Saturday, August 8, 2026
Home ಬೆಂಗಳೂರು ನಗರನೀಟ್ ಪರೀಕ್ಷಾ ಅಕ್ರಮ ಖಂಡಿಸಿ ವಿದ್ಯಾರ್ಥಿಗಳ ಧ್ವನಿ ಜಾಗೃತಿ ಸಮಾವೇಶ

ನೀಟ್ ಪರೀಕ್ಷಾ ಅಕ್ರಮ ಖಂಡಿಸಿ ವಿದ್ಯಾರ್ಥಿಗಳ ಧ್ವನಿ ಜಾಗೃತಿ ಸಮಾವೇಶ

ಬಿಕೆ ಹರಿಪ್ರಸಾದ್ ಉದ್ಘಾಟನೆ.ನೀಟ್ ಹೋರಾಟ ನಿಲ್ಲಲ್ಲ

by Dharmaraju
0 comments

ಕೆ.ಆರ್.ಪುರ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ತಲ ಒಂದು ಕೋಟಿ ಪರಿಹಾರ ನೀಡುವವರೆಗೂ ನಮ್ಮ ಹೋರಾಟ ನಿಲ್ಲದು ಎಂದು ಕೆಪಿಸಿಸಿ ಅಧ್ಯಕ್ಷ ಬಿ‌.ಕೆ.ಹರಿಪ್ರಸಾದ್ ಹೇಳಿದರು.

ಕೆ.ಆರ್.ಪುರದ ದೇವಸಂದ್ರದಲ್ಲಿ ಬೆಂಗಳೂರು ಪೂರ್ವ ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಹಾಗೂ ಹದಗೆಟ್ಟಿರುವ ಶಿಕ್ಷಣ ವ್ಯವಸ್ಥೆ ವಿರುದ್ಧ ವಿದ್ಯಾರ್ಥಿಗಳ ಧ್ವನಿ ಜಾಗೃತಿ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ನೀಟ್ ಪ್ರೆಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಆತ್ಮ ಸ್ಥೈರ್ಯ ಕಳೆದುಕೊಂಡು ತಮ್ಮ ಭವಿಷ್ಯದ ಆತಂಕದಿಂದ ಇಪ್ಪತ್ತೆರಡು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಆತ್ಮಹತ್ಯೆ ಮಾಡಿಕೊಂಡ ಕುಟುಂಬಗಳಿಗೆ ಆತ್ಮ ಸ್ಥೈರ್ಯ ತುಂಬುವ ಕೆಲಸ ಮಾಡಬೇಕು. ಪ್ರೆಶ್ನೆ ಪತ್ರಿಕೆ ಸೋರಿಕೆಯಿಂದಾಗಿ ವಿದ್ಯಾರ್ಥಿಗಳ ಭವಿಷ್ಯ ಅಂಧಕಾರದಲ್ಲಿ ಮುಳುಗಿದೆ. ಸುಮಾರು 152 ಪ್ರಶ್ನೆ ಪತ್ರಿಕೆ ಸೋರಿಕೆಯಾದರೂ ಯಾವುದೇ ನಾಚಿಕೆ ಮಾನ ಮರ್ಯಾದೆ ಇಲ್ಲದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಉದ್ಧಟತನ ಹೇಳಿಕೆ ನೀಡುತ್ತ ಬಂದಿರುವುದು ನಾಚಿಕೆ ಗೇಡಿನ ಸಂಗತಿ ಎಂದರು.



ಈ ದೇಶದ ಲಕ್ಷಾಂತರ ವಿದ್ಯಾರ್ಥಿಗಳು ಮತ್ತು ಯುವಕರು ಸಂವಿಧಾನದ ಆಶಯದಂತೆ ಪ್ರಜಾಪ್ರಭುತ್ವವನ್ನು ಉಳಿಸಲು ಉಜ್ವಲ ಭವಿಷ್ಯ ಕಾಪಾಡುವ ಸಲುವಾಗಿ ಎಲ್ಲಾ ರೀತಿಯ ಹೋರಾಟ ಮಾಡಿದ ನಂತರ ನೈತಿಕ ಹೋಣೆ ಹೊತ್ತು ರಾಜೀನಾಮೆ ನೀಡಿರುವುದು ಯುವ ಸಮುದಾಯಕ್ಕೆ ಇದು ಬಹುದೊಡ್ಡ ಕೊಡುಗೆಯಾಗಿದೆ. ವಿದ್ಯಾರ್ಥಿಗಳ ಮೇಲೆ ಅಶುರ್ವಾಯು, ಗೋಲಿಬಾರ್, ಲಾಠಿ ಮಾಡಿದಂತಹ ಅಮಿತ್ ಷಾ ಕೂಡ ರಾಜೀನಾಮೆ ನೀಡಬೇಕು. ಭವಿಷ್ಯದ ವಿದ್ಯಾರ್ಥಿಗಳ ಬೆಂಬಲಕ್ಕೆ ಸದಾ ಕಾಂಗ್ರೆಸ್ ಬೆಂಬಲವಾಗಿ ನಿಲ್ಲಲಿದೆ. ವಿದ್ಯಾರ್ಥಿಗಳ ಆತ್ಮ ಸ್ಥೈರ್ಯ ಕುಗ್ಗಬಾರದು ಎಂದು ಅವರ ಹೋರಾಟಕ್ಕೆ ಬೆಂಬಲ ಕೊಟ್ಟಿದ್ದೇವೆ ಎಂದರು.

ಹೋರಾಟ ಮಾಡಿದ ಯುವಕರು ಮತ್ತು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿ ಪೆಲೆಟ್ ಗನ್ ನಿಂದ ಹಲ್ಲೆಯಿಂದ ವಿದ್ಯಾರ್ಥಿ ಕಣ್ಣು ಕಳೆದುಕೊಂಡಿದ್ದಾರೆ. ಕೈ ಕಾಲು ಮುರಿದುಕೊಂಡು ಆಸ್ಪತ್ರೆ ಸೇರಿದ್ದಾರೆ. ಗಾಯಳುಗಳಿಗೂ ಪರಿಹಾರ ನೀಡಬೇಕು. ಸಾವಿರಾರು ವಿದ್ಯಾರ್ಥಿಗಳ ಮೇಲೆ ಪೋಲಿಸರು ಎಫ್ ಐಆರ್ ದಾಖಲು ಮಾಡಿದ್ದಾರೆ. ಎಫ್ಐಆರ್ ಹಿಂಪಡೆಯಬೇಕು. ಪ್ರಜಾಪ್ರಭುತ್ವದಲ್ಲಿ ಹೋರಾಟ ನಮ್ಮ ಸಂವಿಧಾನದ ಹಕ್ಕು. ನಮ್ಮ ಹಕ್ಕನ್ನು ಕಸಿಯುವ ಶಕ್ತಿಯನ್ನು ಸೋಲಿಸುವ ಕೆಲಸ ಮಾಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂಧರ್ಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ದತ್ತಾ, ಬೆಂಗಳೂರು ಪೂರ್ವ ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಮೋಹನ್ ಬಾಬು,ಮಾಜಿ ರಾಜ್ಯಸಭಾ ಸದಸ್ಯ ರಾಜೀವ್ ಗೌಡ, ಮಾಜಿ ವಿಧಾನ ಪರಿಷತ್ ಸದಸ್ಯ ಎಂ.ನಾರಾಯಣಸ್ವಾಮಿ, ಮೇಡಹಳ್ಳಿ ರಾಖಿ, ಅಗರ ಪ್ರಕಾಶ್, ಅರಳಪ್ಪ ಇದ್ದರು.

You may also like

Leave a Comment