71ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ನವೆಂಬರ್ 01 ರಂದು ನಡೆಯಲಿರುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ 16 ಸಾಧಕರನ್ನು ಸನ್ಮಾನಿಸಲು ಆಯ್ಕೆ ಮಾಡಲಾಗಿದೆ.
ದೊಡ್ಡಬಳ್ಳಾಪುರ, ಹೊಸಕೋಟೆ, ದೇವನಹಳ್ಳಿ ಹಾಗೂ ನೆಲಮಂಗಲ ತಾಲೂಕುಗಳ ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ, ಅವರ ಸಾಧನೆ ಮತ್ತು ಅರ್ಹತೆಯನ್ನು ಪರಿಗಣಿಸಿ ಆಯ್ಕೆ ಮಾಡಲಾಗಿದೆ.
ದೊಡ್ಡಬಳ್ಳಾಪುರ ತಾಲ್ಲೂಕು
ರಂಗಭೂಮಿ ಕ್ಷೇತ್ರದಲ್ಲಿ ಎನ್. ಅಂಜಿನಪ್ಪ, ಕನ್ನಡ ಪರ ಹೋರಾಟ ಕ್ಷೇತ್ರದಲ್ಲಿ ನಾಗರಾಜು ಎಂ. ಮತ್ತು ನಂ. ಮಹಾದೇವ ಹಾಗೂ ಜನಪದ ಕ್ಷೇತ್ರದಲ್ಲಿ ಜಯರಾಮ್ ಎ. ಅವರನ್ನು ಆಯ್ಕೆ ಮಾಡಲಾಗಿದೆ.
ಹೊಸಕೋಟೆ ತಾಲ್ಲೂಕು
ಸಮಾಜ ಸೇವೆ ಕ್ಷೇತ್ರದಲ್ಲಿ ಕಾಂತರಾಜ್ ಕೆ.ಎಂ., ರಂಗಭೂಮಿ ಕ್ಷೇತ್ರದಲ್ಲಿ ರಮೇಶ್ ಹಾಗೂ ಸಿ. ರಾಮಯ್ಯ ಮತ್ತು ಕನ್ನಡ ಪರ ಹೋರಾಟ ಕ್ಷೇತ್ರದಲ್ಲಿ ಡಿ.ಎಸ್. ರಾಜಶೇಖರ್ ಅವರನ್ನು ಆಯ್ಕೆ ಮಾಡಲಾಗಿದೆ.
ದೇವನಹಳ್ಳಿ ತಾಲ್ಲೂಕು
ರಂಗಭೂಮಿ ಕ್ಷೇತ್ರದಲ್ಲಿ ಶಿವರಾಂ, ಕ್ಎ ಶ್ರೀನಿವಾಸ , ಜನಪದ ಕ್ಷೇತ್ರದಲ್ಲಿ ಈ ಮುನಿಶಾಮಪ್ಪ, ಯಕ್ಷಗಾನ ಕ್ಷೇತ್ರದಲ್ಲಿ ದೊಡ್ಡಮಲ್ಲಯ್ಯು ಅವರನ್ನು ಆಯ್ಕೆ ಮಾಡಲಾಗಿದೆ.
ನೆಲಮಂಗಲ ತಾಲ್ಲೂಕು
ಸಂಗೀತ ಕ್ಷೇತ್ರದಲ್ಲಿ ಡಾ. ಅರ್ಚನಾ ಕುಲಕರ್ಣಿ, ಕಲಾ ಕ್ಷೇತ್ರದಲ್ಲಿ ಕೆ. ತಿಮ್ಮರಾಯಪ್ಪ ಹಾಗೂ ರಂಗಭೂಮಿ ಕ್ಷೇತ್ರದಲ್ಲಿ ಜ್ಯೋತಿಲಿಂಗಪ್ಪ ಮತ್ತು ಕೆಂಪಣ್ಣ ಅವರನ್ನು ಆಯ್ಕೆ ಮಾಡಲಾಗಿದೆ.
ವಿವಿಧ ಕ್ಷೇತ್ರಗಳಲ್ಲಿ ಕನ್ನಡ ನಾಡು, ನುಡಿ, ಸಂಸ್ಕೃತಿ ಹಾಗೂ ಕಲಾ ಪರಂಪರೆಯ ಉಳಿವು ಮತ್ತು ಬೆಳವಣಿಗೆಗೆ ಶ್ರಮಿಸುತ್ತಿರುವ ಸಾಧಕರನ್ನು ಗುರುತಿಸಿ ಗೌರವಿಸುತ್ತಿರುವುದು ರಾಜ್ಯೋತ್ಸವದ ಸಂಭ್ರಮಕ್ಕೆ ಮತ್ತಷ್ಟು ಮೆರುಗು ನೀಡಿದೆ.