ಬೆಂಗಳೂರು: ಅಪಾರ್ಟ್ಮೆಂಟ್‌ನ ಇಂಗುಗುಂಡಿ ಸ್ವಚ್ಛಗೊಳಿಸುವಾಗ ಅಸ್ತಿಪಂಜರ ಪತ್ತೆ!ಅಸ್ತಿಪಂಜರ ಕಂಡು ಸ್ಥಳೀಯರಿಗೆ ಆತಂಕ.
ಕ್ರೈಮ್ಸ್ಥಳೀಯ ಸುದ್ದಿ


ಬೆಂಗಳೂರು: ನಗರದ ಬೇಗೂರಿನ ಅಪಾರ್ಟ್ಮೆಂಟ್ವೊಂದರಲ್ಲಿ ಇಂಗುಗುಂಡಿ ಸ್ವಚ್ಚಗೊಳಿಸುವಾಗ ಅಸ್ಥಿಪಂಜರ ಸಿಕ್ಕಿದೆ. ಮೂಳೆಗಳು, ತಲೆಬುರುಡೆ ರೀತಿಯ ಭಾಗಗಳು ಪತ್ತೆಯಾಗಿದ್ದು, ಮಾಹಿತಿ ಮೇರೆಗೆ ಪೊಲೀಸರು ಯುಡಿಆರ್ ದಾಖಲಿಸಿಕೊಂಡಿದ್ದಾರೆ.
ಆಗ್ನೇಯ ಬೆಂಗಳೂರಿನ ಎಂಎನ್ ಕ್ರೆಡೆನ್ಸ್ ಫ್ಲೋರಾ ಅಪಾರ್ಟ್ಮೆಂಟ್ ಸಂಕೀರ್ಣದಲ್ಲಿ ನಡೆದಿದೆ. ಇಂಗುಗುಂಡಿ ಸ್ವಚ್ಚಗೊಳಿಸುವಾಗ ಕಾರ್ಮಿಕರಿಗೆ ಇವೆಲ್ಲಾ ಸಿಕ್ಕಿದ್ದು, ಅವರು ಒಮ್ಮೆ ಆತಂಕಕ್ಕೆ ಒಳಗಾಗಿದ್ದಾರೆ. ಕೂಡಲೇ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಇದರ ಬಗ್ಗೆ ತನಿಖೆ ನಡೆಯುತ್ತಿದೆ.
ಜೂನ್ 16 ರಂದು ಗುತ್ತಿಗೆ ಕಾರ್ಮಿಕರು ಕಾರು ನಿಲ್ದಾಣದ ಬಳಿಯ ಒಳಚರಂಡಿ ಗುಂಡಿಯನ್ನು ತೆರವುಗೊಳಿಸುತ್ತಿದ್ದಾಗ ಮೂಳೆಗಳು ಕಂಡುಬಂದವು, ಇದರಲ್ಲಿ ತಲೆಬುರುಡೆಯ ತುಣುಕುಗಳು ಸೇರಿವೆ ಎಂದು ಭಾವಿಸಲಾಗಿದೆ. ಅವರು ತಕ್ಷಣ ನಿವಾಸಿಗಳ ಕಲ್ಯಾಣ ಸಂಘದ ಮುಖ್ಯಸ್ಥರಿಗೆ ಮಾಹಿತಿ ನೀಡಿದರು, ನಂತರ ಅವರು ಪೊಲೀಸರನ್ನು ಸಂಪರ್ಕಿಸಿದರು ಎಂದು ತಿಳಿದುಬಂದಿದೆ. ವಿಧಿ ವಿಜ್ಞಾನ ಪ್ರಯೋಗಾಲಯದಿಂದ ವರದಿ ಬಂದ ಬಳಿಕ ಈ ಕುರಿತು ಪತ್ತೆಯಾಗಲಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.
ಬೆಂಗಳೂರಿನ ಬೇಗೂರಿನಲ್ಲಿ ಇರುವ ಅಪಾರ್ಟ್ಮೆಂಟ್ವೊಂದರಲ್ಲಿ ಒಳಚರಂಡಿಯಲ್ಲಿ ತಲೆಬುರುಡೆ, ಅಸ್ತಿಪಂಜರ, ಮೂಳೆ ಸೇರಿದಂತೆ ಹಲವು ಭಾಗಗಳು ಪತ್ತೆಯಾಗಿದ್ದು, ಸ್ಥಳೀಯ ನಿವಾಸಿಗಳಲ್ಲಿ ಆತಂಕ ಸೃಷ್ಟಿಯಾಗಿದೆ. ಪೊಲೀಸರು ಸದ್ಯ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಮಾದರಿಗಳನ್ನು ಕಳುಹಿಸಿದ್ದಾರೆ. ವರದಿಯ ಬಳಿಕ ಇದು ಯಾರದ್ದು ಎನ್ನುವ ಸ್ಪಷ್ಪತೆ ಸಿಗಲಿದೆ. ಮೂಳೆಗಳನ್ನು ವಿಶ್ಲೇಷಣೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.