Tuesday, September 8, 2026
Home ಶಿಕ್ಷಣಬಿದರಹಳ್ಳಿ ಸರ್ಕಾರಿ ಶಾಲೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆ.

ಬಿದರಹಳ್ಳಿ ಸರ್ಕಾರಿ ಶಾಲೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆ.

by Dharmaraju
0 comments

ಮಹದೇವಪುರ:- ವಿದ್ಯಾರ್ಥಿಗಳು ಶಿಸ್ತು, ಶ್ರಮ, ಸಮಯಪ್ರಜ್ಞೆ, ಆತ್ಮವಿಶ್ವಾಸ ಹಾಗೂ ನಿರ್ಭಯತೆ ಬೆಳೆಸಿಕೊಂಡಾಗ ಮಾತ್ರ ಭವಿಷ್ಯದಲ್ಲಿ ಭವ್ಯ ಭಾರತವನ್ನು ಕಟ್ಟಲು ಸಾಧ್ಯ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಗಣೇಶ್ ಅವರು ತಿಳಿಸಿದರು .

ಮಹದೇವಪುರ ಕ್ಷೇತ್ರದ ಬಿದರಹಳ್ಳಿಯ ಸರ್ಕಾರಿ ಫ್ರೌಡ ಶಾಲೆ ಆಯೋಜಿಸಿದ್ದ 80 ನೇ ವರ್ಷದ ಸ್ವಾತಂತ್ರ ದಿನಾಚರಣೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು ಭಾರತ ದೇಶದ ಸಂಭ್ರಮಕ್ಕೆ ಇಡೀ ವಿಶ್ವವೇ ಸಾಕ್ಷಿಯಾಗಿದೆ, ಅದೆಷ್ಟೋ ಸಾವು ನೋವುಗಳ ಪ್ರತೀಕವಾಗಿ ಸಿಕ್ಕ ಈ ಸ್ವಾತಂತ್ರ್ಯವನ್ನು ಅರ್ಥಪೂರ್ಣವಾಗಿ ಆಚರಿಸಿಕೊಂಡು ನಮಗಾಗಿ ಪ್ರಾಣ ಅರ್ಪಿಸಿದ ಮಹಾನ್ ವೀರರನ್ನು ನೆನೆಯುವ ಮೂಲಕ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದರು .

ಮಕ್ಕಳು ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ದೇಶಕ್ಕೆ ಹಾಗೂ ಸಮಾಜಕ್ಕೆ ಕೀರ್ತಿ ತರುವ ಕಾರ್ಯಮಾಡಬೇಕು ಎಂದು ಹೇಳಿದರು.

ಭೂನ್ಯಾಯಮಂಡಳಿ ಮಾಜಿ ಸದಸ್ಯ ಹಾಗೂ ಶ್ರೀಚೈತನ್ಯ ಡೆವಲಪರ್ ಮಾಲಿಕ ಬಿ.ಎಸ್.ಮಧುಕುಮಾರ್ ಅವರು ಮಾತನಾಡಿ ಪ್ರತಿವರ್ಷದಂತೆ ನಾನು ಕಲಿತಿರುವ ಶಾಲೆಯ ಮಕ್ಕಳಿಗೆ ಪ್ರೋತ್ಸಾಹ ನೀಡುತ್ತಾ ಬಂದಿದ್ದೆನೆ.ಅದೇ ಈ ವರ್ಷ ಯಾರು ಅತೀ ಹೆಚ್ಚು ಅಂಕ ಪಡೆಯುತ್ತಾರೋ ಮೂರು ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ನೀಡುವುದಾಗಿ ಹೇಳಿದ್ದೆ ಅವರಿಗೆ
ಈ ವರ್ಷ ಲ್ಯಾಪ್‌ಟಾಪ್ ವಿತರಣೆ ಮಾಡಿ ಸನ್ಮಾನಿಸಲಾಯಿತು ಎಂದು ಹೇಳಿದರು.

ವಿದ್ಯಾರ್ಥಿಗಳಲ್ಲಿ ದೇಶಪ್ರೇಮ, ರಾಷ್ಟ್ರಾಭಿಮಾನ ಹಾಗೂ ಸಾಮಾಜಿಕ ಜವಾಬ್ದಾರಿಯ ಮನೋಭಾವ ಬೆಳೆಸುವಲ್ಲಿ ಶಾಲಾ ಶಿಕ್ಷಣದ ಪಾತ್ರ ಮಹತ್ವದ್ದಾಗಿದೆ. ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಭವಿಷ್ಯದಲ್ಲಿ ಸಮಾಜ ಮತ್ತು ದೇಶದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು.

ಗ್ರಾಮದ ಮುಖಂಡರು ಕಳೆದ ಬಾರಿ ಪರಿಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಬಿದರಹಳ್ಳಿ ಗ್ರಾಮ ಪಂಚಾಯತಿ ಮಾಜಿ ಅದ್ಯಕ್ಷ ಬಿ.ಜಿ.ರಾಜೇಶ್, ವರುಣ್ ,ರಾಜ್ಯಪರಿಷತ್ ಸದಸ್ಯ ನಟರಾಜ್,ಮುಖಂಡರಾದ ಚಂದ್ರಶೇಖರ, ಸುನೀಲ್ ಕುಮಾರ್, ಶಿಕ್ಷಕರು ವಿದ್ಯಾರ್ಥಿಗಳು ಗ್ರಾಮಸ್ಥರಿದ್ದರು

You may also like

Leave a Comment