ದೊಡ್ಡಬಳ್ಳಾಪುರ: ದ್ವಿಚಕ್ರ ವಾಹನ ಮತ್ತು ಜೆಸಿಬಿ ನಡುವೆ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ಇಂದು ಬೆಳಗ್ಗೆ ತಾಲ್ಲೂಕಿನ ನಾರಸಿಂಹನಹಳ್ಳಿ ಬಳಿ ನಡೆದಿದೆ.
ಮೃತರನ್ನು ಸುರೇಶ್, 42 ವರ್ಷ ಎಂದು ಗುರುತಿಸಲಾಗಿದೆ. ಘಟನೆ ಸಂಭವಿಸಿದ ತಕ್ಷಣ ಗಾಯಾಳುವನ್ನು ತಾಲ್ಲೂಕಿನ ತಾಯಿ ಮಗು ಸರ್ಕಾರಿ ಆಸ್ಪತ್ರೆಗೆ ಕರೆತರಲಾಯಿತಾದರೂ ಮಾರ್ಗ ಮಧ್ಯದಲ್ಲಿ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಘಟನೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.