ಸ್ನೇಹಿತರ ಜೊತೆ ಬೇಟೆಗೆ ಹೋಗಿದ್ದ ವೇಳೆ ಮಿಸ್ ಫೈರಿಂಗ್. ಯುವಕ ಸಾವು.
ರಾಜ್ಯ


ತೀರ್ಥಹಳ್ಳಿ: ಬೇಟೆಗೆಂದು ಹೋಗಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಗುಂಡು ತಗಲಿ ಯುವಕನೋರ್ವ ಸಾವನ್ನಪ್ಪಿದ ಘಟನೆ ತೀರ್ಥಹಳ್ಳಿ ತಾಲೂಕಿನ ಕಟ್ಟೆಹಕ್ಕಲಿನಲ್ಲಿ ಬುಧವಾರ ವರದಿಯಾಗಿದೆ.
ಗೌತಮ್ (25 ವರ್ಷ) ಮೃತಪಟ್ಟ ಯುವಕ. ತಾಲೂಕಿನ ಬಸವಾನಿ ಸಮೀಪದ ಕೊಳಾವರ ಗ್ರಾಮದ ಯುವಕ ಕಟ್ಟೆಹಕ್ಕಲಿಗೆ ತಡರಾತ್ರಿ ನಾಲ್ವರು ಸ್ನೇಹಿತರೊಂದಿಗೆ ಗೌತಮ್ ಕಾರಿನಲ್ಲಿ ತೆರಳಿದ್ದ. ವಾಹನವನ್ನು ದಾರಿ ಮಧ್ಯೆ ನಿಲ್ಲಿಸಿ ಉಳಿದ ಸ್ನೇಹಿತರನ್ನು ಅಲ್ಲಿಯೇ ಬಿಟ್ಟು ಬಂದೂಕು ಹಿಡಿದುಕೊಂಡು ಸಮೀಪದ ಗುಡ್ಡ ಏರಿದ್ದಾನೆ.
ಬಂದೂಕಿನ ಟ್ರಿಗರ್ ಎಳೆದು ಗುಡ್ಡ ಹತ್ತುವಾಗ ಕಾಲು ಜಾರಿ ಕೆಳಗೆ ಬಿದ್ದ ವೇಳೆ ಬಂದೂಕಿನಿಂದ ಗುಂಡು ಸಿಡಿದು ಕುತ್ತಿಗೆ ಮೂಲಕ ಮುಖವನ್ನು ಸೀಳಿಕೊಂಡು ಹೋಗಿ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ