Saturday, August 8, 2026
Home ಬೆಂಗಳೂರು ನಗರ105 ಅಡಿಗೆ ತಲುಪಿದ ಕೆಆರ್‌ಎಸ್ ಡ್ಯಾಂ ನೀರಿನ ಮಟ್ಟ:ಮಂಡ್ಯ ರೈತರಲ್ಲಿ ಹೆಚ್ಚಿದ ನಿರೀಕ್ಷೆ

105 ಅಡಿಗೆ ತಲುಪಿದ ಕೆಆರ್‌ಎಸ್ ಡ್ಯಾಂ ನೀರಿನ ಮಟ್ಟ:ಮಂಡ್ಯ ರೈತರಲ್ಲಿ ಹೆಚ್ಚಿದ ನಿರೀಕ್ಷೆ

ನಾಲೆಗಳಿಗೆ ನೀರು ಹರಿಸಬೇಕೆಂದು ಮಂಡ್ಯ ಜಿಲ್ಲೆಯ ರೈತರ ಆಗ್ರ.

by Dharmaraju
0 comments

ಮಂಡ್ಯ:ರಾಜ್ಯದಾದ್ಯಂತ ಮುಂಗಾರು ಮಳೆ ಚುರುಕುಗೊಂಡಿದ್ದು,ಪ್ರಮುಖ ಜಲಾಶಯಗಳಿಗೆ ಹರಿದುಬರುತ್ತಿರುವ ನೀರಿನ ಪ್ರಮಾಣದಲ್ಲಿ ಭಾರಿ ಏರಿಕೆ ಕಂಡಿದ್ದು, ಕಾವೇರಿ ಕೊಳ್ಳದ ಕೆಆರ್‌ಎಸ್, ಕಬಿನಿ ಹಾಗೂ ಹೇಮಾವತಿ ಡ್ಯಾಂಗಳಲ್ಲಿಯೂ ನೀರಿನ ಮಟ್ಟ ಸ್ಥಿರವಾಗಿ ಏರಿಕೆಯಾಗುತ್ತಿದೆ.

ಸದ್ಯ ಕಾವೇರಿ ಕೊಳ್ಳದ ಪ್ರಮುಖ ಡ್ಯಾಂ ಕೆಆರ್‌ಎಸ್‌ನಲ್ಲಿ ಇಂದಿನ ನೀರಿನ ಮಟ್ಟ 105.10 ಅಡಿಯಷ್ಟಿದೆ (ಗರಿಷ್ಠ ಮಟ್ಟ: 124.80 ಅಡಿ). 49.452 ಟಿಎಂಸಿ ಗರಿಷ್ಠ ಸಾಮರ್ಥ್ಯದ ಡ್ಯಾಂನಲ್ಲಿ ಪ್ರಸ್ತುತ 27.077 ಟಿಎಂಸಿ ನೀರು ಸಂಗ್ರಹವಿದ್ದು, 19,275 ಕ್ಯೂಸೆಕ್ ಒಳಹರಿವು ಮತ್ತು 1,985 ಕ್ಯೂಸೆಕ್ ಹೊರಹರಿವು ದಾಖಲಾಗಿದೆ.

ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದಾಗ, ರಾಜ್ಯ ಸರ್ಕಾರ ಮಂಡ್ಯ ಜಿಲ್ಲೆಯ ರೈತರಿಗೆ ಕಠಿಣ ಸೂಚನೆಯೊಂದನ್ನು ನೀಡಿತ್ತು. ಯಾವುದೇ ಹೊಸ ಬೆಳೆ ಬಿತ್ತನೆ ಮಾಡಬೇಡಿ, ಕುಡಿಯುವ ನೀರಿಗೆ ಆದ್ಯತೆ ನೀಡಬೇಕಾಗಿದೆ ಎಂದು ರೈತರನ್ನು ಕೈ ಕಟ್ಟಿ ಹಾಕಿತ್ತು. ಆದರೆ ಈಗ ಜಲಾನಯನ ಪ್ರದೇಶ ಹಾಗೂ ಕೊಡಗಿನಲ್ಲಿ ಉತ್ತಮ ಮಳೆಯಾಗುತ್ತಿದೆ.

ಕೆಆರ್‌ಎಸ್‌ ಜಲಾಶಯಕ್ಕೆ ಭಾರಿ ಪ್ರಮಾಣದ ನೀರು ಹರಿದು ಬರುತ್ತಿದೆ. ಇದರ ಪರಿಣಾಮ ಡ್ಯಾಂ ನೀರಿನ ಮಟ್ಟ ಭರಪೂರ 105 ಅಡಿ ತಲುಪಿದೆ.

ಕಾವೇರಿ ಜಲಾನಯನ ಪ್ರದೇಶದಲ್ಲಿ ಸದ್ಯ ಮಳೆ ಚುರುಕುಗೊಂಡ ಬೆನ್ನಲ್ಲೇ, ಸಕ್ಕರೆ ನಾಡು ಮಂಡ್ಯದ ರೈತರ ಮೊಗದಲ್ಲಿ ಹೊಸ ಭರವಸೆ ಮೂಡಿದೆ. ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ ಈಗ 105 ಅಡಿಗೆ ಏರಿಕೆಯಾಗಿದ್ದು, ಮುಂಗಾರು ಬೆಳೆಗೆ ಕೂಡಲೇ ನಾಲೆಗಳಿಗೆ ನೀರು ಹರಿಸಬೇಕೆಂದು ಮಂಡ್ಯ ಜಿಲ್ಲೆಯ ರೈತರು ಸರ್ಕಾರವನ್ನು ಆಗ್ರಹಿಸಿದ್ದಾರೆ.

ಡ್ಯಾಂನ ನೀರಿನ ಮಟ್ಟ 105 ಅಡಿಗೆ ಏರಿಕೆಯಾಗುತ್ತಿದ್ದಂತೆ ಮಂಡ್ಯ ಜಿಲ್ಲೆಯ ರೈತರು ಕೃಷಿ ಚಟುವಟಿಕೆಗೆ ಸಜ್ಜಾಗುತ್ತಿದ್ದಾರೆ. ಮುಂಗಾರು ಹಂಗಾಮಿನ ಹೊಸ ಬೆಳೆಗೆ ಕೂಡಲೇ ನಾಲೆಗಳಿಗೆ ನೀರು ಹರಿಸುವುದಾಗಿ ಸರ್ಕಾರ ಅಧಿಕೃತವಾಗಿ ಘೋಷಣೆ ಮಾಡಬೇಕು ಎಂದು ರೈತರು ಪಟ್ಟು ಹಿಡಿದಿದ್ದಾರೆ.

ಬಿತ್ತನೆಗೆ ಇದು ಸೂಕ್ತ ಸಮಯವಾಗಿದ್ದು, ಸರ್ಕಾರ ತಡ ಮಾಡಿದರೆ ಕೈಗೆ ಬಂದ ಬೆಳೆ ಬಾಯಿಗೆ ಬಾರದಂತಾಗುತ್ತದೆ ಎಂಬುದು ರೈತರ ಆತಂಕವಾಗಿದೆ.

ರಾಜ್ಯದ ವಿವಿಧ ಜಲಾಶಯಗಳ ಇಂದಿನ ನೀರಿನ ಮಟ್ಟದ ವಿವರ

ಕೆಆರ್‌ಎಸ್ ಜಲಾಶಯ:- ಗರಿಷ್ಠ ಮಟ್ಟ (ಅಡಿಗಳಲ್ಲಿ): 124.80 ಇಂದಿನ ಮಟ್ಟ: 102.09, ಒಳಹರಿವು: 32,048, ಹೊರಹರಿವು: 1,821 ಕ್ಯೂಸೆಕ್

ಹಾರಂಗಿ ಜಲಾಶಯ:- ಗರಿಷ್ಠ ಮಟ್ಟ (ಅಡಿಗಳಲ್ಲಿ): 2,859, 20໖ : 2,857.01, 20: 11,645, ಹೊರಹರಿವು: 10,750 ಕ್ಯೂಸೆಕ್

ಕಬಿನಿ ಜಲಾಶಯ:- ಗರಿಷ್ಠ ಮಟ್ಟ (ಅಡಿಗಳಲ್ಲಿ): 2,284.00, ໖ : 2282.59, : 31,746, ಹೊರಹರಿವು: 27000 ಕ್ಯೂಸೆಕ್

ಹೇಮಾವತಿ ಜಲಾಶಯ:- ಗರಿಷ್ಠ ಮಟ್ಟ (ಅಡಿಗಳಲ್ಲಿ): 2,922, ಇಂದಿನ ಮಟ್ಟ: 2911.75, ಒಳಹರಿವು: 12,859, ಹೊರಹರಿವು: 500 ಕ್ಯೂಸೆಕ್

ಲಿಂಗನಮಕ್ಕಿ:- ಗರಿಷ್ಠ ಮಟ್ಟ (ಅಡಿಗಳಲ್ಲಿ): 1,819, ໖ : 1,784.70, 0): 59,203, ಹೊರಹರಿವು: 761 ಕ್ಯೂಸೆಕ್

ಸೂಪಾ ಜಲಾಶಯ:- ಗರಿಷ್ಠ ಮಟ್ಟ (ಮೀ.ಗಳಲ್ಲಿ): 564, ಇಂದಿನ ಮಟ್ಟ: 540.30, ಒಳಹರಿವು: 44,062, ಹೊರಹರಿವು: 0 ಕ್ಯೂಸೆಕ್

ಮಾಣಿ ಜಲಾಶಯ:- ಗರಿಷ್ಠ ಮಟ್ಟ (ಅಡಿಗಳಲ್ಲಿ): 595, ಇಂದಿನ ಮಟ್ಟ: 582.78, ಒಳಹರಿವು: 10,003, ಹೊರಹರಿವು: 0

ತುಂಗಭದ್ರಾ ಜಲಾಶಯ:- ಗರಿಷ್ಠ ಮಟ್ಟ (ಅಡಿಗಳಲ್ಲಿ): 1,633,  ಇಂದಿನ ಮಟ್ಟ: 1,613.16, 2: 57,785, ಹೊರಹರಿವು: 1,390

ಮಲಪ್ರಭಾ ಜಲಾಶಯ:– ಗರಿಷ್ಠ ಮಟ್ಟ (ಅಡಿಗಳಲ್ಲಿ): 2,079.50, ಇಂದಿನ ಮಟ್ಟ: 2,060.60, 20: 11,703, ಹೊರಹರಿವು: 1,194,

ಘಟಪ್ರಭಾ ಜಲಾಶಯ:- ಗರಿಷ್ಠ ಮಟ್ಟ (ಅಡಿಗಳಲ್ಲಿ): 2,175, ಇಂದಿನ ಮಟ್ಟ: 2,158.33, 2: 20,782, ಹೊರಹರಿವು: 1,765

ತುಂಗಾ:- ಗರಿಷ್ಠ ಮಟ್ಟ (ಅಡಿಗಳಲ್ಲಿ): 588.24, 2 : 586.83, 2: 86,123, ಹೊರಹರಿವು: 89,503

ಭದ್ರಾ ಜಲಾಶಯ:- ಗರಿಷ್ಠ ಮಟ್ಟ (ಅಡಿಗಳಲ್ಲಿ): 186,ಇಂದಿನ ಮಟ್ಟ: 163.6, : 36,103, ಹೊರಹರಿವು: 189

ಆಲಮಟ್ಟಿ ಜಲಾಶಯ:- ಗರಿಷ್ಠ ಮಟ್ಟ (ಮೀ.ಗಳಲ್ಲಿ): 519,60, ಇಂದಿನ ಮಟ್ಟ: 518.94, : 1,25,855, : 1,50,000

ನಾರಾಯಣಪುರ ಜಲಾಶಯ:- ಗರಿಷ್ಠ ಮಟ್ಟ (ಮೀ. ಗಳಲ್ಲಿ): 492.25,ಇಂದಿನ ಮಟ್ಟ:491.40, 2: 1,30,000, : 1,55,144

You may also like

Leave a Comment