Sunday, 1 November 2026 — Prajabharat
BREAKING NEWS
ಬೆಂಗಳೂರು ನಗರ ಮೊಸರಿನ ದರ ಲೀಟರ್‌ಗೆ 14 ರೂ. ಹೆಚ್ಚಳ;ನಂದಿನಿ’ ಟೋನ್ಡ್ ಪ್ರತಿ ಲೀಟರ್‌ಗೆ 8 ರೂ. ಹೆಚ್ಚಳ : ಕೆಎಂಎಫ್ ಆದೇಶ ದೊಡ್ಡಬಳ್ಳಾಪುರ 71ನೇ ಕನ್ನಡ ರಾಜ್ಯೋತ್ಸವ ಕಲರವ,ಕನ್ನಡ ಭಾಷೆ, ಸಂಸ್ಕೃತಿ ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯ:ಸಚಿವ ಮುನಿಯಪ್ಪ. ಬೆಂಗಳೂರು ನಗರ ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯ ಮಹತ್ವ ಸಾರಿದ ಬೆಂ.ಪೂರ್ವ ಪಾಲಿಕೆ ಆಯುಕ್ತರು ಡಿ.ಎಸ್. ರಮೇಶ್ ದೇವನಹಳ್ಳಿ, ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ 16 ಸಾಧಕರ ಆಯ್ಕೆ ಬೆಂಗಳೂರು ನಗರ ಇ-ಖಾತಾ ಅರ್ಜಿಗಳ ವಿಲೇವಾರಿಯಲ್ಲಿ ವಿಳಂಬವಾಗದಂತೆ ಕ್ರಮವಹಿಸಿ: ಆಯುಕ್ತ ಡಿ.ಎಸ್. ರಮೇಶ್ ಬೆಂಗಳೂರು ನಗರ ಅಂಬೇಡ್ಕ‌ರ್ ನಗರ ಶಾಲೆಯಲ್ಲಿ ವಾಲ್ಮೀಕಿ ಜಯಂತಿ ಸಂಭ್ರಮ ಬೆಂಗಳೂರು ನಗರ ಕೇಂಬ್ರಿಡ್ಜ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇಂಜಿನಿಯರಿಂಗ್, ಎಂಸಿಎ, ಎಂಬಿಎ ಮತ್ತು ಎಂಟೆಕ್ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ‌ ಸಮಾರಂಭ. ಬೆಂಗಳೂರು ನಗರ ವರ್ತೂರು–ಗುಂಜೂರು ಮುಖ್ಯರಸ್ತೆ ಕಾಮಗಾರಿ ಪರಿಶೀಲನೆ ನಡೆಸಿದ ಮಾಜಿ ಸಚಿವ ಲಿಂಬಾವಳಿ. ಬೆಂಗಳೂರು ನಗರ ಮೊಸರಿನ ದರ ಲೀಟರ್‌ಗೆ 14 ರೂ. ಹೆಚ್ಚಳ;ನಂದಿನಿ’ ಟೋನ್ಡ್ ಪ್ರತಿ ಲೀಟರ್‌ಗೆ 8 ರೂ. ಹೆಚ್ಚಳ : ಕೆಎಂಎಫ್ ಆದೇಶ ದೊಡ್ಡಬಳ್ಳಾಪುರ 71ನೇ ಕನ್ನಡ ರಾಜ್ಯೋತ್ಸವ ಕಲರವ,ಕನ್ನಡ ಭಾಷೆ, ಸಂಸ್ಕೃತಿ ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯ:ಸಚಿವ ಮುನಿಯಪ್ಪ. ಬೆಂಗಳೂರು ನಗರ ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯ ಮಹತ್ವ ಸಾರಿದ ಬೆಂ.ಪೂರ್ವ ಪಾಲಿಕೆ ಆಯುಕ್ತರು ಡಿ.ಎಸ್. ರಮೇಶ್ ದೇವನಹಳ್ಳಿ, ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ 16 ಸಾಧಕರ ಆಯ್ಕೆ ಬೆಂಗಳೂರು ನಗರ ಇ-ಖಾತಾ ಅರ್ಜಿಗಳ ವಿಲೇವಾರಿಯಲ್ಲಿ ವಿಳಂಬವಾಗದಂತೆ ಕ್ರಮವಹಿಸಿ: ಆಯುಕ್ತ ಡಿ.ಎಸ್. ರಮೇಶ್ ಬೆಂಗಳೂರು ನಗರ ಅಂಬೇಡ್ಕ‌ರ್ ನಗರ ಶಾಲೆಯಲ್ಲಿ ವಾಲ್ಮೀಕಿ ಜಯಂತಿ ಸಂಭ್ರಮ ಬೆಂಗಳೂರು ನಗರ ಕೇಂಬ್ರಿಡ್ಜ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇಂಜಿನಿಯರಿಂಗ್, ಎಂಸಿಎ, ಎಂಬಿಎ ಮತ್ತು ಎಂಟೆಕ್ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ‌ ಸಮಾರಂಭ. ಬೆಂಗಳೂರು ನಗರ ವರ್ತೂರು–ಗುಂಜೂರು ಮುಖ್ಯರಸ್ತೆ ಕಾಮಗಾರಿ ಪರಿಶೀಲನೆ ನಡೆಸಿದ ಮಾಜಿ ಸಚಿವ ಲಿಂಬಾವಳಿ.
ಬೆಂಗಳೂರು ನಗರ

ಇ-ಖಾತಾ ಅರ್ಜಿಗಳ ವಿಲೇವಾರಿಯಲ್ಲಿ ವಿಳಂಬವಾಗದಂತೆ ಕ್ರಮವಹಿಸಿ: ಆಯುಕ್ತ ಡಿ.ಎಸ್. ರಮೇಶ್

Dharmaraju
ವರದಿ: Dharmaraju ಮುಖ್ಯ ಸಂಪಾದಕರು (Chief Editor)
3 ನಿಮಿಷ ಓದು

ಮಹದೇವಪುರ: ಮಾನ್ಯ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಶ್ರೀ ಕೃಷ್ಣ ಬೈರೇಗೌಡ ಅವರ ನಿರ್ದೇಶನದಂತೆ, ‘ನನ್ನ ಇ-ಖಾತಾ, ನನ್ನ ಹಕ್ಕು’ ಕಾರ್ಯಕ್ರಮದಡಿ ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯ ವಿವಿಧ ಉಪವಿಭಾಗಗಳ ಸಹಾಯಕ ಕಂದಾಯ ಅಧಿಕಾರಿಗಳ (ಎಆರ್ ಒ) ಕಚೇರಿಗಳಲ್ಲಿ ಇ-ಖಾತಾ ಮೇಳವನ್ನು ಆಯೋಜಿಸಲಾಯಿತು. ಸಾರ್ವಜನಿಕರು ತಮ್ಮ ಆಸ್ತಿಗಳಿಗೆ ಸಂಬಂಧಿಸಿದ ಇ-ಖಾತಾ ಸೇವೆಗಳನ್ನು ಸುಲಭವಾಗಿ ಪಡೆಯುವ ಉದ್ದೇಶದಿಂದ ಈ ಮೇಳವನ್ನು ಆಯೋಜಿಸಲಾಗಿತ್ತು.

ಈ ಮೇಳದಲ್ಲಿ ಸಾಕಷ್ಟು ಇ- ಖಾತಾ ಮಾಲೀಕರು ಭಾಗವಹಿಸಿ, ಇ-ಖಾತಾ ಸಂಬಂಧಿತ ಸೇವೆಗಳನ್ನು ಪಡೆದುಕೊಂಡರು. ಆ ಮೂಲಕ ‘ನನ್ನ ಇ-ಖಾತಾ, ನನ್ನ ಹಕ್ಕು’ ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡರು.

ಬೆಂಗಳೂರು ಪೂರ್ವ ನಗರ ಪಾಲಿಕೆಯ ಆಯುಕ್ತರಾದ ಡಿ.ಎಸ್. ರಮೇಶ್ ಅವರು ಮಹದೇವಪುರ ವಲಯದ ವೈಟ್‌ಫೀಲ್ಡ್, ಮಾರತ್ತಹಳ್ಳಿ ಹಾಗೂ ಕೆ.ಆರ್. ಪುರಂ ವಿಭಾಗದ ಎಚ್.ಎ.ಎಲ್. ಉಪವಿಭಾಗಗಳಲ್ಲಿ ಆಯೋಜಿಸಲಾಗಿದ್ದ ಇ-ಖಾತಾ ಮೇಳದ ಕೇಂದ್ರಗಳಿಗೆ ಭೇಟಿ ನೀಡಿ, ಅರ್ಜಿಗಳ ಸ್ವೀಕಾರ, ಅಗತ್ಯ ದಾಖಲೆಗಳ ಪರಿಶೀಲನೆ ಹಾಗೂ ನಾಗರಿಕರಿಗೆ ಸೇವೆ ಒದಗಿಸುವ ಪ್ರಕ್ರಿಯೆಯನ್ನು ಪರಿಶೀಲಿಸಿದರು.


ಈ ಸಂದರ್ಭದಲ್ಲಿ ಮೇಳದ ಕಾರ್ಯಚಟುವಟಿಕೆಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಮೇಳಕ್ಕೆ ಆಗಮಿಸಿದ್ದ ನಾಗರಿಕರೊಂದಿಗೆ ಸಂವಾದ ನಡೆಸಿ, ಇ-ಖಾತಾ ಪಡೆಯುವ ಸಂದರ್ಭದಲ್ಲಿ ಎದುರಾಗುತ್ತಿರುವ ಸಮಸ್ಯೆಗಳು ಹಾಗೂ ಅವರ ಅಹವಾಲುಗಳನ್ನು ಆಲಿಸಿದರು.

ಅರ್ಜಿಗಳ ಪರಿಶೀಲನೆ ಹಾಗೂ ವಿಲೇವಾರಿಯಲ್ಲಿ ವಿಳಂಬವಾಗದಿರಲಿ

ಇ-ಖಾತಾ ಕೋರಿ ಸಲ್ಲಿಕೆಯಾಗುವ ಅರ್ಜಿಗಳು ಮತ್ತು ಅವುಗಳಿಗೆ ಲಗತ್ತಿಸಿರುವ ದಾಖಲೆಗಳನ್ನು ಸಮರ್ಪಕವಾಗಿ ಪರಿಶೀಲಿಸಬೇಕು. ಅರ್ಜಿಗಳಲ್ಲಿ ಅಗತ್ಯ ದಾಖಲೆಗಳ ಕೊರತೆ ಅಥವಾ ಲೋಪದೋಷಗಳಿದ್ದಲ್ಲಿ ಸಂಬಂಧಪಟ್ಟ ಅರ್ಜಿದಾರರಿಗೆ ಅವುಗಳ ಕುರಿತು ಸ್ಪಷ್ಟ ಮಾಹಿತಿ ನೀಡಿ, ಸರಿಪಡಿಸಿಕೊಳ್ಳಲು ಮಾರ್ಗದರ್ಶನ ಒದಗಿಸಬೇಕು. ಇ-ಖಾತಾ ಪಡೆಯುವ ಪ್ರಕ್ರಿಯೆಯ ಪ್ರತಿಯೊಂದು ಹಂತದ ಬಗ್ಗೆಯೂ ಸಾರ್ವಜನಿಕರಿಗೆ ಮಾಹಿತಿ ನೀಡುವ ಮೂಲಕ ಅನಗತ್ಯ ಗೊಂದಲ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಆಯುಕ್ತರು ತಿಳಿಸಿದರು.

ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ

ಇ-ಖಾತಾ ಅರ್ಜಿ ಸಲ್ಲಿಕೆ, ಆಸ್ತಿ ದಾಖಲೆಗಳಲ್ಲಿನ ವ್ಯತ್ಯಾಸ ಹಾಗೂ ಅರ್ಜಿಗಳ ವಿಲೇವಾರಿಗೆ ಸಂಬಂಧಿಸಿದಂತೆ ಸಾರ್ವಜನಿಕರು ವ್ಯಕ್ತಪಡಿಸುವ ಅಹವಾಲುಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಸಮಸ್ಯೆಗಳ ಸ್ವರೂಪವನ್ನು ಪರಿಶೀಲಿಸಿ, ನಿಯಮಾನುಸಾರ ಪರಿಹಾರ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಸಣ್ಣಪುಟ್ಟ ಲೋಪದೋಷಗಳಿಗಾಗಿ ನಾಗರಿಕರು ಪದೇಪದೇ ಕಚೇರಿಗಳಿಗೆ ಭೇಟಿ ನೀಡುವ ಪರಿಸ್ಥಿತಿ ನಿರ್ಮಾಣವಾಗದಂತೆ, ಸ್ಥಳದಲ್ಲಿಯೇ ಸೂಕ್ತ ಮಾರ್ಗದರ್ಶನ ನೀಡಬೇಕು. ಅರ್ಹ ಅರ್ಜಿದಾರರಿಗೆ ಯಾವುದೇ ಅನಗತ್ಯ ವಿಳಂಬವಿಲ್ಲದೆ ಸೇವೆ ತಲುಪುವಂತೆ ಸಂಬಂಧಪಟ್ಟ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.

ಸಾರ್ವಜನಿಕರಿಗೆ ಅಗತ್ಯ ಸೌಲಭ್ಯ ಹಾಗೂ ಮಾರ್ಗದರ್ಶನ ಕಲ್ಪಿಸಿ

ಇ-ಖಾತಾ ಮೇಳದ ಕೇಂದ್ರಗಳಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕು. ಅರ್ಜಿದಾರರಿಗೆ ಸೇವೆ ಪಡೆಯುವ ವಿಧಾನ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಮುಂದಿನ ಪ್ರಕ್ರಿಯೆಗಳ ಕುರಿತು ಸ್ಪಷ್ಟವಾಗಿ ತಿಳಿಸಬೇಕು. ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಿ, ಪ್ರತಿಯೊಂದು ಅರ್ಜಿಯನ್ನೂ ನಿಯಮಾನುಸಾರ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ‘ನನ್ನ ಇ-ಖಾತಾ, ನನ್ನ ಹಕ್ಕು’ ಅಭಿಯಾನದ ಕುರಿತು ಹೆಚ್ಚಿನ ಅರಿವು ಮೂಡಿಸಿ, ಅರ್ಹ ಆಸ್ತಿ ಮಾಲೀಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಅಗತ್ಯ ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಮಹದೇವಪುರ ಹಾಗೂ ಕೆ.ಆರ್.ಪುರಂ ವಲಯಗಳ ಆರು ಉಪವಿಭಾಗಗಳಲ್ಲಿ ಇ-ಖಾತಾ ಮೇಳ

ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯ ಮಹದೇವಪುರ ವಲಯದ ಹೂಡಿ, ಮಾರತಹಳ್ಳಿ ಹಾಗೂ ವೈಟ್ಫೀಲ್ಡ್ ಮತ್ತು ಕೆ.ಆರ್.ಪುರಂ ವಲಯದ ಎಚ್ಎಎಲ್ ವಿಮಾನ ನಿಲ್ದಾಣ, ಕೆ.ಆರ್.ಪುರಂ ಹಾಗೂ ಹೊರಮಾವು ಉಪವಿಭಾಗಗಳ ಸಹಾಯಕ ಕಂದಾಯ ಅಧಿಕಾರಿಗಳ (ಎಆರ್‌ಒ) ಕಚೇರಿಗಳಲ್ಲಿ ಇ-ಖಾತಾ ಮೇಳವನ್ನು ಆಯೋಜಿಸಲಾಗಿತ್ತು. ಈ ಕೇಂದ್ರಗಳ ಮೂಲಕ ನಾಗರಿಕರಿಗೆ ಆಸ್ತಿ ದಾಖಲೆಗಳಿಗೆ ಸಂಬಂಧಿಸಿದ ಇ-ಖಾತಾ ಸೇವೆಗಳನ್ನು ಪಡೆಯಲು ಅವಕಾಶ ಕಲ್ಪಿಸಲಾಗಿತ್ತು.

ಈ ಸಂದರ್ಭದಲ್ಲಿ ಮಹದೇವಪುರ ವಲಯದ ಜಂಟಿ ಆಯುಕ್ತರಾದ ಡಾ. ಕೆ. ದಾಕ್ಷಾಯಿಣಿ, ಉಪ ಆಯುಕ್ತರು, ಸಹಾಯಕ ಕಂದಾಯ ಅಧಿಕಾರಿಗಳು ಹಾಗೂ ಕಂದಾಯ ಇಲಾಖೆಯ ಇತರೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಮುಖ್ಯ ಸಂಪಾದಕರು (Chief Editor) ✍️ 306 ಲೇಖನಗಳು

Dharmaraju

Dharmaraju ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment