣಾಗಿರುವ ದಾರುಣ ಘಟನೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯ ರಾಯಸಂದ್ರದಲ್ಲಿ ನಡೆದಿದೆ.

ಸಾನಿಕ ಗೌಡ ಆತ್ಮಹ*ತ್ಯೆಗೆ ಶರಣಾದ ದುರ್ದೈವಿ. ಚಿಕ್ಕಮಗಳೂರು ಮೂಲದ ಶರಣ್ ಗೌಡ ಎಂಬುವವರನ್ನು ಸಾನಿಕ ಗೌಡ ಕಳೆದ ಒಂದು ವರ್ಷ ನಾಲ್ಕು ತಿಂಗಳ ಹಿಂದಷ್ಟೇ ವಿವಾಹವಾಗಿದ್ದರು.

ಬಾಣಂತನಕ್ಕಾಗಿ ತವರು ಮನೆಗೆ ಬಂದಿದ್ದ ವೇಳೆ ಈ ಘಟನೆ ನಡೆದಿದೆ.

ಪತಿ ಶರಣ್ ಗೌಡ ಅಕ್ರಮ ಸಂಬಂಧ ಹೊಂದಿದ್ದ ಎಂಬ ಆರೋಪ ಕೇಳಿಬಂದಿದ್ದು, ಪ್ರಿಯತಮೆಯೊಂದಿಗೆ ಮಾತನಾಡಿರುವ ವಿಡಿಯೋವನ್ನು ಪತ್ನಿಗೆ ಕಳುಹಿಸಿದ್ದ ಎನ್ನಲಾಗಿದೆ. ಇದರಿಂದ ತೀವ್ರವಾಗಿ ಬೇಸತ್ತಿದ್ದ ಸಾನಿಕ ಗೌಡ, ಪತಿ ಶರಣ್‌ಗೆ ವಿಡಿಯೋ ಕಾಲ್ ಮಾಡಿ ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಬೆಳಗಿನ ಜಾವ 3 ಗಂಟೆ ಸುಮಾರಿಗೆ ತವರು ಮನೆಯಲ್ಲೇ ಫ್ಯಾನ್‌ಗೆ ನೇ*ಣು ಬಿಗಿದುಕೊಂಡು ಆತ್ಮಹ*ತ್ಯೆಗೆ ಶರಣಾಗಿದ್ದಾರೆ.

ಘಟನೆ ಕುರಿತು ಮಾಹಿತಿ ತಿಳಿದು ಸ್ಥಳಕ್ಕೆ ತೆರಳಿದ ಪರಪ್ಪನ ಅಗ್ರಹಾರ ಪೊಲೀಸರು ಮೃ*ತದೇಹವನ್ನು ಮರಣೋತ್ತರ ಪರೀಕ್ಷೆ ಸೆಂಟ್ ಜಾನ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನಾ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪರಪ್ಪನ ಅಗ್ರಹಾರ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

You may also like

Leave a Comment