ಮಹದೇವಪುರ: ಕ್ಷೇತ್ರದ ಗುಂಜೂರಿನಲ್ಲಿ ವಿಶ್ವಬ್ಯಾಂಕ್ ನೆರವಿನ ಕರ್ನಾಟಕ ಜಲಭದ್ರತೆ ಮತ್ತು ವಿಪತ್ತುಸ್ಥಿತಿಸ್ಥಾಪಕತ್ವಕಾರ್ಯಕ್ರಮದಡಿ ಕೈಗೆತ್ತಿಕೊಳ್ಳಲಾಗಿರುವ ಜಲಗಾಲುವೆ ಮತ್ತು ಪ್ರವಾಹ ನಿಯಂತ್ರಣ ಕಾಮಗಾರಿಗಳಿಗೆ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಭೂಮಿಪೂಜೆ ನೆರವೇರಿಸಿದರು.

ನೀರುಗಾಲುವೆ ಮತ್ತು ಪ್ರವಾಹ ನಿಯಂತ್ರಣ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಸಿಎಂ ಅವರು, ಮಳೆ ಬಂದಾಗ ಹಲವು ಪ್ರದೇಶಗಳಲ್ಲಿ ನೀರು ನುಗ್ಗಿ ಜನರು ತೊಂದರೆ ಅನುಭವಿಸುತ್ತಿರುವುದನ್ನು ಸರ್ಕಾರ ಗಮನಿಸಿದೆ. ಮಳೆಗಾಲದ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಸುಮಾರು 2,000 ಕೋಟಿ ರೂಪಾಯಿ ವೆಚ್ಚದಲ್ಲಿ ರಾಜಕಾಲುವೆ ಮತ್ತು ಮಳೆನೀರು ಚರಂಡಿಗಳ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಇನ್ನೂ ಹಲವು ಪ್ರದೇಶಗಳಲ್ಲಿ ತಡೆಗೋಡೆ ನಿರ್ಮಾಣ ಹಾಗೂ ಒತ್ತುವರಿ ತೆರವು ಸೇರಿದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ” ಎಂದರು.

“ಶಂಕುಸ್ಥಾಪನೆ ಎಂದರೆ ಕೇವಲ ಕಲ್ಲು ನೆಡುವ ಕಾರ್ಯಕ್ರಮವಲ್ಲ. ಜನರ ಕನಸುಗಳಿಗೆ ಸ್ಪಂದಿಸಿ, ಅವರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ಹಾಗೂ ಬದುಕಿನಲ್ಲಿ ಬದಲಾವಣೆ ತರುವ ಕಾರ್ಯಕ್ರಮ” ಎಂದು ತಿಳಿಸಿದರು.
ಜಿಬಿಎ ಚುನಾವಣೆ ಹೆಚ್ಚು ದಿನ ಮುಂದೂಡಲು ಸಾಧ್ಯವಿಲ್ಲ. ಈ ಭಾಗದಲ್ಲಿ ಅಪಾರ್ಟೆಂಟ್ ಗಳು ಜನಸಂದಣಿಯೂ ಹೆಚ್ಚಿದೆ. ಅಪಾರ್ಟ್‌ಮೆಂಟ್‌ಗಳ ಕಾಯಿದೆ ಸಮರ್ಪಕವಾಗಿ ಜಾರಿಯಾಗಲು ಶ್ರಮವಹಿಸಲಾಗುವುದು. ಮತದಾರರ ನೋಂದಣಿಸೇರಿದಂತೆ ಚುನಾವಣೆಗೆ ಸಂಬಂಧಿಸಿದ ಪ್ರಕ್ರಿಯೆಗಳನ್ನು ಗಮನಿಸಲಾಗುತ್ತಿದೆ ತಿಳಿಸಿದರು. ಎಂದು

ನಗರದಮೂಲಸೌಕರ್ಯಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಅನುದಾನದಲ್ಲಿ ವಿವಿಧ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವ ಉದ್ದೇಶವಿದೆ. ಡಬಲ್ ಡೆಕ್ಕರ್ ರಸ್ತೆ, ಮೇಲ್ಲೇತುವೆ. ಯೋಜನೆಗಳಿಗೆ ಆದ್ಯತೆ ಸೇರಿದಂತೆ ಹಲವು ಅಭಿವೃದ್ಧಿಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ಹೇಳಿದರು.
ಬೆಂಗಳೂರು ನಗರಕ್ಕೆ ವಿಶ್ವದ ಬೇರೆಬೇರೆ ರಾಷ್ಟ್ರಗಳಿಂದ ಅಲ್ಲದೆ ವಿವಿಧ ರಾಜ್ಯಗಳಿಂದ ಬರುತ್ತದೆ ಅಗತ್ಯಕ್ಕೆ ತಕ್ಕಂತೆ ಮೂಲಸೌಕರ್ಯ ಒದಗಿಸುವುದು ನಮ್ಮ ಕರ್ತವ್ಯ. ಮೂಲಸೌಕರ್ಯಗಳಾದ ರಸ್ತೆ, ಕುಡಿಯುವನೀರು, ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಸಚಿವ ಕೃಷ್ಣ ಬೈರೇಗೌಡ,ಶಾಸಕಿ ಮಂಜುಳಾ ಅರವಿಂದ ಲಿಂಬಾವಳಿ, ರಾಜ್ಯಸಭಾ ಸದಸ್ಯ ಮನ್ಸೂರ್ ಅಲಿಖಾನ್, ವಿಧಾನಪರಿಷತ್ ಸದಸ್ಯ ಎ.ಪಿ. ರಂಗನಾಥ್, ಮಾಜಿ ಸಚಿವ ಎಚ್. ನಾಗೇಶ್, ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್, ಪೂರ್ವ ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಮೋಹನ್, ಬಿಬಿಎಂಪಿ ಮಾಜಿ ಸದಸ್ಯ ಉದಯ್ ಕುಮಾರ್, ಮುಖಂಡರಾದ ಆರ್.ರಾಮಕೃಷ್ಣಪ್ಪ, ನಲ್ಲೂರಹಳ್ಳಿ ನಾಗೇಶ್,ಗ್ಯಾರಂಟಿ ಅಧ್ಯಕ್ಷರಾದ ಪ್ರಶಾಂತ್,ಸುರೇಶ್ ಇದ್ದರು