Tuesday, September 8, 2026
Home ಅಪರಾಧ ಸುದ್ದಿಹೊಸಕೋಟೆ ಬಳಿ ಲಾರಿ-ಬೈಕ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾ*ವು

ಹೊಸಕೋಟೆ ಬಳಿ ಲಾರಿ-ಬೈಕ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾ*ವು

by Dharmaraju
0 comments

ಹೊಸಕೋಟೆ: ನಗರದ ಸಮೀಪದ ಕೊಳತೂರು ಗೇಟ್ ಬಳಿ ಲಾರಿ ಮತ್ತು ದ್ವಿಚಕ್ರ ವಾಹನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಬೈಕ್‌ ಸವಾರ ಮೃ*ತಪಟ್ಟಿದ್ದಾರೆ.

ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ತೊರ್ನಹಳ್ಳಿ ನಿವಾಸಿ ಸುಬ್ರಮಣಿ (42) ಮೃ*ತರು. ಸೋಮವಾರ ಬೆಳಗ್ಗೆ 7 ಗಂಟೆಗೆ ಕೋಲಾರದಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಕೊಳತೂರು ಗೇಟ್ ಬಳಿ ಅಪಘಾತ ಸಂಭವಿಸಿದೆ.

ಶ*ವ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಈ ಸಂಬಂಧ ಹೊಸಕೋಟೆ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

You may also like

Leave a Comment