ಕೆ.ಆರ್.ಪುರ: ವಿದ್ಯಾರ್ಥಿಗಳು ಯಶಸ್ವಿಯಾಗಲು ಮಾನವೀಯ ಮೌಲ್ಯಗಳ ಜೋತೆಗೆ ಆತ್ಮಗೌರವ ಬೆಳೆಸಿಕೊಳ್ಳಬೇಕು,ಇದು ಮುಂದಿನ ಜೀವನಕ್ಕೆ ಭದ್ರ ಬುನಾದಿ ಹಾಕಿಕೊಡಲಿದೆ ಎಂದು ಕೇಂಬ್ರಿಡ್ಜ್ ಕಾಲೇಜಿನ ಅಧ್ಯಕ್ಷ ಡಿ.ಕೆ.ಮೋಹನ್ ತಿಳಿಸಿದರು.

ಕೆ.ಆರ್.ಪುರದ ಕೇಂಬ್ರಿಡ್ಜ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇಂಜಿನಿಯರಿಂಗ್, ಎಂಸಿಎ, ಎಂಬಿಎ ಮತ್ತು ಎಂಟೆಕ್ ವಿದ್ಯಾರ್ಥಿಗಳ ಪದವಿ ಪ್ರಧಾನ ಸಮಾರಂಭವು ನೆರವೇರಿಸಿ ಮಾತನಾಡಿದ ಅವರು. ಇವತ್ತು ಪದವಿ ಪ್ರಧಾನ ಸಮಾರಂಭದಲ್ಲಿ 707 ಇಂಜಿನಿಯರಿಂಗ್ ಪದವೀಧರರು, ಸುಮಾರು 232 ಸ್ನಾತಕೋತ್ತರ ವಿಧ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಲಾಯಿತು ಎಂದು ತಿಳಿಸಿದರು.
ಕೃತಕ ಬುದ್ಧಿಮತ್ತೆಯ (AI) ಪ್ರಭಾವವನ್ನು ಎತ್ತಿ ತೋರಿಸುವ ಸ್ಪೂರ್ತಿದಾಯಕ ಭಾಷಣ ಮಾಡಿದರು ಮತ್ತು ವಿಕಸನಗೊಳ್ಳುತ್ತಿರುವ ಜಗತ್ತಿನಲ್ಲಿ ಪ್ರಸ್ತುತವಾಗಿರಲು ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವ ಮಹತ್ವವನ್ನು ಹೇಳಿದರು. ಪದವೀಧರರು ಪ್ರತಿದಿನ ಹೊಸದನ್ನು ಕಲಿಯಲು ಪ್ರೋತ್ಸಾಹಿಸಿದರು ಮತ್ತು ಬದಲಾಗುತ್ತಿರುವ ಸಂದರ್ಭಗಳಿಗೆ ಹೊಂದಿಕೊಳ್ಳಲು ಕಲಿಯುವುದನ್ನು ಬಿಟ್ಟು ಮತ್ತೆ ಕಲಿಯುವ ಅಗತ್ಯವನ್ನು ಹೇಳಿದರು.
ಯಶಸ್ಸನ್ನು ಪಡೆಯಲು ಪರಿಶ್ರಮ, ಬದ್ಧತೆ ಮತ್ತು ತಾಳ್ಮೆ ಅತ್ಯಗತ್ಯ ಎಂಬುದನ್ನು ಅವರು ನೆನಪಿಸಿದರು. ಮಾನವೀಯ ಸಂಬಂಧಗಳನ್ನು ಬೆಳೆಸಿಕೊಳ್ಳುವುದು ಮತ್ತು ದೃಢವಾದ ಮೌಲ್ಯಗಳನ್ನು ಎತ್ತಿಹಿಡಿಯುವುದು ಎಷ್ಟು ಮುಖ್ಯ ಎಂಬುದನ್ನೂ ಅವರು ಒತ್ತಿ ಹೇಳಿದರು.
ಮಣಿಪುರ ಸರಕಾರದ ಅಲ್ಪಸಂಖ್ಯಾತ ಪರಿಶಿಷ್ಟ ಜಾತಿ ಮತ್ತು ಹಿಂದುಳಿದ ವ್ಯವಹಾರಗಳ ಇಲಾಖೆಯಲ್ಲಿ ಆಯುಕ್ತರು, “ಮಿರಾಕಲ್ ಮ್ಯಾನ್ ಆಫ್ ಮಣಿಪುರ” ಎಂದೇ ಪ್ರಸಿದ್ಧರಾಗಿರುವ ಶ್ರೀ ಆರ್ಮ್ ಸ್ಟ್ರಾಂಗ್ ಪಾಮೆಯವರು ವಿಧ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡುತ್ತಾ ದೇಶದ ಪ್ರತಿಯೊಬ್ಬ ವಿದ್ಯಾರ್ಥಿಯು ಈ ದೇಶದ ಋಣವನ್ನು ಯಾವುದಾದರೂ ರೀತಿಯಲ್ಲಿ ತೀರಿಸಬೇಕೆಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ನಿಮಗಾಗಿ ತಮ್ಮ ಜೀವನವನ್ನೇ ಮುಡುಪಿಟ್ಟ ನಿಮ್ಮ ಪೋಷಕರನ್ನು ಗೌರವಿಸಿ, ನೀವು ಮನಸು ಮಾಡಿದರೆ ಯಾವುದೂ ಅಸಾಧ್ಯವಲ್ಲ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಟಾಟಾ ಎಲೆಕ್ಸಿ ಲಿಮಿಟೆಡ್ ಅಧ್ಯಕ್ಷ ಎನ್.ಗಣಪತಿ ಸುಬ್ರಹ್ಮಣ್ಯ ಅವರು ಮಾತನಾಡಿ ವಿದ್ಯಾರ್ಥಿಗಳು ಜೀವನದಲ್ಲಿ ಹಲವು ಕೌಶಲಗಳನ್ನು ಕಲಿಯುವ ಮೂಲಕ ಸ್ಪರ್ಧಾತ್ಮಕ ಯುಗಕ್ಕೆ ತಯಾರಾಗಬೇಕು ಎಂದು ಸಲಹೆ ನೀಡಿದರು.
ಎಐ ಯುಗದಲ್ಲಿ ಕೌಶಲ್ಯಗಳು ಮಾತ್ರ ನಿಮಗೆ ಉತ್ತಮ ವೇದಿಕೆ ಕಲ್ಪಿಸುತ್ತದೆ,ವೇದಿಕೆಗಳ ಸದುಪಯೋಗ ಸಹ ಕೌಶಲ್ಯಗಳಿಂದ ಸಾದ್ಯವಾಗಲಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕಾಲೇಜಿನ ಸಿಇಓ ನೀತಿನ್ ಮೋಹನ್,ಸಲಹೆಗಾರ ಬಾಲಸುಬ್ರಹ್ಮಣ್ಯಮೂರ್ತಿ. ಉಪ ಪ್ರಾಂಶುಪಾಲ ಡಾ. ನಾಗೇಶ್, ಡಾ. ಸುಬ್ರಹ್ಮಣ ಕಟ್ಟೆ, ವಿದ್ಯಾರ್ಥಿಗಳು ಮತ್ತು ಪೋಷಕರು ಹಾಜರಿದ್ದರು.